/newsfirstlive-kannada/media/media_files/2025/09/23/mahesh-shetty-thimmaroodi-2025-09-23-16-38-01.jpg)
ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮ್ಮರೋಡಿ ಗಡೀಪಾರಿಗೆ ಹೈಕೋರ್ಟ್ ತಡೆ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಸೌಜನ್ಯ ಪರ ಹೋರಾಟಗಾರ ಹಾಗೂ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮ್ಮರೋಡಿರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮೌನ್ವಿ ತಾಲ್ಲೂಕಿಗೆ ಗಡೀಪಾರು ಮಾಡಿ ಉಪವಿಭಾಗಾಧಿಕಾರಿ ಆದೇಶ ಹೊರಡಿಸಿದ್ದರು. ಈ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮ್ಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಮಹೇಶ್ ಶೆಟ್ಟಿ ತಿಮ್ಮರೋಡಿ ಅಕ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಅಕ್ಟೋಬರ್ 8 ರವರೆಗೆ ಗಡೀಪಾರು ಮಾಡಿ ಉಪವಿಭಾಗಾಧಿಕಾರಿ ನೀಡಿರುವ ಆದೇಶ ಜಾರಿಗೊಳಿಸದಂತೆ ಆದೇಶಿಸಿದೆ. ಗಡೀಪಾರು ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.