/newsfirstlive-kannada/media/media_files/2025/08/21/sameer-m-d-2025-08-21-14-58-21.jpg)
ಯೂ ಟ್ಯೂಬರ್ ಸಮೀರ್ ಮನೆಯಲ್ಲಿ ಪೊಲೀಸರಿಂದ ಶೋಧ ಕಾರ್ಯಾಚರಣೆ
ಧರ್ಮಸ್ಥಳ ಕೇಸ್ ಬಗ್ಗೆ ಯೂಟ್ಯೂಬ್ ವಿಡಿಯೋ ಮಾಡಿದ್ದ ಸಮೀರ್ ಮನೆಗೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟ ಸಮೀಪವಿರುವ ಸಮೀರ್ ಮನೆಗೆ ಪೊಲೀಸರು ಭೇಟಿ ನೀಡಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಸಂಬಂಧ ಪೊಲೀಸರು ಸಮೀರ್ ಮನೆಗೆ ಭೇಟಿ ನೀಡಿದ್ದಾರೆ.
ಮೊದಲಿಗೆ ಸಾಕಷ್ಟು ಬಾರಿ ಕರೆದರೂ ಯಾರು ಬಾಗಿಲು ತೆಗೆಯದ ಕಾರಣ ಪೊಲೀಸರು ವಾಪಸ್ ಬಂದಿದ್ದರು. ಆದರೇ, ಯೂಟ್ಯೂಬರ್ ಸಮೀರ್ ಮನೆಯಲ್ಲೇ ಇದ್ದ. ಸಮೀರ್ ಗೆ ಕಾಲ್ ಮಾಡಿದ ಪೊಲೀಸರು, ಮನೆಯ ಬಾಗಿಲು ತೆಗೆಯುವಂತೆ ಸೂಚಿಸಿದ್ದಾರೆ. ನಂತರ ಸಮೀರ್ ಮನೆಯ ಬಾಗಿಲು ತೆಗೆದಿದ್ದಾನೆ. ಮನೆಯ ಒಳಗೆ ಹೋದ ಬೆಳ್ತಂಗಡಿ ಪೊಲೀಸರು, ಯೂಟ್ಯೂಬರ್ ಸಮೀರ್‌ನ ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಆರ್ಟಿಫಿಷಿಯಲ್ ಇಂಟಲಿಜೆನ್ಸ್ ವಿಡಿಯೋ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ನಾಗೇಶ್ ಕದ್ರಿ ಮತ್ತು ತಂಡದಿಂದ ಪರಿಶೀಲನೆ ಕಾರ್ಯ ನಡೆದಿದೆ. ಎಫ್.ಎಸ್.ಎಲ್ ವಿಭಾಗದ ಸೋಕೊ ಸಿಬ್ಬಂದಿ ಜೊತೆಯಲ್ಲಿ ಪರಿಶೀಲನೆ ನಡೆದಿದೆ. ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಶೋಧ ಮತ್ತು ಪರಿಶೀಲನೆ ಮಾಡಲಾಗಿದೆ. ಪ್ರಕರಣದಲ್ಲಿ ವಿಡಿಯೋ ಮಾಡಲು ಬಳಸಿದ ಕಂಪ್ಯೂಟರ್ ಮತ್ತು ಮೊಬೈಲ್ ಫೋನ್ ಪರಿಶೀಲನೆ ಮಾಡಲಾಗಿದೆ.