Advertisment

ಉಚ್ಚಾಟನೆ ಮಾಡುವ ಅಧಿಕಾರ ಯಾರಿಗೂ ಇಲ್ಲ, ಪರ್ಯಾಯ ಪೀಠ ಕಟ್ಟಲ್ಲ ಎಂದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ

ಕೂಡಲಸಂಗಮದ ಪಂಚಮಸಾಲಿ ಪೀಠದಿಂದ ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳನ್ನು ನಿನ್ನೆ ಉಚ್ಚಾಟಿಸಲಾಗಿದೆ. ಇದರ ಬಗ್ಗೆ ಇಂದು ಕೂಡಲಸಂಗಮಕ್ಕೆ ಬಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಭಕ್ತರ ಜೊತೆ ಸಭೆ ನಡೆಸಿದ್ದಾರೆ. ತಮ್ಮ ಉಚ್ಚಾಟನೆ, ಮುಂದಿನ ಹೆಜ್ಜೆ ಬಗ್ಗೆಯೂ ಮಾತನಾಡಿದ್ದಾರೆ.

author-image
Chandramohan
BASAVA JAYA MRUTUNJAYA SWAMIJI

ಪೀಠದಿಂದ ಉಚ್ಚಾಟನೆ ಬಗ್ಗೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದೇನು?

Advertisment
  • ಪೀಠದಿಂದ ಉಚ್ಚಾಟನೆ ಬಗ್ಗೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದೇನು?
  • ಉಚ್ಚಾಟನೆ ಅಧಿಕಾರ ಯಾರಿಗೂ ಇಲ್ಲ, ಪರ್ಯಾಯ ಪೀಠ ಕಟ್ಟಲ್ಲ ಎಂದ ಸ್ವಾಮೀಜಿ
  • ಎಐ ಬಳಸಿ ವಿಡಿಯೋ ಕ್ರಿಯೇಟ್ ಮಾಡಿರಬಹುದು ಎಂದ ಸ್ವಾಮೀಜಿ

ನಿನ್ನೆಯಷ್ಟೇ ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದ ಪಂಚಮಸಾಲಿ ಪೀಠದಿಂದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ಉಚ್ಚಾಟಿಸುವ ತೀರ್ಮಾನವನ್ನು ಪಂಚಮಸಾಲಿ ಪೀಠದ ಟ್ರಸ್ಟ್ ತೆಗೆದುಕೊಂಡಿದೆ. ಶಾಸಕ ವಿಜಯಾನಂದ ಕಾಶಪ್ಪನವರ್ ಅಧ್ಯಕ್ಷತೆಯ ಟ್ರಸ್ಟ್ ನ ಧರ್ಮದರ್ಶಿಗಳು ಸಭೆ ನಡೆಸಿ ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳನ್ನು ಪೀಠಾಧಿಪತಿ ಸ್ಥಾನದಿಂದ ಉಚ್ಚಾಟಿಸಿದ್ದರು. ಇದಾದ ಬಳಿಕ ಇಂದು  ಬಸವಜಯ ಮೃತ್ಯುಂಜಯ ಸ್ವಾಮೀಜಿ ಕೂಡಲಸಂಗಮಕ್ಕೆ ಆಗಮಿಸಿದ್ದರು. ಸಂಗಮನಾಥ ದರ್ಶನ ಪಡೆದು, ಬಳಿಕ ಆಲದ ಮರದ ಕೆಳಗೆ ಭಕ್ತರ ಜೊತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳನ್ನು ಪೀಠದಿಂದ ಉಚ್ಚಾಟಿಸಿದ್ದನ್ನು ಭಕ್ತರು ಖಂಡಿಸಿದ್ದರು. 
ಬಳಿಕ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಾಧ್ಯಮಗಳ ಜೊತೆ ಮಾತನಾಡಿದ್ದರು. 
ನಮ್ಮನ್ನ ಉಚ್ಚಾಟನೆ ಮಾಡೋ ಅಧಿಕಾರ ಈ ಜಗತ್ತಿನಲ್ಲಿ ಯಾರಿಗೂ ಇಲ್ಲ.ನಾನು ಭಕ್ತರ ಹೃದಯದಲ್ಲಿ ಪೀಠ ಕಟ್ಟಿದ್ದೇನೆ.  ಪೀಠಕ್ಕೂ ಟ್ರಸ್ಟ್ ಗೂ ಯಾವುದೇ ಸಂಬಂಧ ಇಲ್ಲ. ಪೀಠವನ್ನ ಯಾವುದೇ ಕಲ್ಲು ಮಣ್ಣಿನಲ್ಲಿ ಕಟ್ಟಿಲ್ಲ. ಭಕ್ತರ ಹೃದಯದಲ್ಲಿ ಪೀಠ ಕಟ್ಟಿದ್ದೇನೆ. ಭಕ್ತರ ತೀರ್ಮಾನವೇ ಅಂತಿಮ ತೀರ್ಮಾನ. ಸಮಾಜ ಬಾಂಧವರನ್ನ ಕೂಡಿಸುತ್ತೇನೆ.  ಎಲ್ಲರೂ ಹೇಗೆ ಹೇಳ್ತಾರೆ ಹಾಗೆ ಮಾಡ್ತೇನೆ. ಸೃಷ್ಠಿಕರ್ತ ಪರಮಾತ್ಮನಿಗೆ ಬಿಟ್ಟರೇ, ನಮ್ಮನ್ನು ಉಚ್ಚಾಟನೆ ಮಾಡುವ ಅಧಿಕಾರ ಯಾರಿಗೂ ಇಲ್ಲ. ಪರಮಾತ್ಮನ ಸ್ವರೂಪಿಯಾದ ಭಕ್ತರಿಗೆ ಮಾತ್ರ ಉಚ್ಛಾಟನೆ ಅಧಿಕಾರ ಇದೆ. ನಾನು  ಕೂಡಲಸಂಗಮದಲ್ಲೇ ಇರುತ್ತೇನೆ ಎಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. 
ಇಲ್ಲಿಂದಲೇ ಸಮಾಜ ಸಂಘಟನೆ ಮಾಡ್ತೇನೆ. ಕೂಡಲಸಂಗಮ &   ದಾವಣಗೆರೆಯಲ್ಲಿ ಭಕ್ತರು ಕೊಟ್ಟ ಜಾಗ  ಮಾತ್ರ ನನ್ನ ಹೆಸರಲ್ಲಿದೆ. ಮತ್ತೆಲ್ಲೂ ನನ್ನ ಹೆಸರಲ್ಲಿ ಜಾಗ ಇಲ್ಲ.  ಒಂದು ವೇಳೆ ಜಾಗ ಮಾಡಬೇಕು ಅಂತ ಮನಸ್ಸು ಮಾಡಿದ್ರೆ,  ಜಿಲ್ಲೆಗೊಂದು ಅಲ್ಲ,, ಪ್ರತಿ ಗ್ರಾಮಕ್ಕೊಂದು ಮಾಡುತ್ತಿದ್ದೆ. 
ಇತ್ತೀಚಿನ ಎಐ ತಂತ್ರಜ್ಞಾನ ಬಳಸಿ ವಿಡಿಯೋ ಕ್ರಿಯೇಟ್ ಮಾಡಿರಬಹುದು.  ಅದಕ್ಕೆ ನಾವು ಹೆದರುವುದಿಲ್ಲ, ಕುಗ್ಗುವುದಿಲ್ಲ. ಈ ಘಟನೆಯಿಂದ ನನ್ನ ಭಕ್ತರಿಗೆ ನೋವಾಗಿದೆ. ನನ್ನ ಭಕ್ತರಿಗೆ ನೋವಾಗಿದೆ ಅಂತ ನನಗೆ ನೋವಾಗಿದೆಯೇ ವಿನಃ ಉಚ್ಛಾಟನೆ ಮಾಡಿದ್ರಲಾ ಅಂತ ನಾನು‌ ನೊಂದಿಲ್ಲ. ನಾನು ಇದೀಗ ಇನ್ನಷ್ಟು ಸ್ವತಂತ್ರನಾಗಿದ್ದೇನೆ ಎನ್ನುವ ಖುಷಿ ಇದೆ. ಪರ್ಯಾಯ ಪೀಠ ಕಟ್ಟಲ್ಲ, ಇದೇ ಪೀಠ ಇರುತ್ತೆ. ಟ್ರಸ್ಟ್ ಮಾತ್ರ ಅವರಿಗೆ ಸಂಬಂಧಿಸಿದ್ದು,  ಇದೇ ಪೀಠ  ಇರುತ್ತೆ. ಹೊಸ ಮಠ ಕಟ್ಟುವ ಬಗ್ಗೆ ಹಿರಿಯರ ಸಭೆ ಕರೆಯುತ್ತೇನೆ. ನಂತರ ರಾಜ್ಯ ಮಟ್ಟದ ಭಕ್ತರ ಸಭೆ ಕರೆದು, ಅವ್ರು ಏನ್ ಹೇಳ್ತಾರೆ ಅದನ್ನ ಮಾಡ್ತೇನೆ. ಭಕ್ತರ ನಿರ್ಧಾರವೇ ಅಂತಿಮ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.  

Advertisment


ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ. 

Basava Jaya Mruthyunjaya Swamiji
Advertisment
Advertisment
Advertisment