/newsfirstlive-kannada/media/media_files/2025/08/03/smg_police-2025-08-03-23-21-35.jpg)
ಶಿವಮೊಗ್ಗ: ಸರ್ಕಾರಿ ಶಾಲೆಯ ನೀರಿನ ತೊಟ್ಟಿಗೆ ವಿಷ ಬೆರೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೃತ್ಯ ಎಸಗಿರುವುದು 5ನೇ ತರಗತಿ ಬಾಲಕ ಎಂದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ. ಹುಡುಗಾಟಿಕೆಯಿಂದ ಬಾಲಕ ಈ ತೊಟ್ಟಿಗೆ ವಿಷ ಬೆರೆಸಿದ್ದನು ಎಂದು ತನಿಖೆಯಿಂದ ತಿಳಿದು ಬಂದಿದೆ.
ಹೊಸನಗರ ತಾಲೂಕಿನ ಹೂವಿನಕೋಣಿಯ ಸರ್ಕಾರಿ ಶಾಲೆಯ ನೀರಿನ ತೊಟ್ಟಿಗೆ ವಿಷ ಬೆರೆಸಲಾಗಿತ್ತು. ಈ ನೀರನ್ನು ಕುಡಿದಿದ್ದ ಕೆಲವು ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲು ಆಗಿದ್ದರು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಇದು ಭಯೋತ್ಪಾದನೆಗಿಂತ ಗಂಭೀರವಾದ ವಿಷಯ ಎಂದು ಹೇಳಿದ್ದರು.
ಇದನ್ನೂ ಓದಿ: KRS ಡ್ಯಾಂಗೆ ಟಿಪ್ಪು ಸುಲ್ತಾನ್ ಅಡಿಗಲ್ಲು; ದಾಖಲೆ ಸಮೇತ ಸ್ಪಷ್ಟನೆ ಕೊಟ್ಟ ಸಚಿವ ಹೆಚ್.ಸಿ ಮಹದೇವಪ್ಪ
ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಶಿವಮೊಗ್ಗದ ಎಸ್ಪಿಗೆ ಕರೆ ಮಾಡಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆದೇಶಿಸಿದ್ದರು. ಇದರ ಬೆನ್ನಲ್ಲೇ ಎಸ್ಪಿ ಮಿಥುನ್ ಕುಮಾರ್ ಅವರು ಪ್ರಕರಣದ ತನಿಖೆ ಕುರಿತು ತೀರ್ಥಹಳ್ಳಿ ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ನೇತೃತ್ವದಲ್ಲಿ ಮೂರು ತಂಡಗಳನ್ನು ರಚಿಸಿ ಒಟ್ಟು 18 ಪೊಲೀಸರನ್ನು ತನಿಖೆಗೆ ನಿಯೋಜನೆ ಮಾಡಲಾಗಿತ್ತು.
ಫುಲ್ ಅಲರ್ಟ್ ಆಗಿದ್ದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದರು. ಪ್ರಕರಣ ಭೇದಿಸಲು ಮೂರು ತಂಡಗಳು ಶ್ರಮಿಸಿದ್ದವು. ಟೆಕ್ನಿಕಲ್ ಎವಿಡೆನ್ಸ್ ಕಲೆಹಾಲು ಪೊಲೀಸರು ಮುಂದಾಗಿದ್ದರು. ಟವರ್ ಡಂಪ್ ಮೂಲಕ ತನಿಖೆ ಕೈಗೊಂಡಿದ್ದರು. ಆದರೆ ಇದೀಗ 5ನೇ ತರಗತಿಯ ಬಾಲಕನೇ ಈ ಕೃತ್ಯ ನಡೆಸಿರುವುದು ಎಂದು ತನಿಖೆಯಿಂದ ಬೆಳಕಿಗೆ ಬಂದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ