/newsfirstlive-kannada/media/media_files/2025/08/04/neha-hiremath-2025-08-04-18-19-04.jpg)
ಹತ್ಯೆಯಾದ ನೇಹಾ ಹಿರೇಮಠ್ ಹಾಗೂ ಆರೋಪಿ ಫಯಾಜ್
ಹುಬ್ಬಳ್ಳಿಯ ನೇಹಾ ಹೀರೇಮಠ್ ಕೊಲೆ ಆರೋಪಿಗೆ ಮತ್ತೆ ಜೈಲೇ ಗತಿಯಾಗಿದೆ. ಕೊಲೆ ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ವಜಾ ಮಾಡಿದೆ. ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ಹೈಕೋರ್ಟ್ ನ್ಯಾಯಾಧೀಶರು, ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿದ್ದಾರೆ.
ಪೊಲೀಸರು ಬಂಧನ ಪ್ರಕ್ರಿಯೆ ಸರಿಯಾಗಿ ಮಾಡಿಲ್ಲ. ಆರೋಪಿಯ ಪೋಷಕರಿಗೆ ಯಾವುದೇ ಮಾಹಿತಿ ನೀಡಿಲ್ಲ . ಕೊಲೆಗೆ ಸರಿಯಾದ ಸಾಕ್ಷಿ ಆಧಾರಗಳಿಲ್ಲ. ಈ ಹಿನ್ನೆಲೆಯಲ್ಲಿ ಫಯಾಜ್ ಗೆ ಜಾಮೀನು ನೀಡುವಂತೆ ಫಯಾಜ್ ಪರ ವಕೀಲರು ಹೈಕೋರ್ಟ್ ಗೆ ಮನವಿ ಮಾಡಿದ್ದರು. ಆದ್ರೆ ಹೈಕೋರ್ಟ್ ಫಯಾಜ್ ಅರ್ಜಿ ತಿರಸ್ಕರಿಸಿ ಆದೇಶ ನೀಡಿದೆ. ಕಳೆದ 1 ವರ್ಷ 5 ತಿಂಗಳಿಂದ ಧಾರವಾಡ ಕಾರಾಗೃಹದಲ್ಲಿ ಆರೋಪಿ ಫಯಾಜ್ ಇದ್ದಾನೆ. ಜಾಮೀನಿನ ಮೇಲೆ ಹೊರಬರುವ ಫಯಾಜ್ ಪ್ರಯತ್ನಕ್ಕೆ ಮತ್ತೆ ಹಿನ್ನಡೆಯಾಗಿದೆ. ಈ ಹಿಂದೆ ಧಾರವಾಡದ ಕೆಳ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಇದಾದ ಬಳಿಕ ಆರೋಪಿ ಫಯಾಜ್ ಜಾಮೀನು ಕೋರಿ ಧಾರವಾಡ ಹೈಕೋರ್ಟ್ ಪೀಠಕ್ಕೆ ಅರ್ಜಿ ಸಲ್ಲಿಸಿದ್ದ. ಈಗ ಹೈಕೋರ್ಟ್ ನಲ್ಲೂ ಜಾಮೀನು ಅರ್ಜಿ ವಜಾ ಆಗಿದೆ. ಜಾಮೀನು ಕೋರಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ.
ನೇಹಾ ಹೀರೇಮಠ್ ಪೋಟೋ ಮುಂದೆ ನೇಹಾ ಪೋಷಕರು
2024ರ ಲೋಕಸಭಾ ಚುನಾವಣೆ ವೇಳೆ ಕಾಲೇಜಿನಲ್ಲಿ ನೇಹಾ ಹತ್ಯೆ ಮಾಡಿದ್ದು ಚುನಾವಣೆಯಲ್ಲೂ ಚರ್ಚೆಗೆ ಕಾರಣವಾಗಿತ್ತು. ಫಯಾಜ್ ಕಠಿಣ ಶಿಕ್ಷೆ ಕೊಡಿಸಲು ಕೋರ್ಟ್ ನಲ್ಲಿ ಪ್ರಾಸಿಕ್ಯೂಷನ್ ಪರ ವಕೀಲರು ಪ್ರಬಲ ವಾದ ಮಂಡಿಸುತ್ತಾರೆ ಎಂದು ರಾಜ್ಯ ಸರ್ಕಾರ ನೇಹಾ ಪೋಷಕರು ಹಾಗೂ ರಾಜ್ಯದ ಜನರಿಗೆ ಭರವಸೆ ನೀಡಿತ್ತು. ಕಾಂಗ್ರೆಸ್ ಸಚಿವರುಗಳು ನೇಹಾ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ.