/newsfirstlive-kannada/media/media_files/2025/09/08/mnd_ganesha-1-2025-09-08-11-05-15.jpg)
ಮದ್ದೂರು ಹಿಂಸಾಚಾರದ ಆರೋಪಿಗಳು ಜೈಲುಪಾಲು
ಮಂಡ್ಯ ಜಿಲ್ಲೆಯ ಮದ್ದೂರು ಗಲಭೆ ಪ್ರಕರಣದಲ್ಲಿ ಬಂಧನವಾದವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಎಲ್ಲಾ 22 ಆರೋಪಿಗಳು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಎರಡನೇ ಅಪರ ಸಿವಿಲ್ ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರುಪಡಿಸಿದ್ದರು. ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಮದ್ದೂರು ತಾಲೂಕು ಎರಡನೇ ಅಪರ ಸಿವಿಲ್ ನ್ಯಾಯಾಧೀಶ ಗೋಪಾಲಕೃಷ್ಣ ಆದೇಶ ನೀಡಿದ್ದಾರೆ. ಇದರಿಂದಾಗಿ ಎಲ್ಲಾ ಆರೋಪಿಗಳನ್ನು ಮಂಡ್ಯ ಜೈಲಿಗೆ ಕರೆದುಕೊಂಡು ಹೋಗಿ ಪೊಲೀಸರು ಬಿಟ್ಟಿದ್ದಾರೆ.
ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಇವತ್ತು ಪ್ರತಿಭಟನಾಕಾರರು ಆಗ್ರಹಿಸಿದ್ದರು. ನಾಳೆ ಮದ್ದೂರು ಬಂದ್‌ಗೆ ಹಿಂದೂ ಪರ ಸಂಘಟನೆಗಳು ಕರೆ ನೀಡಿವೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ.