ನವಂಬರ್ ನೊಳಗೆ ಬೆಂಗಳೂರಿನ ರಸ್ತೆಗುಂಡಿ ಮುಚ್ಚಲು ಜಿಬಿಎ ಅಧಿಕಾರಿಗಳಿಗೆ ಡಿಸಿಎಂ ಡಿಕೆಶಿ ಸೂಚನೆ

ಬೆಂಗಳೂರಿನ ರಸ್ತೆ ಗುಂಡಿಗಳಿಂದಾಗಿ ಔಟರ್ ರಿಂಗ್ ರೋಡ್ ನಲ್ಲಿರುವ ತಮ್ಮ ಕಂಪನಿಯನ್ನು ಬೇರೆಡೆಗೆ ಸ್ಥಳಾಂತರ ಮಾಡುವುದಾಗಿ ಬ್ಲಾಕ್ ಬಕ್ ಕಂಪನಿಯ ರಾಜೇಶ್ ಟ್ವೀಟ್ ಮಾಡಿದ್ದರು. ಈಗ ರಸ್ತೆ ಗುಂಡಿ ಮುಚ್ಚುವುದಾಗಿ ಡಿಸಿಎಂ ಡಿಕೆಶಿ ಹೇಳಿದ್ದಾರೆ.

author-image
Chandramohan
bangalore potholes

ನವಂಬರ್ ನೊಳಗೆ ರಸ್ತೆ ಗುಂಡಿ ಮುಚ್ಚಲು ಡಿಕೆಶಿ ಸೂಚನೆ

Advertisment
  • ನವಂಬರ್ ನೊಳಗೆ ರಸ್ತೆ ಗುಂಡಿ ಮುಚ್ಚಲು ಡಿಕೆಶಿ ಸೂಚನೆ
  • ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಜಿಬಿಎಗೆ ಡಿಕೆಶಿ ಸೂಚನೆ
  • ರಸ್ತೆ ಹಾಳಾದರೇ, ಗುತ್ತಿಗೆದಾರರೇ ಹೊಣೆ ಎಂದ ಡಿಸಿಎಂ ಡಿಕೆಶಿ


ಬರೀ ರಸ್ತೆ ಗುಂಡಿ, ಧೂಳು ಬೆಂಗಳೂರು ಖಾಲಿ ಮಾಡುತ್ತೇವೆಂಬ ಬ್ಲ್ಯಾಕ್ ಬಕ್ ಕಂಪನಿ ಟ್ವೀಟ್ ಬೆನ್ನಲ್ಲೆ ಬೆಂಗಳೂರು ಉಸ್ತುವಾರಿ ಸಚಿವ, ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. 
ಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆಯನ್ನು ಬಗೆಹರಿಸಲು ನವೆಂಬರ್ ಒಳಗೆ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗುತ್ತಿಗೆದಾರರಿಗೆ ಅಂತಿಮ ಗಡುವು ನೀಡಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. 
ಸ್ವಚ್ಛ ಬೆಂಗಳೂರು ಹಾಗೂ ಸುಗಮ ಸಂಚಾರವೇ ನಮ್ಮ ಗುರಿಯಾಗಿರುವುದರಿಂದ ಆದಷ್ಟು ಬೇಗ ರಸ್ತೆ ಗುಂಡಿಗಳಿಗೆ ಜಿಬಿಎ ಮುಕ್ತಿ ನೀಡಲಿದೆ.  694 ಕೋಟಿ ರೂ. ವೆಚ್ಚದಲ್ಲಿ 349 ಕಿ.ಮೀ ಉದ್ದದ 182 ರಸ್ತೆಗಳ ಬ್ಲ್ಯಾಕ್ ಟಾಪಿಂಗ್ ಕಾಮಗಾರಿ ನಡೆಸಲಾಗುತ್ತಿದೆ. ಕಾಮಗಾರಿ ಪ್ರಗತಿಯಲ್ಲಿರುವ ರಸ್ತೆಗಳಲ್ಲಿ ನೀರು ನಿಲ್ಲದಂತೆ, ಗುಂಡಿಗಳು ಇಲ್ಲದಂತೆ ಡಾಂಬರೀಕರಣ ಮಾಡಲು ಸೂಚನೆ ನೀಡಲಾಗಿದೆ. ನವೆಂಬರ್‌ನೊಳಗೆ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. 

ಇದನ್ನು ಓದಿ  ‘ಬರೀ ರಸ್ತೆ ಗುಂಡಿ, ಧೂಳು ಬೆಂಗಳೂರು ಖಾಲಿ ಮಾಡ್ತೀವಿ’ ಎಂದ ಬ್ಲ್ಯಾಕ್‌ಬಕ್ ಕಂಪನಿ, ಭಾರೀ ಆಕ್ರೋಶ

401 ಕಿ.ಮೀ ಉದ್ದದ 178 ರಸ್ತೆಗಳು ದೋಷಮುಕ್ತವಿದ್ದು, ಅಲ್ಲಲ್ಲಿ ಬಿದ್ದಿರುವ ಗುಂಡಿ ಮತ್ತು ಮೇಲ್ಮ ಪದರ ಹಾಳಾಗಿದ್ದರೆ ಗುತ್ತಿಗೆದಾರರೇ ದುರಸ್ತಿಪಡಿಸಲು ಸೂಚನೆ ನೀಡಲಾಗಿದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. 



ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ. 

DCM DKS ON BANGALORE POTHOLES
Advertisment