/newsfirstlive-kannada/media/media_files/2026/03/06/minority-students-2026-03-06-11-39-42.jpg)
2026-27 ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಇಲಾಖೆಗೆ ರಾಜ್ಯ ಸರ್ಕಾರವು ಭರ್ಜರಿ ಅನುದಾನವನ್ನೇ ಘೋಷಿಸಿದೆ. ಅಲ್ಪಸಂಖ್ಯಾತ ಇಲಾಖೆಗೆ ಬಜೆಟ್ ನಲ್ಲಿ ಸಿಕ್ಕಿದ್ದೇನು ಎಂಬ ಫುಲ್ ಡೀಟೈಲ್ಸ್ ಇಲ್ಲಿದೆ ಓದಿ
ಅಲ್ಪಸಂಖ್ಯಾತರ ಇಲಾಖೆಗೆ ಅನುದಾನ ಘೋಷಣೆ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
ಹೆಚ್ಚಿನ ಬೇಡಿಕೆ ಇರುವ ಜಿಲ್ಲೆಗಳಲ್ಲಿ 150 ಸಂಖ್ಯಾಬಲದ 25 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುವುದು
ಹಾಲಿ ಕಾರ್ಯನಿರ್ವಹಿಸುತ್ತಿರುವ 25 ವಿದ್ಯಾರ್ಥಿನಿಲಯಗಳಲ್ಲಿ 50 ವಿದ್ಯಾರ್ಥಿಗಳ ಸಂಖ್ಯಾಬಲವನ್ನು ಹೆಚ್ಚಿಸಲಾಗುವುದು
ಅಲ್ಪಸಂಖ್ಯಾತರ ವಸತಿ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಇರುವ ಕಾರಣ ಸಂತ ಶಿಶುನಾಳ ಶರೀಫರವರ ಹೆಸರಿನಲ್ಲಿ 10 ಹೊಸ ವಸತಿ ಶಾಲೆಗಳನ್ನು CBSE ಪಠ್ಯಕ್ರಮದಡಿಯಲ್ಲಿ ಪ್ರಾರಂಭಿಸಲಾಗುವುದು
ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ. ಅನುದಾನ ಒದಗಿಸಲಾಗುವುದು
2026-27ನೇ ಸಾಲಿನಲ್ಲಿ 25 ಸಂತ ಶಿಶುನಾಳ ಶರೀಫರ ಹೆಸರಿನಲ್ಲಿ ವಸತಿ ಶಾಲೆಗಳನ್ನು ಹೊಸದಾಗಿ ಪ್ರಾರಂಭಿಸಲಾಗುವುದು
2025-26ನೇ ಸಾಲಿನಲ್ಲಿ 117 ಮೌಲಾನಾ ಆಜಾದ್ ಮಾಧ್ಯ ಶಾಲೆಗಳು ಹಾಗೂ ಉರ್ದು ಶಾಲೆಗಳನ್ನು ಕೆ.ಪಿ.ಎಸ್. ಮಾದರಿಯಲ್ಲಿ 600 ಕೋಟಿ ರೂ.ಗಳ ವೆಚ್ಚದಲ್ಲಿ ಉನ್ನತೀಕರಿಸಲಾಗುತ್ತಿದೆ
ಪ್ರಸಕ್ತ ಸಾಲಿನಲ್ಲಿ ಇನ್ನೂ 100 ಶಾಲೆಗಳನ್ನು 400 ಕೋಟಿ ರೂ.ಗಳ ವೆಚ್ಚದಲ್ಲಿ ಇದೇ ಮಾದರಿಯಲ್ಲಿ ಉನ್ನತೀಕರಿಸಲಾಗುವುದು
ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪೈಕಿ 25 ವಸತಿ ಶಾಲೆಗಳಲ್ಲಿ ಪಿ.ಯು.ಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳನ್ನು ಪ್ರಾರಂಭಿಸಲಾಗುವುದು
18 ಎ.ಪಿ.ಜೆ -ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ ವಾಣಿಜ್ಯ ವಿಭಾಗವನ್ನು ಪ್ರಾರಂಭಿಸಲಾಗುವುದು
ಪರೀಕ್ಷೆಗಳಿಗೆ ಗುಣಮಟ್ಟದ ತರಬೇತಿ ನೀಡಲು ನಾಲ್ಕು ವಸತಿ ಶಾಲೆಗಳನ್ನು Center of Excellence ಸ್ಥಾಪಿಸಲಾಗುವುದು
ಅಲ್ಲದೇ 20 ವಸತಿ ಶಾಲೆಗಳಲ್ಲಿನ ಮಕ್ಕಳಿಗೆ CET/JEE/NEET ವಿಶೇಷ ತರಬೇತಿ ನೀಡಲಾಗುವುದು
ಎಲ್ಲಾ ಸಮುದಾಯಗಳ ವಿದ್ಯಾರ್ಥಿಗಳಿಗೆ ನಿರಂತರ ಕಲಿಕಾ ಅವಕಾಶಗಳನ್ನು ಒದಗಿಸಲು ಮತ್ತು ಜ್ಞಾನವನ್ನು ವೃದ್ಧಿಸಲು ಆಯ್ದ ವಕ್ಸ್ ಆಸ್ತಿಗಳಲ್ಲಿ ಕಲಿಕಾ ಕೇಂದ್ರ ಹಾಗೂ ನಾಗರಿಕ ಸೇವಾ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು
ಉದ್ಯೋಗಸ್ಥ ಮಹಿಳೆಯರ ವಸತಿ ನಿಲಯಗಳಿಗೆ ಹೆಚ್ಚಿನ ಬೇಡಿಕೆ ಇರುವ ಕಾರಣ ಬೆಂಗಳೂರಿನಲ್ಲಿ 100 ಸಂಖ್ಯಾಬಲದ ಉದ್ಯೋಗಸ್ಥ ಮಹಿಳೆಯರ ನಾಲ್ಕು ವಸತಿನಿಲಯಗಳನ್ನು ಪ್ರಾರಂಭಿಸಲಾಗುವುದು
ಜೈನ, ಬೌದ್ಧ ಮತ್ತು ಸಿಖ್ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನವನ್ನು ಮೀಸಲಿರಿಸಲಾಗಿದೆ
ಬೌದ್ಧ ಧರ್ಮದ ಧಮ್ಮಾಚಾರಿಗಳಿಗೆ 6,000 ರೂ.ಗಳ ಮಾಸಿಕ ಗೌರವಧನವನ್ನು ನೀಡಲಾಗುವುದು
ಅಲ್ಪಸಂಖ್ಯಾತ ಸಮುದಾಯದ ನಿರ್ಗತಿಕ 1 100 ಸಂಖ್ಯಾಬಲದ ಎರಡು ಮಹಿಳಾ ವೃದ್ಧಾಶ್ರಮಗಳನ್ನು ಪ್ರಾರಂಭಿಸುವುದಕ್ಕೆ ನೆರವು ನೀಡಲಾಗುವುದು
ಅಲ್ಪಸಂಖ್ಯಾತರ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ತಾಂತ್ರಿ ಹಾಗೂ ಉನ್ನತ ಮಟ್ಟದ ಡಿಜಿಟಲ್ ಶಿಕ್ಷಣವನ್ನು ಪ್ರೋತ್ಸಾಹಿಸಲ 5,000 ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಖರೀದಿಗಾಗಿ ತಲಾ 12 50,000 ರೂ.ಗಳನ್ನು ನೀಡಲಾಗುವುದು
ಅಲ್ಪಸಂಖ್ಯಾತ ಸಮುದಾಯದ ನಿರುದ್ಯೋಗಿ ಯುವಕ ಯುವತಿಯರಿಗೆ ಫಾಸ್ಟ್ ಫುಡ್ ಟ್ರಕ್ ಟ್ರೈಲರ್/ ಮೊಬೈಲ್ ಕಿಚನ ಫುಡ್ ಕಿಯೋಸ್ಕ (Kiosk) ಸೌಲಭ್ಯಗಳನ್ನು ನಿಗಮಗಳ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಘಟಕ ವೆಚ್ಚದ ಶೇ.75 ರಷ್ಟು ಅಥವಾ ಗರಿಷ್ಠ ಮೂರು ಲಕ್ಷ ರೂ.ಗಳ ಸಹಾಯಧನ ನೀಡಲಾಗುವುದು
ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಪ್ರೋತ್ಸಾಹ ನೀಡಲು ಅಲ್ಪಸಂಖ್ಯಾತರ ಮಹಿಳಾ ಕೋ-ಆಪರೇಟಿವ್ ಸೊಸೈಟಿಗಳನ್ನು ಸ್ಥಾಪಿಸಲಾಗುವುದು
ಬೇಡಿಕೆ ಇರುವ ಜಿಲ್ಲೆಗಳಲ್ಲಿ 25 ಹೊಸ ಮೆಟ್ರಿಕ್​​ ವಿದ್ಯಾರ್ಥಿ ನಿಲಯ ಸ್ಥಾಪನೆ
ಸಂತ ಶಿಶುನಾಳ ಶರೀಫರ ಹೆಸರಲ್ಲಿ 10 ಹೊಸ ವಸತಿ ಶಾಲೆಗಳು ಸ್ಥಾಪನೆ
CBSE ಪಠ್ಯಕ್ರಮದ ಅಡಿಯಲ್ಲಿ ವಸತಿ ಶಾಲೆಗಳ ಆರಂಭಕ್ಕೆ 10 ಕೋಟಿ.ಮೀಸಲು
ಮೌಲಾನಾ ಆಜಾದ್​​, ಉರ್ದು ಶಾಲೆಗಳ 600 ಕೋಟಿ ವೆಚ್ಚದಲ್ಲಿ ಉನ್ನತೀಕರಣ
ಪ್ರಸ್ತುತ ಶಾಲೆಗಳನ್ನು 400 ಕೋಟಿ ವೆಚ್ಚದಲ್ಲಿ ಇದೇ ಮಾದರಿಯಲ್ಲಿ ಉನ್ನತೀಕರಣ
ಅಲ್ಪಸಂಖ್ಯಾತ PUC ವಿದ್ಯಾರ್ಥಿಗಳಿಗಾಗಿ K-CET/JEE/NEET ತರಬೇತಿ
20 ವಸತಿ ಶಾಲೆಗಳಲ್ಲಿ ಮಕ್ಕಳಿಗೆ CET/JEE/NEET ವಿಶೇಷ ತರಬೇತಿ
ಬೆಂಗಳೂರಿನಲ್ಲಿ ಸಂಖ್ಯಾಬಲದ ಉದ್ಯೋಗಸ್ಥ ಮಹಿಳೆಯರಿಗೆ 4 ವಸತಿ ನಿಯಲ
ಜೈನ, ಬೌದ್ಧ ಮತ್ತು ಸಿಖ್​ ಸಮುದಾಯಗಳ ಅಭವೃದ್ಧಿಗೆ 100 ಕೋಟಿ. ಮೀಸಲು
ಬೌದ್ಧ ಧರ್ಮದ ಧಮ್ಮಾಚಾರಿಗಳಿಗೆ 6000 ರೂ. ಮಾಸಿಕ ಗೌರವ ಧನ
ಅಲ್ಪಸಂಖ್ಯಾತರ ಸಮುದಾಯದ ನಿರ್ಗತಿಕ ಜನರಿಗೆ 2 ವಸತಿ ನಿಲಯ ಸ್ಥಾಪನೆ ಮಾಡಲಾಗುತ್ತೆ.
ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಡಿಜಿಟಲ್​​ ಶಿಕ್ಷಣ ಪ್ರೋತ್ಸಾಹಿಸಲು ಒತ್ತು
5000 ವಿದ್ಯಾರ್ಥಿಗಳಿಗೆ ಲ್ಯಾಪ್ ​ಟ್ಯಾಪ್ ಖರೀದಿಸಲು 50 ಸಾವಿರ ರೂ
ಬೆಂಗಳೂರಿನ ಕೆಂಗೇರಿಯಲ್ಲಿ ಅಸಿರ್ವನಂ ಬೆನಿಡಿಕ್ಟಿನ್​ ಮೊನಾಸ್ಟರಿ
2 ಎಕರೆ ಜಾಗದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ & ತರಬೇತಿ ಕೇಂದ್ರ
5 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ & ತರಬೇತಿ ಕೇಂದ್ರ ಸ್ಥಾಪನೆ
==
ಹುಬ್ಬಳ್ಳಿ ಹಾಗೂ ಕಲಬುರ್ಗಿಯಲ್ಲಿ ಹಜ್​​ ಭವನ ನಿರ್ಮಾಣ
ಸವಣೂರಿನಲ್ಲಿ ಒಂದು ಹೊಸ ಮಹಿಳಾ ಪಿಯುಸಿ ಕಾಜೇಜು
ಬೀದರ್​​ ನಗರದ ನಾನಕ್​​​ ಗುರುದ್ವಾರದಲ್ಲಿ ಗ್ರಂಥಾಲಯ ಸ್ಥಾಪನೆ
ಹಿಂದಿನ ಸರ್ಕಾರ ಮಂಜೂರು ಮಾಡಿದ್ದ 4.9 ಲಕ್ಷ ಮನೆ ಪೂರ್ಣಗೊಳಿಸಲು ಕ್ರಮ
ಕೊಳಗೇರಿ ನಿವಾಸಿಗಳಿಗೆ ಶಾಶ್ವತ ಸೂರು ಕಲ್ಪಿಸಲು ನಿರ್ಧಾರ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us