/newsfirstlive-kannada/media/media_files/2025/08/03/nikhil_kumaraswamy_prajwal-2025-08-03-16-26-55.jpg)
ಚಿತ್ರದುರ್ಗ: ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಆಗಸ್ಟ್ 2 ರಂದು ಜೀವಾವಧಿ ಶಿಕ್ಷೆ ವಿಧಿಸಿದೆ. ಸದ್ಯ ಈ ಸಂಬಂಧ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು ಕೋರ್ಟ್ ತೀರ್ಪಿಗೆ ಯಾರೇ ಆಗಲಿ ತಲೆ ಬಾಗಬೇಕು ಎಂದು ಹೇಳಿದ್ದಾರೆ.
ಜಿಲ್ಲೆಯ ಹಿರಿಯೂರು ತಾಲೂಕಿನ ಮಸ್ಕಲ್ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು, ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟ ಆಗಿದೆ. ನಿನ್ನೆ ಸೆಷನ್ ಕೋರ್ಟ್ನಿಂದ ಆದೇಶ ಪ್ರಕಟಗೊಂಡಿದೆ. ಕೋರ್ಟ್ ತೀರ್ಪಿಗೆ ಯಾರೇ ಆಗಲಿ ತಲೆ ಬಾಗಬೇಕಾಗುತ್ತದೆ. ಈಗ ಕೋರ್ಟ್ ತೀರ್ಪಿನ ಬಗ್ಗೆ ಹೆಚ್ಚಿನ ವಿಶ್ಲೇಷಣೆಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಪ್ರಜ್ವಲ್ ರೇವಣ್ಣಗೆ ಶಿಕ್ಷೆ; BSY, ಅಶೋಕ್, ಸಿಟಿ ರವಿ ಯಾಕೆ ಮಾತಾಡ್ತಿಲ್ಲ?- ಡಿ.ಕೆ ಶಿವಕುಮಾರ್
ಈ ಮೊದಲು ಪ್ರಜ್ವಲ್ ರೇವಣ್ಣ ಮೇಲೆ ಆರೋಪಗಳು ಇದ್ದಾಗ ಜೆಡಿಎಸ್ ಪಕ್ಷದ ವರಿಷ್ಠರು, ಅವರನ್ನು ಪಕ್ಷದಿಂದ ಅಮಾನತ್ತಿನಲ್ಲಿಟ್ಟಿದ್ದರು. ಆಗಿನ್ನು ಅಪರಾಧಿಯೋ, ಅಲ್ಲವೋ ಎಂಬ ತೀರ್ಪು ಬಂದಿರಲಿಲ್ಲ. ವರಿಷ್ಠರ ತೀರ್ಮಾನದ ಸ್ಪಷ್ಟತೆ ಅರ್ಥ ಮಾಡಿಕೊಳ್ಳಬೇಕಾಗುತ್ತದೆ. ಇದಕ್ಕಿಂತ ಹೆಚ್ಚಾಗಿ ಈ ವಿಷಯದ ಬಗ್ಗೆ ನಾನು ಪ್ರಯಿಕ್ರಿಯಿಸುವುದು ಬೇಕಾಗಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ