/newsfirstlive-kannada/media/media_files/2025/08/23/veerendra-pappy-house-cash-seize04-2025-08-23-14-33-15.jpg)
ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಇ.ಡಿ.ಯಿಂದ ಬಂಧನ, 12 ಕೋಟಿ ಹಣ ಜಫ್ತಿ
ನಿನ್ನೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ, ಕಚೇರಿ ಸೇರಿದಂತೆ 31 ಕಡೆ ದಾಳಿ ನಡೆಸಿದ್ದ ಇ.ಡಿ.(ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಇಂದು ಶಾಸಕ ವೀರೇಂದ್ರ ಪಪ್ಪಿಯನ್ನು ಸಿಕ್ಕಿಂನ ಗ್ಯಾಂಗ್ಟಕ್ ನಲ್ಲೇ ಬಂಧಿಸಿದ್ದಾರೆ. ಅಲ್ಲಿಂದ ಟ್ರಾನ್ಸಿಟ್ ರಿಮ್ಯಾಂಡ್ ಪಡೆದು, ಬೆಂಗಳೂರು ಕೋರ್ಟ್ ಗೆ ಹಾಜರುಪಡಿಸಲು ಕರೆ ತರುತ್ತಿದ್ದಾರೆ.
ಇನ್ನೂ ವೀರೇಂದ್ರ ಪಪ್ಪಿಯ ಬೆಂಗಳೂರು, ಚಿತ್ರದುರ್ಗದ ಮನೆ ಮೇಲೆ ದಾಳಿ ನಡೆಸಿದಾಗ ಅಪಾರ ಪ್ರಮಾಣದ ನಗದು ಹಣ ಪತ್ತೆಯಾಗಿದೆ.
ವೀರೇಂದ್ರ ಪಪ್ಪಿ ಮನೆಯಲ್ಲಿ ಬರೋಬ್ಬರಿ 12 ಕೋಟಿ ರೂಪಾಯಿ ನಗದು ಹಣ ಪತ್ತೆಯಾಗಿದೆ. ಇದರಲ್ಲಿ 1 ಕೋಟಿ ರೂಪಾಯಿ ವಿದೇಶಿ ಕರೆನ್ಸಿ ಕೂಡ ಪತ್ತೆಯಾಗಿರುವುದು ಸೇರಿದೆ. ಇನ್ನೂ 6 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಪತ್ತೆಯಾಗಿದೆ. ಇವೆಲ್ಲವನ್ನೂ ಇ.ಡಿ. ಅಧಿಕಾರಿಗಳು ಜಫ್ತಿ ಮಾಡಿದ್ದಾರೆ.
ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆಯ ಲಾಕರ್ ನಲ್ಲಿದ್ದ 12 ಕೋಟಿ ಹಣ, ಚಿನ್ನಾಭರಣ
ಜೊತೆಗೆ 10 ಕೆಜಿ ಬೆಳ್ಳಿಯನ್ನು ಇ.ಡಿ. ಅಧಿಕಾರಿಗಳು ಜಫ್ತಿ ಮಾಡಿದ್ದಾರೆ. ಪಿಎಂಎಲ್‌ಎ ಕಾಯಿದೆ 2002 ರಡಿ ನಾಲ್ಕು ವಾಹನಗಳನ್ನು ಜಫ್ತಿ ಮಾಡಲಾಗಿದೆ. ವೀರೇಂದ್ರ ಪಪ್ಪಿ ಹಾಗೂ ಸೋದರರಿಗೆ ಸೇರಿದ 17 ಬ್ಯಾಂಕ್ ಖಾತೆ, 2 ಬ್ಯಾಂಕ್ ಲಾಕರ್ ಗಳನ್ನು ಸೀಜ್ ಮಾಡಲಾಗಿದೆ. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹಾಗೂ ಸೋದರ ಕೆ.ಸಿ.ನಾಗರಾಜ್, ಸೋದರನ ಮಗ ಪೃಥ್ವಿ ದುಬೈನಲ್ಲಿ ಆನ್ ಲೈನ್ ಗೇಮಿಂಗ್ ಬ್ಯುಸಿನೆಸ್ ಅನ್ನು ನಿರ್ವಹಿಸುತ್ತಿದ್ದರು ಎಂದು ಇ.ಡಿ. ಹೇಳಿದೆ. ಸಿಕ್ಕಿಂನ ಗ್ಯಾಂಗ್ಟಕ್ ನಲ್ಲಿ ಕ್ಯಾಸಿನೋ ಗಾಗಿ ಜಾಗ ಲೀಸ್ ಗೆ ಪಡೆಯಲು ವೀರೇಂದ್ರ ಪಪ್ಪಿ ಸಿಕ್ಕಿಂಗೆ ಹೋಗಿದ್ದರು ಎಂದು ಇ.ಡಿ. ಹೇಳಿದೆ.
ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆಯಲ್ಲಿ ಜಫ್ತಿಯಾದ ವಿದೇಶಿ ಕರೆನ್ಸಿ ಹಣ
ಇದೆಲ್ಲವನ್ನೂ ಇ.ಡಿ. ಅಧಿಕಾರಿಗಳು ವಶಪಡಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ವೀರೇಂದ್ರ ಪಪ್ಪಿ ಹಾಗೂ ಸೋದರ ಆಕ್ರಮವಾಗಿ ಆನ್ ಲೈನ್ ಬೆಟ್ಟಿಂಗ್ ಸೈಟ್ ಹಾಗೂ ಆಫ್ ಲೈನ್ ಬೆಟ್ಟಿಂಗ್ ನಡೆಸುತ್ತಿದ್ದರು. ಇದರ ಹಣವನ್ನು ಆಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ ಎಂದು ಇ.ಡಿ. ಅಧಿಕಾರಿಗಳು ಹೇಳಿದ್ದಾರೆ. ಇದರ ಬಗ್ಗೆ ತನಿಖೆಯನ್ನು ಮುಂದುವರಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ