Advertisment

ಡಿ.ಜೆ.ಹಳ್ಳಿ ಇನ್ಸ್ ಪೆಕ್ಟರ್ ವಿರುದ್ಧ ರೇಪ್ ಕೇಸ್ ಎಫ್‌ಐಆರ್ ದಾಖಲು: ASI ಪ್ರಕಾಶ್ ವಿರುದ್ಧವೂ ಎಫ್‌ಐಆರ್‌ ದಾಖಲು

ಬೆಂಗಳೂರಿನ ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸುನೀಲ್ ವಿರುದ್ಧ ರೇಪ್ ಕೇಸ್ ದಾಖಲಾಗಿದೆ. ಬೆಂಗಳೂರಿನ ಗೋವಿಂದಪುರ ಪೊಲೀಸ್ ಠಾಣೆಗೆ ಸಂತ್ರಸ್ಥ ಯುವತಿ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಇನ್ಸ್ ಪೆಕ್ಟರ್ ಸುನೀಲ್, ಎಎಸ್‌ಐ ಪ್ರಕಾಶ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

author-image
Chandramohan
RAPE CASE AGAINST INSPECTOR SUNIL

ಡಿ.ಜೆ.ಹಳ್ಳಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಸುನೀಲ್ ವಿರುದ್ಧ ಎಫ್‌ಐಆರ್ ದಾಖಲು

Advertisment

ಬೆಂಗಳೂರಿನ  ಡಿ.ಜೆ ಹಳ್ಳಿ ಫೊಲೀಸ್ ಠಾಣೆಯ ಇನ್ಸ್ ಪೆಕ್ಟರ್  ಸುನೀಲ್‌  ಮೇಲೆ  ಕೊನೆಗೂ ಅತ್ಯಾಚಾರ ಕೇಸ್ ದಾಖಲಾಗಿದೆ. ಸಂತ್ರಸ್ಥ ಯುವತಿ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಸುನೀಲ್ ವಿರುದ್ಧ ರೇಪ್ ಕೇಸ್ ದಾಖಲಾಗಿದೆ. 

Advertisment

ಸಂತ್ರಸ್ಥ ಮಹಿಳೆ‌  ಬೆಂಗಳೂರಿನ  ಗೋವಿಂದ ಪುರ ಪೊಲೀಸ್ ಠಾಣೆಗೆ ಇನ್ಸ್ ಪೆಕ್ಟರ್ ಸುನೀಲ್ ವಿರುದ್ಧ ದೂರು ನೀಡಿದ್ದರು. ಈ  ದೂರಿನ ಮೇರೆಗೆ ಎಫ್ ಐಆರ್ ದಾಖಲಾಗಿದೆ. ಸಂತ್ರಸ್ಥೆಗೆ ಗೋವಿಂದಪುರ ಪೊಲೀಸ್ ಠಾಣೆಯ ಪೊಲೀಸರು ಈಗಾಗಲೇ  ಮೆಡಿಕಲ್  ಪರೀಕ್ಷೆಯನ್ನು ವೈದ್ಯರ ಬಳಿ ಮಾಡಿಸಿದ್ದಾರೆ. 
ಪೊಲೀಸ್ ಇನ್ಸ್ ಪೆಕ್ಟರ್ ಸುನೀಲ್ ಮದುವೆ ಆಗುವುದಾಗಿ ನಂಬಿಸಿ, ತನ್ನ ಮೇಲೆ ರೇಪ್ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಜೊತೆಗೆ ತನ್ನನ್ನು ಮದುವೆ ಆಗದೇ ವಂಚನೆ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.  ಕಳೆದ ಒಂದು ವರ್ಷದಲ್ಲಿ ಮೂರು ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆಂಬ ಆರೋಪ ಮಾಡಿದ್ದಾರೆ. 
ಮನೆ‌ ಕೊಡಿಸುತ್ತೇನೆ,  ಬ್ಯೂಟಿ ಪಾರ್ಲರ್ ಓಪನ್ ಮಾಡಿ ಕೊಡ್ತೀನಿ ಅಂಥೇಳಿ ವಂಚನೆ ಮಾಡಿದ್ರು…ಎಂದು ಮಹಿಳೆ ದೂರು ನೀಡಿದ್ದಾರೆ.  ಅಲ್ಪಸಂಖ್ಯಾತ ಸಮುದಾಯದ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿರುವ ಆರೋಪ ಇನ್ಸ್ ಪೆಕ್ಟರ್ ಸುನೀಲ್ ಮೇಲಿದೆ. ಜೊತೆಗೆ ರಿಜಿಸ್ಟರ್ ಮ್ಯಾರೇಜ್ ಆಗುತ್ತೇನೆ ಎಂದು ಹೇಳಿ ಮೋಸ ಮಾಡಿದ್ದಾರೆಂದು ಮಹಿಳೆ ಆರೋಪಿಸಿದ್ದಾರೆ. 

ಗೋವಿಂದಪುರದ ಖಾಸಗಿ ಹೊಟೇಲ್, 8ನೇ ಮೈಲಿಯಲ್ಲಿರುವ ತಮ್ಮ ಮನೆ ಮತ್ತು ಹೋಟೆಲ್ ಗೆ‌ ಕರೆಸಿ ಅತ್ಯಾಚಾರ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.  ಖಾಸಗಿ ಫೋಟೋ, ವಿಡಿಯೋಗಳನ್ನು ಇಟ್ಟುಕೊಂಡು ಬ್ಲಾಕ್ ಮೇಲ್  ಮಾಡಿದ್ದಾರೆ ಎಂದು ಕೂಡ ಮಹಿಳೆ ಆರೋಪಿಸಿದ್ದಾರೆ.

ನಮ್ಮ ವಿಚಾರ ಯಾರಿಗಾದರೂ  ಹೇಳಿದ್ರೆ ಕೊಲೆ ಮಾಡೋದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಿದ್ದಾರೆ. ಪ್ರತಿಬಾರಿ ವಿಡಿಯೋ ಕಾಲ್ ಮಾಡು ಎಂದು ಪೀಡಿಸುತ್ತಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಈ  ಹಿಂದೆ ಸಂತ್ರಸ್ಥೆ ಡಿಜಿಪಿ ಕಚೇರಿಗೆ ದೂರು ನೀಡಿದ್ದರು. ಈಗ ನೇರವಾಗಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇನ್ಸ್ ಪೆಕ್ಟರ್ ಸುನೀಲ್ ಎ1 ಆರೋಪಿಯಾಗಿದ್ದರೇ, ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯ ಎಎಸ್‌ಐ ಪ್ರಕಾಶ್ ಎ2 ಆರೋಪಿಯಾಗಿದ್ದಾರೆ. ಪ್ರಕಾಶ್ ವಿರುದ್ಧವೂ ಮಹಿಳೆ ದೂರು ನೀಡಿದ್ದಾರೆ. ಇನ್ಸ್ ಪೆಕ್ಟರ್ ಸುನೀಲ್ ಮತ್ತು ಎಎಸ್ಐ ಪ್ರಕಾಶ್ ಇಬ್ಬರ ವಿರುದ್ಧವೂ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಈಗ ಎಫ್‌ಐಆರ್ ದಾಖಲಾಗಿದೆ.

RAPE CASE AGAINST INSPECTOR SUNIL02




ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ. 

Rape case against inspector Sunil
Advertisment
Advertisment
Advertisment