/newsfirstlive-kannada/media/post_attachments/wp-content/uploads/2024/09/Veerendra-Heggade2.jpg)
ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ
ಈಗ ಒಂದೊಂದೇ ಸತ್ಯಗಳು ಹೊರಗೆ ಬರುತ್ತಾ ಇದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಇವತ್ತಿನ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಮಾಸ್ಕ್ ಮ್ಯಾನ್ ಚಿನ್ನಯ್ಯ ಅಲಿಯಾಸ್ ಚೆನ್ನ ನೀಡಿದ್ದ ದೂರಿನ ಆಧಾರದ ಮೇಲೆ ಎಸ್‌ಐಟಿ ತನಿಖೆ ನಡೆಸಿತ್ತು. ಮಾಸ್ಕ್ ಮ್ಯಾನ್ ಚಿನ್ನಯ್ಯ ತೋರಿಸಿದ ಜಾಗಗಳಲೆಲ್ಲಾ ಅಗೆದರೂ, ಮಾಸ್ಕ್ ಮ್ಯಾನ್ ಹೇಳಿದಂತೆ ನೂರಾರು ಶವದ ಅಸ್ಥಿಪಂಜರಗಳು ಸಿಗಲಿಲ್ಲ. ಜೊತೆಗೆ ಮಾಸ್ಕ್ ಮ್ಯಾನ್ ದೂರು, ಹೇಳಿಕೆಯ ಬಗ್ಗೆಯೇ ಅನುಮಾನ ಮೂಢಲಾರಂಭಿಸಿತ್ತು. ಈ ಬಗ್ಗೆ ಪ್ರಶ್ನಿಸಿದರೂ, ಸಮರ್ಪಕ ಉತ್ತರವನ್ನು ಮಾಸ್ಕ್ ಮ್ಯಾನ್ ನೀಡಲು ವಿಫಲನಾಗಿದ್ದಾನೆ.
ಮಾಸ್ಕ್ ಮ್ಯಾನ್ ಚಿನ್ನಯ್ಯ ಮೊದಲು ಒಂದು ತಲೆ ಬುರುಡೆಯನ್ನು ತಂದಿದ್ದ. ಆ ಬುರುಡೆಯನ್ನು ಪೊಲೀಸರು ಮತ್ತು ಕೋರ್ಟ್ ಗೆ ನೀಡಿ ಹೇಳಿಕೆಯನ್ನು ನೀಡಿದ್ದ. ಆ ಬುರುಡೆಯನ್ನು ಎಲ್ಲಿಂದ ತಂದಿದ್ದ ಎಂಬುದನ್ನು ತಿಳಿಸಲು ವಿಫಲನಾಗಿದ್ದ. ಹೀಗಾಗಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ಎಸ್‌ಐಟಿ ಬಂಧಿಸಿದೆ. ಮತ್ತೊಂದೆಡೆ ಮಹೇಶ್ ಶೆಟ್ಟಿ ತಿಮ್ಮರೋಡಿರನ್ನು ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.
ಈ ಎಲ್ಲ ಬೆಳವಣಿಗೆ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.
"ಈಗ ಒಂದೊಂದೇ ಸತ್ಯಗಳು ಹೊರಗೆ ಬರ್ತಾ ಇದೆ" ಎಂದು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಹೇಳಿದ್ದಾರೆ. ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು, ಈ ಬಗ್ಗೆ ಹೆಚ್ಚು ಮಾತನಾಡಲ್ಲ . ಎಸ್ಐಟಿ ತನಿಖೆಯ ಹಂತದಲ್ಲಿ ನಾನು ಹೆಚ್ಚು ಮಾತನಾಡಲ್ಲ. ಧರ್ಮಸ್ಥಳಕ್ಕೆ ಬಂದು ಬೆಂಬಲ ಸೂಚಿಸುವ ಎಲ್ಲರಿಗೂ ಧನ್ಯವಾದಗಳು. ಈಗ ಒಂದೊಂದೇ ಸತ್ಯಗಳು ಹೊರಗೆ ಬರ್ತಾ ಇದೆ. ಸತ್ಯಗಳನ್ನು ತೊಳೆದು ಇಟ್ಟಂತಾಗಿದೆ, ಕ್ಷೇತ್ರದ ಮೇಲಿನ ಅಭಿಮಾನ ಹೀಗೇ ಇರಲಿ. ಎಲ್ಲರ ಪ್ರೀತಿ ವಿಶ್ವಾಸ ಹೀಗೆಯೇ ಇರಲಿ ಎಂದು ಆಶಿಸ್ತೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ