/newsfirstlive-kannada/media/media_files/2025/08/03/hc-mahadevappa-2025-08-03-16-34-27.jpg)
ಮಂಡ್ಯ: KRS ಡ್ಯಾಂಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂದು ಸಚಿವ ಹೆಚ್.ಸಿ. ಮಹದೇವಪ್ಪ ಹೇಳಿಕೆ ನೀಡಿದ್ದಾರೆ. ಮೈಸೂರು ರಾಜರ್ಷಿ ನಾಲ್ವಡಿ ಒಡೆಯರ್ ಪುಣ್ಯ ಸ್ಮರಣೆ ದಿನದಂದೇ ಸಚಿವ ಹೆಚ್.ಸಿ. ಮಹದೇವಪ್ಪ ಅವರು ಈ ರೀತಿಯ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ:ಬಿಟ್ಟು ಹೋಗ್ಬೇಡ ಅಂತಾ ಬಿಕ್ಕಿ ಬಿಕ್ಕಿ ಅತ್ತರು.. ಒಂದು ಆನೆಗಾಗಿ ಜಿಯೋಗೇ ಬಾಯ್ಕಾಟ್
ಈ ಬಗ್ಗೆ ಶ್ರೀರಂಗಪಟ್ಟಣದಲ್ಲಿ ಮಾತಾಡಿದ ಸಚಿವ ಹೆಚ್.ಸಿ. ಮಹದೇವಪ್ಪ ಅವರು, ಕನ್ನಂಬಾಡಿ ಕಟ್ಟುವುದಕ್ಕೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ರು. ಆದರೆ ಈಗ ಅದನ್ನು ಹೇಳೋಕೆ ಯಾರಿಗೂ ಧೈರ್ಯ ಇಲ್ಲ. KRS ಗೇಟ್ ಹೆಬ್ಬಾಗಿಲಿನಲ್ಲಿ ಈಗಲೂ ಅದನ್ನು ಕಾಣಬಹುದು. ಚರಿತ್ರೆ ಗೊತ್ತಿಲ್ಲದವರು ಚರಿತ್ರೆ ನಿರ್ಮಾಣ ಮಾಡಲು ಸಾಧ್ಯವಿಲ್ಲ ಎಂದು ವೇದಿಕೆ ಮೇಲೆ ಗುಡುಗಿದ್ದಾರೆ.
ಇನ್ನೂ, ಮಾತನ್ನು ಮುಂದುವರೆಸಿದ ಅವರು, ಟಿಪ್ಪು ಮಸೀದಿಯ ಪಕ್ಕದಲ್ಲಿ ದೇವಸ್ಥಾನ ಇದೆ. ಈ ಕಡೆ ಅಕ್ಬರ್ ಅಂತಾರೆ, ಆ ಕಡೆ ಗಂಟೇ ಟನ್, ಟನ್ ಅಂತಾರೆ. ಎರಡನ್ನು ಕೇಳ್ತಿದ್ರು ಅವರು. ಸಮಚಿತ್ತರಾಗಿದ್ದವರು ಟಿಪ್ಪು. ಶೋಷಿತ ಮಹಿಳೆಯರನ್ನು ದೇವದಾಸಿ ಪದ್ಧತಿಗೆ ದೂಡುತ್ತಿದ್ದರು. ಈ ದೇವದಾಸಿ ಪದ್ಧತಿ ರದ್ದು ಮಾಡಿದ್ರು. ಟಿಪ್ಪು ಅವರ ಕಾಲದಲ್ಲಿ ಒಂದೇ ಒಂದು ಇಂಚು ಭೂಮಿಯನ್ನು ಉಳ್ಳವರಿಗೆ ಕೊಟ್ಟಿರಲಿಲ್ಲ. ಭಾರತ ದೇಶಕ್ಕೆ ಸಿರಿಕಲ್ಚರ್ ರೇಷ್ಮೆ ತಂದಿದ್ದೆ ಟಿಪ್ಪು ಸುಲ್ತಾನ್ ಎಂದು ಹೆಚ್.ಸಿ. ಮಹದೇವಪ್ಪ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ