/newsfirstlive-kannada/media/media_files/2025/10/21/kiran-majumdar-shah-dks-2025-10-21-12-13-32.jpg)
ಡಿಸಿಎಂ ಡಿಕೆಶಿ ಭೇಟಿಯಾದ ಕಿರಣ್ ಮಜುಂದಾರ್ ಷಾ
ಬಯೋಕಾನ್ ಕಂಪನಿಯ ಮುಖ್ಯಸ್ಥೆ ಇತ್ತೀಚೆಗೆ ಬೆಂಗಳೂರಿನ ಮೂಲಸೌಕರ್ಯ ವಿಷಯದ ಬಗ್ಗೆ ಟ್ವೀಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದು ರಾಜ್ಯ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿತ್ತು. ಡಿಸಿಎಂ ಡಿ.ಕೆ.ಶಿವಕುಮಾರ್ ಆದಿಯಾಗಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಅನೇಕರು ಕಿರಣ್ ಮಜುಂದಾರ್ ಷಾ ಟೀಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಅಂತೂ ಕಿರಣ್ ಮಜುಂದಾರ್ ಷಾ, ವೈಯಕ್ತಿಕ ಅಜೆಂಡಾ ಹೊಂದಿದ್ದಾರೆ ಎಂದು ನೇರವಾಗಿ ಟೀಕಿಸಿದ್ದರು. ಕರ್ನಾಟಕದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಏಕೆ ಕಿರಣ್ ಮಜುಂದಾರ್ ಷಾ, ಮೋಹನ್ ದಾಸ್ ಪೈ ಬೆಂಗಳೂರಿನ ಮೂಲಸೌಕರ್ಯದ ವಿಷಯ ಪ್ರಸ್ತಾಪಿಸಲಿಲ್ಲ ಎಂದು ಪ್ರಶ್ನಿಸಿದ್ದರು.
ಈಗ ಅದೇ ಬಯೋಕಾನ್ ಕಂಪನಿಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ನೇರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಮನೆಗೆ ಬಂದು ಡಿಕೆ ಶಿವಕುಮಾರ್ ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ. ಜೊತೆಗೆ ತಮ್ಮ ಕುಟುಂಬದಲ್ಲಿನ ಮದುವೆಯೊಂದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಆಹ್ವಾನ ನೀಡಿದ್ದಾರೆ. ಟ್ವೀಟರ್ ಮತ್ತು ಸಾರ್ವಜನಿಕವಾಗಿ ಮಾತಿನ ಚಕಮಕಿ ನಡೆದ ಬಳಿಕ ಇಬ್ಬರ ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಈ ಭೇಟಿಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೇ ಕಿರಣ್ ಮಜುಂದಾರ್ ಷಾ, ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸದಿಂದ ನಿರ್ಗಮಿಸಿದ್ದಾರೆ.
ಆದರೇ, ಈ ಭೇಟಿಯ ಬಗ್ಗೆ ಡಿಸಿಎಂ ಡಿಕೆಶಿ ಟ್ವೀಟರ್ ನಲ್ಲಿ ಪೋಟೋ ಸಹಿತ ಟ್ವೀಟ್ ಮಾಡಿದ್ದಾರೆ. ಬೆಂಗಳೂರಿನ ಬೆಳವಣಿಗೆ, ಇನ್ನೋವೇಶನ್, ಕರ್ನಾಟಕದ ಬೆಳವಣಿಗೆಯ ಸ್ಟೋರಿಯ ಮುಂದಿನ ಹಾದಿಯ ಬಗ್ಗೆ ಚರ್ಚೆ ನಡೆಸಿದ್ದೇವು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
It was a pleasure to meet Ms. @kiranshaw, entrepreneur and Founder of Biocon, at my residence today. We had an engaging discussion on Bengaluru’s growth, innovation, and the path ahead for Karnataka’s growth story. pic.twitter.com/NsEkos6tFS
— DK Shivakumar (@DKShivakumar) October 21, 2025
ಇನ್ನೂ ಬಯೋಕಾನ್ ಕಂಪನಿಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ, ಬಿಜೆಪಿ , ಜೆಡಿಎಸ್ ಸರ್ಕಾರದ ಅವಧಿಯಲ್ಲೂ ಕುಸಿಯುತ್ತಿರುವ ಬೆಂಗಳೂರಿನ ಮೂಲಸೌಕರ್ಯದ ಬಗ್ಗೆ ನಾವು ಟೀಕೆ ಮಾಡಿದ್ದೇವು. ನಮ್ಮ ಅಜೆಂಡಾ ಕ್ಲಿಯರ್ ಆಗಿದೆ. ರಸ್ತೆಗಳನ್ನು ಸ್ವಚ್ಛಗೊಳಿಸಿ, ರಸ್ತೆಗಳನ್ನು ಅಭಿವೃದ್ದಿಪಡಿಸಿ ಎಂಬುದೇ ನಮ್ಮ ಅಜೆಂಡಾ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ, ಸರ್ಕಾರಕ್ಕೆ ತಿರುಗೇಟು ನೀಡಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.