/newsfirstlive-kannada/media/media_files/2025/09/29/minority-welfare-department-2025-09-29-18-16-04.jpg)
ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದಲ್ಲಿ ಸಾಲ ಪಡೆಯಲು ಅರ್ಜಿ ಆಹ್ವಾನ
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿನಲ್ಲಿ ಶ್ರಮ ಶಕ್ತಿ ಸಾಲ / ಸಹಾಯಧನ ಯೋಜನೆ, ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ, ಟ್ಯಾಕ್ಸಿ / ಗೂಡ್ಸ್ ವಾಹನ ಖರೀದಿ ಸಹಾಯಧನ ಯೋಜನೆ, ವೃತ್ತಿ ಪ್ರೋತ್ಸಾಹ ಸಾಲ / ಸಹಾಯಧನ ಯೋಜನೆ, ಸಾಂತ್ವನ ಯೋಜನೆ , ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ Foreign Education / Overseas Education Loan) ವ್ಯಾಪಾರ / ಉದ್ದಿಮೆಗಳಿಗೆ ನೇರ ಸಾಲ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಿಂದ ಕ್ರಿಶ್ಚಿಯನ್ ಸಮುದಾಯ ಹೊರತುಪಡಿಸಿ (ಅಂದರೆ ಮುಸ್ಲಿಂ, ಜೈನರು, ಬೌದ್ಧರು, ಸಿಖ್ಖರು ಹಾಗೂ ಪಾರ್ಸಿ ಜನಾಂಗದವರಿಂದ ) ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿದಾರರು ಮತೀಯ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿರಬೇಕು. ಕರ್ನಾಟಕ ರಾಜ್ಯದಲ್ಲಿ ಕನಿಷ್ಠ 15 ವರ್ಷದಿಂದ ಖಾಯಂ ನಿವಾಸಿಯಾಗಿರಬೇಕು. ಈ ಹಿಂದೆ ನಿಗಮದ ಸೌಲಭ್ಯವನ್ನು ಪಡೆದವರು ಮತ್ತೆ ಸೌಲಭ್ಯವನ್ನು ಪಡೆಯಲು ಅರ್ಹರಿರುವುದಿಲ್ಲ.
ಆಸಕ್ತರು ವೆಬ್ ಸೈಟ್ https://kmdconline.karnataka.gov.in ನಲ್ಲಿ ಅಕ್ಟೋಬರ್ 16, 2025 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿಯ ಪ್ರತಿ ಹಾಗೂ ದಾಖಲಾತಿಗಳೊಂದಿಗೆ ನಿಗಮದ ಕಛೇರಿಗೆ ಅಕ್ಟೋಬರ್ 10,2025 ರೊಳಗಾಗಿ ಸಲ್ಲಿಸಬಹದು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಬೆಂಗಳೂರು ನಗರ ಜಿಲ್ಲೆ (ದಕ್ಷಿಣ ವಿಭಾಗ), ಹಮೀದ್ ಷಾ ಕಾಂಪ್ಲೆಕ್ಸ್, 2ನೇ ಮಹಡಿ , ಎಸ್.ಎಫ್.2, ಹಲಸೂರು ಗೇಟ್ ಪೊಲೀಸ್ ಸ್ಟೇಷನ್ ಹಿಂಭಾಗ, ಕಬ್ಬನ್ನ ಪೇಟೆ ಮುಖ್ಯ ರಸ್ತೆ, ಬೆಂಗಳೂರು ನಗರ ಜಿಲ್ಲೆ ಅಥವಾ ದೂರವಾಣಿ ಸಂಖ್ಯೆ : 080-22114817 ಅಥವಾ ಸಹಾಯವಾಣಿ ಸಂಖ್ಯೆ : 8277799990 (24x7) ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ದಕ್ಷಿಣ ವಿಭಾಗ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.