/newsfirstlive-kannada/media/media_files/2025/10/03/tiger-killed-in-mm-hills-2025-10-03-14-13-29.jpg)
ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಮತ್ತೊಂದು ಹುಲಿ ಹತ್ಯೆಯ ಘಟನೆ ನಡೆದಿದೆ. ಹನೂರು ಗಸ್ತಿನಲ್ಲಿರುವ ಪಚ್ಚೆದೊಡ್ಡಿ ಗ್ರಾಮದ ಬಳಿ ನಿನ್ನೆ ಸತ್ತ ಹುಲಿಯ ಅರ್ಧ ಕಳೇಬರ ಪತ್ತೆಯಾಗಿದೆ. ಹುಲಿ ಹತ್ಯೆಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಈ ಸಂಬಂಧ ಪಿಸಿಸಿಎಫ್ ನೇತೃತ್ವದ ತಂಡದಿಂದ ತನಿಖೆಗೆ ಆದೇಶ ನೀಡಿದ್ದಾರೆ. ಪಿಸಿಸಿಎಫ್ ಸ್ಮಿತಾ ಬಿಜ್ಜೂರು ನೇತೃತ್ವದಲ್ಲಿ ತಂಡವೊಂದನ್ನು ರಚಿಸಿದ್ದು, ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಲು ಆದೇಶಿಸಿದ್ದಾರೆ. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳು ಹಾಗೂ ಕಳ್ಳಬೇಟೆಗಾರರ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚನೆ ನೀಡಿದ್ದಾರೆ.
ಎಂಟು ದಿನಗಳಲ್ಲಿ ವರದಿ ಸಲ್ಲಿಸಲು ಮತ್ತು ಹುಲಿ ಹಂತಕರನ್ನು ಪತ್ತೆ ಮಾಡಿ ಕಾನೂನು ರೀತ್ಯ ದಂಡನೆ ಕೊಡಿಸಲು ಕ್ರಮವಹಿಸಲು ಆದೇಶ ನೀಡಿದ್ದಾರೆ.
ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟದ ಹನೂರು ವಲಯದಲ್ಲಿ ಹುಲಿ ಹತ್ಯೆ ನಡೆದಿರುವ ಘಟನೆ ಅತ್ಯಂತ ದುಃಖಕರ ಮತ್ತು ಖಂಡನೀಯ. ಈ ಘಟನೆಗೆ ಸಂಬಂಧಿಸಿದಂತೆ ನಾನು ಪಿಸಿಸಿಎಫ್ (ಅರಣ್ಯ ಮುಖ್ಯ ಸಂರಕ್ಷಣಾಧಿಕಾರಿ) ಶ್ರೀಮತಿ ಸ್ಮಿತಾ ಬಿಜ್ಜೂರು ಅವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲು ಮತ್ತು… pic.twitter.com/ug75HGRdpa
— Eshwar Khandre (@eshwar_khandre) October 3, 2025
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.