/newsfirstlive-kannada/media/media_files/2025/12/27/op-aghat-1-2025-12-27-16-19-53.jpg)
ಆಪರೇಷನ್ ಆಘಾತ್
ಹೊಸ ವರ್ಷ ಸಂಭ್ರಮಾಚರಣೆಗೆ ದಿನಗಣನೆ ಆರಂಭವಾಗಿದೆ. ಇತ್ತ ದೆಹಲಿ ಪೊಲೀಸರು ಹೈ ಅಲರ್ಟ್ ಆಗಿದ್ದು, 24 ಗಂಟೆಯ 660 ಆರೋಪಿಗಳನ್ನ ಬಂಧಿಸಿದ್ದಾರೆ. ‘ಆಪರೇಷನ್ ​ಆಘಾತ್​​’ ಅನ್ನೋ ಹೆಸರಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, ಅನೈತಿಕ ಚಟುವಟಿಕೆಗಳ ಮೇಲೆ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿ ಹೊಸ ವರ್ಷಾಚರಣೆಗೆ ಭರ್ಜರಿಯಾಗಿ ಸಿದ್ಧವಾಗ್ತಿದೆ. ಒಂದ್ಕಡೆ ಸೆಲಬ್ರೇಷನ್​ ಆದ್ರೆ, ಮತ್ತೊಂದ್ಕಡೆ ಅನೈತಿಕ ಚಟುವಟಿಕೆಗಳ ಸಂಖ್ಯೆ ಹೆಚ್ಚಾಗೋ ಸಾಧ್ಯತೆಯಿದೆ. ಹೀಗಾಗಿ ದೆಹಲಿ ಪೊಲೀಸರು ರಾತ್ರೋ ರಾತ್ರಿ ಕಾರ್ಯಾಚರಣೆಗೆ ಇಳಿದಿದ್ದಾರೆ.
/filters:format(webp)/newsfirstlive-kannada/media/media_files/2025/12/27/op-aghat-2-2025-12-27-16-24-24.jpg)
‘ಆಪರೇಷನ್​ ಆಘಾತ್​ 3.0’ ಅನ್ನೋ ಹೆಸರಲ್ಲಿ ದೆಹಲಿ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ಅದರಂತೆ 24 ಗಂಟೆಯಲ್ಲಿ ದೆಹಲಿ ಪೊಲೀಸರು ದಕ್ಷಿಣ ಮತ್ತು ಆಗ್ನೇಯ ದೆಹಲಿ ಜಿಲ್ಲೆಗಳಲ್ಲಿ 660 ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ. ಜೊತೆಗೆ ಬಂಧಿತರಿಂದ ಡಜನ್​ಗಟ್ಟಲೆ ಶಸ್ತ್ರಾಸ್ತ್ರಗಳು, ಲಕ್ಷಾಂತರ ನಗದು, ಅಕ್ರಮ ಮದ್ಯ, ಮಾದಕ ವಸ್ತುಗಳು ಮತ್ತು ಇತರ ಕದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಹಬ್ಬದ ಸಂದರ್ಭದಲ್ಲಿ ಅಪರಾಧಗಳನ್ನು ತಡೆಗಟ್ಟುವ ಉದ್ದೇಶದಿಂದ ಈ ಕಾರ್ಯಾಚರಣೆ ನಡೆಸಲಾಗಿದೆ. ದಕ್ಷಿಣ ಮತ್ತು ಆಗ್ನೇಯ ಜಿಲ್ಲಾ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಅಪರಾಧ ಕೃತ್ಯಗಳಲ್ಲಿ ತೊಡಗುವವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗ್ತಿದೆ. ಜೊತೆಗೆ ಈ ಕಾರ್ಯಾಚರಣೆಯ ಭಾಗವಾಗಿ 2,800 ಕ್ಕೂ ಹೆಚ್ಚು ಜನರನ್ನು ಪ್ರಶ್ನಿಸಲಾಗಿದೆ ಎಂದು ದೆಹಲಿ ಪೊಲೀಸ್ ಜಂಟಿ ಆಯುಕ್ತ ಎಸ್.ಕೆ. ಜೈನ್ ತಿಳಿಸಿದ್ದಾರೆ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us