/newsfirstlive-kannada/media/media_files/2025/10/01/justice-gopala-gowda-birthday02-2025-10-01-18-38-39.jpg)
ನಿ.ನ್ಯಾಯಮೂರ್ತಿ ವಿ.ಗೋಪಾಲಗೌಡ ಹುಟ್ಟುಹಬ್ಬದ ಕಾರ್ಯಕ್ರಮ
ಸುಪ್ರಿಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ ಅವರ 75ನೇ ಹುಟ್ಟುಹಬ್ಬದ ಅಂಗವಾಗಿ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರ ಹೊರವಲಯದ ಚಿನ್ನಸಂದ್ರ ಬಳಿ ಬೃಹತ್ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಹಾಗೂ ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ಆಗಮಿಸುತ್ತಿದ್ದಾರೆ. ಇದರಿಂದಾಗಿ ಭಾರಿ ಸಿದ್ದತೆ ಮಾಡಿಕೊಳ್ಳಲಾಗಿದೆ. ತನ್ನ ನೆಚ್ಚಿನ ನಟನನ್ನ ನೋಡಲು ಲಕ್ಷಾಂತರ ಅಭಿಮಾನಿಗಳು ಆಗಮಿಸುತ್ತಿರುವುದರಿಂದ ಆಯೋಜಕರು ಎಲ್ಲಾ ರೀತಿಯಲ್ಲಿ ತಯಾರಿ ಮಾಡಿಕೊಳ್ತಿದ್ದಾರೆ. ಇತ್ತೀಚೆಗೆ ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ನಡೆಸಿದ ಱಲಿಯ ಕಾಲ್ತುಳಿತದಲ್ಲಿ 41 ಜನ ಮೃತಪಟ್ಟ ನಂತರ ಈ ಕಾರ್ಯಕ್ರಮದಲ್ಲಿ ಜನರ ನಿಯಂತ್ರಣಕ್ಕೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಚಿಂತಾಮಣಿ ತಾಲ್ಲೂಕಿನ ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದ್ದು, ಆಯೋಜಕರು ಹಾಗೂ ಪೊಲೀಸ್ ಇಲಾಖೆ ಭಾರಿ ಸಿದ್ದತೆ ಮಾಡಿಕೊಂಡಿವೆ. ಕಾಲ್ತುಳಿತದಂಥ ದುರಂತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ.
/filters:format(webp)/newsfirstlive-kannada/media/media_files/2025/10/01/justice-gopala-gowda-birthday-2025-10-01-18-40-44.jpg)
ಜಸ್ಟೀಸ್ ವಿ.ಗೋಪಾಲಗೌಡರು ಕರ್ನಾಟಕ ಹೈಕೋರ್ಟ್ ನಲ್ಲಿ ನ್ಯಾಯಮೂರ್ತಿಯಾಗಿದ್ದರು. ಬಳಿಕ ಒರಿಸ್ಸಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ಬಳಿಕ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಈಗಲೂ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯ ರೈತರ ಪರ ಹಾಗೂ ಜನರ ಪರವಾಗಿ ಧ್ವನಿ ಎತ್ತುತ್ತಿದ್ದಾರೆ. ದೇವನಹಳ್ಳಿ ತಾಲ್ಲೂಕಿನ ರೈತರ ಫಲವತ್ತಾದ ಕೃಷಿ ಭೂಮಿಯನ್ನು ಕೆಐಎಡಿಬಿ ಸ್ವಾಧೀನದ ವಿರುದ್ಧ ಜಸ್ಟೀಸ್ ವಿ.ಗೋಪಾಲಗೌಡ ಅವರ ಧ್ವನಿ ಎತ್ತಿ ಸರ್ಕಾರಕ್ಕೆ ಚಾಟಿ ಬೀಸಿದ್ದರು. ಬಳಿಕ ರಾಜ್ಯ ಸರ್ಕಾರ ರೈತರ ಭೂಮಿ ಸ್ವಾಧೀನವನ್ನು ಕೈ ಬಿಟ್ಟಿತ್ತು. ಖಡಕ್ ನ್ಯಾಯಮೂರ್ತಿಯಾಗಿ ನ್ಯಾಯಾಂಗ ಕ್ಷೇತ್ರದಲ್ಲಿ ಹೆಸರು ಗಳಿಸಿದ್ದಾರೆ. ಬಡವರ ಪರ, ಜನರ ಪರವಾದ ಅನೇಕ ತೀರ್ಪುಗಳನ್ನು ಜಸ್ಟೀಸ್ ವಿ.ಗೋಪಾಲಗೌಡ ನೀಡಿದ್ದಾರೆ. ಸಾಮಾಜಿಕ ನ್ಯಾಯ ಎತ್ತಿ ಹಿಡಿಯುವಂಥ ಕೆಲಸವನ್ನು ಜಡ್ಜ್ ಆಗಿ ಮಾಡಿದ್ದು ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಹೀಗಾಗಿ ಈಗ ಜನರು ಹಾಗೂ ಸಂಘ ಸಂಸ್ಥೆಗಳು ಅವರ 75ನೇ ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಆಚರಿಸುತ್ತಿವೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us