/newsfirstlive-kannada/media/media_files/2025/10/10/swamiji-met-devegowda-2025-10-10-16-37-18.jpg)
ಆಸ್ಪತ್ರೆಯಲ್ಲಿ ದೇವೇಗೌಡರ ಭೇಟಿಯಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ
ಅನಾರೋಗ್ಯದಿಂದ ಆಸ್ಪತ್ಪೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಆದಿಚುಂಚನಗಿರಿ ಮಠದ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಕೆಲ ದಿನಗಳ ಹಿಂದೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ದಾಖಲಾಗಿದ್ದಾರೆ. ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ್ದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ದೇವೇಗೌಡರ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. ಶೀಘ್ರ ಗುಣಮುಖರಾಗುವಂತೆ ದೇವೇಗೌಡರಿಗೆ ಹಾರೈಸಿದ್ದಾರೆ. ಕೆಲ ಕಾಲ ದೇವೇಗೌಡರ ಜೊತೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮಾತುಕತೆ ನಡೆಸಿ, ಆರೋಗ್ಯ ಚೇತರಿಕೆಗೆ ಹಾರೈಸಿದ್ದರು.
ಮೂತ್ರಸೋಂಕು ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ದೇವೇಗೌಡರಿಗೆ ವೈದ್ಯರು ಉತ್ತಮ ಚಿಕಿತ್ಸೆ ನೀಡಿದ್ದಾರೆ. ಚೇತರಿಸಿಕೊಂಡಿರುವ ದೇವೇಗೌಡರು ಇನ್ನೂ ಎರಡು ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸಚಾರ್ಜ್ ಆಗುವ ಸಾಧ್ಯತೆ ಇದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.