/newsfirstlive-kannada/media/media_files/2025/09/10/mandya-ganesha-3-2025-09-10-11-52-39.jpg)
ಮದ್ದೂರಿನಲ್ಲಿ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಆರಂಭ
ಗಣೇಶ ವಿಸರ್ಜನೆ ವೇಳೆ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದಿದ್ದ ಮಂಡ್ಯದ ಮದ್ದೂರು ಪಟ್ಟಣಕ್ಕೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗಮಿಸಿದ್ದಾರೆ. ಕಾಶೀ ವಿಶ್ವನಾಥ್ ದೇಗುಲಕ್ಕೆ ಬಿಜೆಪಿ ನಾಯಕರ ಪಡೆ ಆಗಮಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರು ಆಗಮಿಸಿದ್ದಾರೆ. ಕಾಶಿ ವಿಶ್ವನಾಥ ದೇಗುಲದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದ್ದಾರೆ. ಇಂದು ಮದ್ದೂರು ಪಟ್ಟಣದಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ಮೆರವಣಿಗೆಗೆ ಚಾಲನೆ ನೀಡಲಾಗುತ್ತಿದೆ. ಬಿ.ವೈ.ವಿಜಯೇಂದ್ರ ಅವರ ಜೊತೆಗೆ ವಿಪಕ್ಷ ನಾಯಕ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಿ.ಟಿ.ರವಿ, ಯದುವೀರ್, ಅಶ್ವತ್ಥ ನಾರಾಯಣ ಮತ್ತಿತರರ ನಾಯಕರು ಕೂಡ ಮದ್ದೂರಿಗೆ ಆಗಮಿಸಿದ್ದಾರೆ.
ಈಗ ಮದ್ದೂರು ಪಟ್ಟಣದಲ್ಲಿ ಗಣೇಶ ಮೂರ್ತಿಗಳ ಸಾಮೂಹಿಕ ಮೆರವಣಿಗೆ ಹಾಗೂ ವಿಸರ್ಜನಾ ಮೆರವಣಿಗೆ ನಡೆಸಲಾಗುತ್ತಿದೆ. ಇದರ ನೇತೃತ್ವವನ್ನು ಬಿ.ವೈ.ವಿಜಯೇಂದ್ರ ವಹಿಸಿದ್ದಾರೆ.
ಬಿಜೆಪಿ ನಾಯಕ ಬಿ.ವೈ.ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರು ಬರುತ್ತಿದ್ದಂತೆ, ಹಿಂದೂ ಕಾರ್ಯಕರ್ತರು ಕುಣಿದು ಕುಪ್ಪಳಿಸಿದ್ದಾರೆ. ಕೇಕೇ ಹಾಕಿದ್ದಾರೆ. ಜೈಶ್ರೀರಾಮ ಘೋಷಣೆಗಳು ಮೆರವಣಿಗೆಯಲ್ಲಿ ಮೊಳಗಿವೆ.
ತಮಟೆ ವಾದ್ಯ, ದೇವರ ಮೆರವಣಿಗೆಯ ಜೊತೆ ಗಣೇಶ ಮೂರ್ತಿ ಮೆರವಣಿಗೆ ಮಾಡಿ, ಭಗವಾ ಶಾಲು ತಿರುಗಿಸುತ್ತಾ ಮೆರವಣಿಗೆ ಸಾಗುತ್ತಿದೆ. ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾರೆ.
ಭಾನುವಾರ ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಅನ್ಯ ಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದರು. ಇದಾದ ಬಳಿಕ ಗಲಾಟೆ, ಘರ್ಷಣೆ ನಡೆದಿತ್ತು. ಪೊಲೀಸರು ಲಾಠಿಚಾರ್ಜ್ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದರು.
ಇಂದು ಮದ್ದೂರು ಟೌನ್ ನಲ್ಲಿರುವ ಎಲ್ಲ ಗಣೇಶ ಮೂರ್ತಿಗಳನ್ನು ಸಾಮೂಹಿಕವಾಗಿ ಮೆರವಣಿಗೆ ನಡೆಸಿ, ಸಾಮೂಹಿಕ ವಿಸರ್ಜನೆ ನಡೆಸಲು ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ನಿರ್ಧರಿಸಿವೆ. ಹೀಗಾಗಿ ಮೊನ್ನೆ ದೆಹಲಿಯಲ್ಲಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಇಂದು ಮದ್ದೂರಿಗೆ ಬಂದು ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ.
ಹಿಂದೂ ಸಮುದಾಯದ ಮೇಲೆ ಲಾಠಿ ಚಾರ್ಜ್ ನಡೆಸಲಾಗಿದೆ. ಇದನ್ನು ಬಿಜೆಪಿ, ಜೆಡಿಎಸ್ ಹಾಗೂ ಹಿಂದೂ ಸಂಘಟನೆಗಳು ತೀವ್ರವಾಗಿ ಖಂಡಿಸಿವೆ. ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿರುವುದನ್ನು ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ತೀವ್ರವಾಗಿ ಖಂಡಿಸಿವೆ. ನಿನ್ನೆ ಮದ್ದೂರು ಬಂದ್ ಅನ್ನು ಯಶಸ್ವಿಯಾಗಿ ನಡೆಸಲಾಗಿದೆ.
ಇಂದು ಮದ್ದೂರಿನಲ್ಲಿ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬೃಹತ್ ಗಣೇಶ ವಿಸರ್ಜನೆಯ ಮೆರವಣಿಗೆಯನ್ನು ನಡೆಸಲಾಗುತ್ತಿದೆ.
ಮದ್ದೂರು ಕ್ಷೇತ್ರದ ಮಾಜಿ ಶಾಸಕ ಡಿ.ಸಿ.ತಮ್ಮಣ್ಣ ಸೇರಿದಂತೆ ಜೆಡಿಎಸ್ ನಾಯಕರು ಕೂಡ ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ. ನಾಗಮಂಗಲ ಕ್ಷೇತ್ರದ ಮಾಜಿ ಶಾಸಕ ಸುರೇಶ್ ಗೌಡ, ಮಳವಳ್ಳಿ ಕ್ಷೇತ್ರದ ಮಾಜಿ ಶಾಸಕ ಅನ್ನದಾನಿ ಕೂಡ ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ.