/newsfirstlive-kannada/media/media_files/2025/10/11/bng_rain-2025-10-11-07-06-51.jpg)
ಅರಬ್ಬಿ ಸಮುದ್ರದಲ್ಲಿ ರೂಪುಗೊಳ್ಳುತ್ತಿರುವ ಸೈಕ್ಲೋನ್ ನಿಂದ ಮಳೆಯ ಮುನ್ಸೂಚನೆ
ಅರಬ್ಬಿ ಸಮುದ್ರದ ಮೇಲೆ ಚಂಡಮಾರುತದ ಪರಿಚಲನೆ ಬೆಳೆಯುತ್ತಿದ್ದು, ದಕ್ಷಿಣ ಭಾರತಕ್ಕೆ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿದೆ. ವ್ಯವಸ್ಥೆಯು ತೀವ್ರಗೊಳ್ಳುತ್ತಿದ್ದಂತೆ ಕೇರಳ ಮತ್ತು ನೆರೆಯ ರಾಜ್ಯಗಳಿಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.
ಕೇರಳ, ಕರ್ನಾಟಕದ ಒಳನಾಡು, ತಮಿಳುನಾಡು, ಒಡಿಶಾ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದ್ದು, ಈ ಪ್ರದೇಶಗಳಿಗೆ ಪ್ರಸ್ತುತ ಯೆಲ್ಲೋ ಆಲರ್ಟ್ ನೀಡಲಾಗಿದೆ. ಮಳೆಯ ಜೊತೆಗೆ, ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ. ಅಕ್ಟೋಬರ್ 18ರವರೆಗೆ ಕರ್ನಾಟಕದ ಒಳನಾಡು ಪ್ರದೇಶಗಳಿಗೆ ಮಳೆಯ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಹೀಗಾಗಿ ರೈತರು ಮತ್ತು ಜನರು ಮಳೆಯ ಮುನ್ನೆಚ್ಚರಿಕೆಯ ಆಧಾರದ ಮೇಲೆ ತಮ್ಮ ಕೃಷಿ ಚಟುವಟಿಕೆ, ಇತರೆ ಚಟುವಟಿಕೆಗಳನ್ನು ಪ್ಲ್ಯಾನ್ ಮಾಡಿಕೊಳ್ಳುವುದು ಉತ್ತಮ. ಕಳೆದ ವಾರ ಕೂಡ ದಕ್ಷಿಣ ಕರ್ನಾಟಕ ಭಾಗದಲ್ಲಿ ಎರಡು ಮೂರು ದಿನ ಭಾರಿ ಮಳೆಯಾಗಿತ್ತು. ಚಿತ್ರದುರ್ಗದ ಹೊಸದುರ್ಗ ತಾಲ್ಲೂಕಿನಲ್ಲಿ 195 ಮಿಲಿಮೀಟರ್ ನಷ್ಟು ಭಾರಿ ಮಳೆಯಾಗಿತ್ತು. ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು, ಕೋಲಾರ, ಬೆಂಗಳೂರು ದಕ್ಷಿಣ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.