/newsfirstlive-kannada/media/media_files/2025/11/11/nia-2025-11-11-17-29-43.jpg)
ನವದೆಹಲಿ: ಇತ್ತೀಚೆಗೆ ದೆಹಲಿ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ನಡೆದ ಕಾರು ಸ್ಫೋಟ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಈ ಬೆನ್ನಲ್ಲೇ ಎಚ್ಚೆತ್ತ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶಾದ್ಯಂತ ಹೈ ಅಲರ್ಟ್ ಘೋಷಿಸಿದೆ. ಇಷ್ಟೇ ಅಲ್ಲ ಈ ಘಟನೆ ತನಿಖೆಯ ಹೊಣೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ನೀಡಿ ಕೇಂದ್ರ ಆದೇಶಿಸಿದೆ.
ಹೌದು, ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನಿವಾಸದಲ್ಲಿ ನಡೆದ ಉನ್ನತ ಮಟ್ಟದ ಭದ್ರತಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಕೇಸ್​​ ಎನ್​ಐಎಗೆ ಹಸ್ತಾಂತರಗೊಂಡಿದ್ದು, ತನಿಖೆ ಚುರುಕುಗೊಂಡಿದೆ. ಎನ್​ಐಎ ತಂಡ ಕೆಂಪು ಕೋಟೆ ಬಳಿಯ ಸ್ಥಳಕ್ಕೆ ತಲುಪಿ ಸಮಗ್ರ ಶೋಧ ಕಾರ್ಯಾಚರಣೆ ಶುರು ಮಾಡಿದೆ. ಈಗಾಗಲೇ ಕೇಸ್​ ಸಂಬಂಧ ಹಲವು ಪುರಾವೆಗಳನ್ನು ಸಂಗ್ರಹಿಸಿದ್ದು, ಶಂಕಿತರನ್ನು ಪತ್ತೆಹಚ್ಚಲಾಗಿದೆ.
/filters:format(webp)/newsfirstlive-kannada/media/media_files/2025/11/11/amit-shah-2025-11-11-17-31-09.jpg)
ಏನಿದು ಕೇಸ್..?
ನಿನ್ನೆ ಸೋಮವಾರ ಸಂಜೆ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಹುಂಡೈ i20 ಕಾರಿನಲ್ಲಿ ಸ್ಫೋಟ ಸಂಭವಿಸಿತ್ತು. ಈ ಭೀಕರ ಸ್ಫೋಟದಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ 30ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಎಲ್ಲರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅಮಿತ್ ಶಾ ನಡೆಸಿದ ಉನ್ನತ ಮಟ್ಟದ ಭದ್ರತಾ ಪರಿಶೀಲನಾ ಸಭೆಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ, ನಿರ್ದೇಶಕ ಐಬಿ, ದೆಹಲಿ ಪೊಲೀಸ್ ಆಯುಕ್ತರು ಮತ್ತು ಡಿಜಿ NIA ಭಾಗವಹಿಸಿದ್ದರು. ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ಕೂಡ ಸಭೆಯಲ್ಲಿದ್ದರು ಎಂದು ವರದಿಯಾಗಿದೆ.
ಇದನ್ನೂ ಓದಿ:ಡಿಗ್ರಿ ವಿದ್ಯಾರ್ಥಿಗಳಿಗೆ ಕೇಂದ್ರದಿಂದ ಸುವರ್ಣಾವಕಾಶ.. ಸರ್ಕಾರಿ ಕೆಲಸಕ್ಕೆ ಈಗಲೇ ಅಪ್ಲೈ ಮಾಡಿ!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us