/newsfirstlive-kannada/media/media_files/2025/10/20/gt-world-mall-bangalore-2025-10-20-12-52-44.jpg)
ಬೆಂಗಳೂರಿನ ಜಿ.ಟಿ.ವರ್ಲ್ಡ್ ಮಾಲ್
ಬೆಂಗಳೂರಿನ ಮಾಗಡಿ ಮುಖ್ಯ ರಸ್ತೆಯಲ್ಲಿರುವ ಜಿ.ಟಿ.ಮಾಲ್ ನಲ್ಲಿ ವ್ಯಕ್ತಿಯೊಬ್ಬರು ಮೂರನೇ ಪ್ಲೋರ್ ನಿಂದ ನೆಲಮಹಡಿಗೆ ಬಿದ್ದು ಸಾವನ್ನಪ್ಪಿದ್ದಾರೆ. ಇದು ಆತ್ಮಹತ್ಯೆಯೋ ಅಥವಾ ಆಯ ತಪ್ಪಿ ಬಿದ್ದಿದ್ದಾರಾ ಅನ್ನೋದು ದೃಢಪಟ್ಟಿಲ್ಲ. ಬೆಳಿಗ್ಗೆ 9.30 ರ ಸುಮಾರಿಗೆ ಈ ದುರಂತ ನಡೆದಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದಲೇ ಮೇಲಿನಿಂದ ಕೆಳಕ್ಕೆ ಬಿದ್ದಿರಬಹುದು ಅಂತ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಜೇಬಿನಲ್ಲಿ 300 ರೂಪಾಯಿ ಹಣ ಪತ್ತೆಯಾಗಿದೆ. ಮೂರನೇ ಮಹಡಿಯಿಂದ ಕೆಳಗೆ ಬಿದ್ದ ತೀವ್ರತೆಗೆ ವ್ಯಕ್ತಿ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ. ಮುಖ, ತಲೆ ಭಾಗಕ್ಕೆ ಏಟು ಬಿದ್ದು ತೀವ್ರ ರಕ್ತ ಹರಿದಿದೆ.
ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆಯ ಪೊಲೀಸರು ಜಿ.ಟಿ. ಮಾಲ್ ಒಳಗಿನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ. ಸಿಸಿಟಿವಿ ದೃಶ್ಯಗಳಿಂದ ಈ ವ್ಯಕ್ತಿಯ ಸಾವಿನ ರಹಸ್ಯ ಬಯಲಾಗಲಿದೆ. ಮೃತ ವ್ಯಕ್ತಿ ಹೇಗೆ ಬಿದ್ದ ಏನು ಅನ್ನೋದು ಸ್ಪಷ್ಟವಾಗಿ ಗೊತ್ತಾಗಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.