/newsfirstlive-kannada/media/media_files/2025/09/29/kr-pura-lorry-accident-2025-09-29-13-21-26.jpg)
ಬೆಂಗಳೂರಿನ ಕೆ.ಆರ್. ಪುರ ಬಳಿ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು
ಬೆಂಗಳೂರಿನ ಹೊರವಲಯದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನ ಕೆ.ಆರ್.ಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬೂದಿಗೆರೆ ಕ್ರಾಸ್ ನಲ್ಲಿ ಅಪಘಾತ ಸಂಭವಿಸಿದೆ. ಕಾಲೇಜು ವಿದ್ಯಾರ್ಥಿನಿ ಧನುಶ್ರೀ ಮೇಲೆ ಲಾರಿ ಹರಿದಿದೆ. ಪರಿಣಾಮವಾಗಿ ಸ್ಥಳದಲ್ಲೇ ವಿದ್ಯಾರ್ಥಿನಿ ಧನುಶ್ರೀ ಸಾವನ್ನಪ್ಪಿದ್ದಾರೆ. ಲಾರಿ ಹರಿದ ತೀವ್ರತೆಗೆ ವಿದ್ಯಾರ್ಥಿನಿಯ ತಲೆ ಛಿದ್ರವಾಗಿದೆ. ಅಪಘಾತದ ಸ್ಥಳಕ್ಕೆ ಕೆ.ಆರ್.ಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಪೊಲೀಸರು ರವಾನಿಸಿದ್ದಾರೆ.
ಬೂದಿಗೆರೆ ಕ್ರಾಸ್ ಬಳಿಯ ರಸ್ತೆಯಲ್ಲಿ ಭಾರಿ ಗುಂಡಿಗಳಿವೆ. ಲಾರಿ, ರಸ್ತೆ ಗುಂಡಿಯನ್ನು ತಪ್ಪಿಸಲು ಹೋಗಿ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಸ್ಕೂಟಿಯಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಲಾರಿ ಹರಿದಿದೆ. ಇದರ ಪರಿಣಾಮವಾಗಿ 22 ವರ್ಷದ ವಿದ್ಯಾರ್ಥಿನಿ ಧನುಶ್ರೀ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಅಪಘಾತಕ್ಕೆ ಬೆಂಗಳೂರಿನ ರಸ್ತೆಗಳ ಗುಂಡಿಗಳೇ ಕಾರಣ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬೆಂಗಳೂರಿನ ರಸ್ತೆ ಗುಂಡಿಗಳೇ ಈಗ ವಾಹನ ಸವಾರರ ಜೀವ ಬಲಿ ಪಡೆಯುತ್ತಿವೆ. ರಸ್ತೆ ಗುಂಡಿಗಳನ್ನು ಮುಚ್ಚಿ ಜನರ ಜೀವ ಬಲಿಯಾಗುವುದನ್ನು ತಪ್ಪಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಯುದ್ದೋಪಾದಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಕೆಲಸ ಮಾಡಬೇಕಾಗಿತ್ತು. ಆದರೇ, ನಮ್ಮ ದೇಶದಲ್ಲಿ ಎಲ್ಲವೂ ನಿಧಾನ, ನಿಧಾನವೇ ಪ್ರಧಾನ ಎಂಬ ಹಾದಿಯಲ್ಲಿ ಅಧಿಕಾರಿಗಳು ಹೋಗುತ್ತಿದ್ದಾರೆ.
ಜನರು ಯಾರಿಗೆ ಹೇಳೋಣ ನಮ್ಮ ಪ್ರಾಬ್ಲಮ್ ಅನ್ನುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.