/newsfirstlive-kannada/media/media_files/2025/09/16/maluru-ky-nanjegowda-2025-09-16-15-03-42.jpg)
ಮಾಲೂರು ಕ್ಷೇತ್ರದ ಶಾಸಕ ಕೆ.ವೈ.ನಂಜೇಗೌಡ ಆಯ್ಕೆ ಅಸಿಂಧು -ಹೈಕೋರ್ಟ್
ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕರ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಇಂದು ಮಹತ್ವದ ಆದೇಶ ನೀಡಿದೆ. ಹೊಸದಾಗಿ ಮರು ಮತಎಣಿಕೆ ನಡೆಸಲು ಹೈಕೋರ್ಟ್ ಆದೇಶ ನೀಡಿದೆ. ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದಿಂದ 2023ರಲ್ಲಿ ಕಾಂಗ್ರೆಸ್ ಪಕ್ಷದ ಕೆ.ವೈ.ನಂಜೇಗೌಡ ಶಾಸಕರಾಗಿ ಆಯ್ಕೆಯಾಗಿದ್ದರು. ಈಗ ಕೈ.ವೈ.ನಂಜೇಗೌಡ ಶಾಸಕರಾಗಿ ಆಯ್ಕೆಯಾಗಿದ್ದನ್ನು ಹೈಕೋರ್ಟ್ ಅಸಿಂಧುಗೊಳಿಸಿ ಆದೇಶ ನೀಡಿದೆ. ಮುಂದಿನ ನಾಲ್ಕು ವಾರದಲ್ಲಿ ಮರು ಮತ ಎಣಿಕೆ ನಡೆಸಲು ಹೈಕೋರ್ಟ್ ಆದೇಶ ನೀಡಿದೆ. ಜಿಲ್ಲಾ ಚುನಾವಣಾ ಅಧಿಕಾರಿ ಮತ ಎಣಿಕೆಯ ವಿಡಿಯೋ ಸಲ್ಲಿಸಿಲ್ಲ. ಹೀಗಾಗಿ ಜಿಲ್ಲಾ ಚುನಾವಣಾಧಿಕಾರಿ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಮಾಲೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುನಾಥ್ ಗೌಡ ಹೈಕೋರ್ಟ್ ಮೆಟ್ಟಿಲೇರಿದ್ರು. ಕೇವಲ 248 ಮತಗಳ ಅಂತರದಿಂದ ನಂಜೇಗೌಡ ಗೆದ್ದು ಶಾಸಕರಾಗಿದ್ದರು. ಕಳೆದ 2 ವರ್ಷದಿಂದ ಕೆ.ವೈ.ನಂಜೇಗೌಡ ಮಾಲೂರು ಕ್ಷೇತ್ರದ ಶಾಸಕರಾಗಿದ್ದಾರೆ.
ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆಗೆ ಅವಕಾಶ, 30 ದಿನದವರೆಗೂ ಆದೇಶಕ್ಕೆ ತಡೆಯಾಜ್ಞೆ
ಮಾಲೂರು ಶಾಸಕರಾಗಿ ಕೆ.ವೈ.ನಂಜೇಗೌಡ ಆಯ್ಕೆಯನ್ನು ಅಸಿಂಧುಗೊಳಿಸಿದ ಬಳಿಕ ಆ ಆದೇಶದ ವಿರುದ್ಧ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಹೀಗಾಗಿ ಸುಪ್ರೀಂಕೋರ್ಟ್ ಮೇಲ್ಮನವಿ ಸಲ್ಲಿಸುವವರೆಗೂ ಆದೇಶ ಜಾರಿ ಮಾಡಬಾರದೆಂದು ಕೆ.ವೈ.ನಂಜೇಗೌಡ ಪರ ವಕೀಲರು ಹೈಕೋರ್ಟ್ ಗೆ ಮನವಿ ಮಾಡಿಕೊಂಡಿದ್ದಾರೆ. ಹೀಗಾಗಿ ಶಾಸಕ ಕೆ.ವೈ.ನಂಜೇಗೌಡಗೆ 30 ದಿನಗಳ ತಾತ್ಕಾಲಿಕ ರಿಲೀಫ್ ಅನ್ನು ಹೈಕೋರ್ಟ್ ನೀಡಿದೆ. ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆಗೆ ಅವಕಾಶವನ್ನು ಹೈಕೋರ್ಟ್ ನೀಡಿದೆ. 30 ದಿನಗಳವರೆಗೆ ತನ್ನದೇ ತೀರ್ಪಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾ.ಆರ್.ದೇವದಾಸ್ ಅವರ ಹೈಕೋರ್ಟ್ ಪೀಠ ಈ ಆದೇಶ ನೀಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ.