/newsfirstlive-kannada/media/media_files/2025/09/01/police-warning-to-social-media-users-2025-09-01-13-54-00.jpg)
ಸೋಷಿಯಲ್ ಮೀಡಿಯಾ ಬಳಕೆದಾರರಿಗೆ ಪೊಲೀಸ್ ಇಲಾಖೆಯ ಎಚ್ಚರಿಕೆ
ಸೋಷಿಯಲ್ ಮೀಡಿಯಾ ಬಳಕೆದಾರರಿಕೆ ಕರ್ನಾಟಕ ಪೊಲೀಸ್ ಇಲಾಖೆ ಎಚ್ಚರಿಕೆ ಸಂದೇಶ ನೀಡಿದೆ.ಸೋಷಿಯಲ್ ಮೀಡಿಯಾದಲ್ಲಿ ಯಾವುದೇ ಪೋಸ್ಟ್ ಹಾಕುವ ಮುನ್ನ ಎಚ್ಚರ ವಹಿಸಿ. ಯಾವುದೇ ಸಂಘಟನೆ ಅಥವಾ ಸಂಸ್ಥೆಯ ವಿರುದ್ಧ ಅವಹೇಳನಕಾರಿಯಾಗಿ, ಅಥವಾ ಸಾರ್ವಜನಿಕ ಶಾಂತಿಭಂಗ ಕಾನೂನು ಸುವ್ಯವಸ್ಥೆಗೆ ತೊಡಕಾಗುವ ಪೋಸ್ಟ್ ಹಾಕಿದವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ. ಅಂತಹ ಪುನರಾವರ್ತಿತ ಚಟುವಟಿಕೆ ಕಠಿಣ ಕ್ರಮಕ್ಕೆ ದಾರಿಯಾಗಬಹುದು. ಆದ್ದರಿಂದ ಯಾವುದೇ ಪೋಸ್ಟ್ ಹಾಕುವ ಮುನ್ನ ಎಚ್ಚರ ವಹಿಸಿ ಎಂದು ಸಂದೇಶ ನೀಡಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಎಚ್ಚರಿಕೆ ಸಂದೇಶ ಪೊಲೀಸ್ ಇಲಾಖೆ ಹಂಚಿಕೊಂಡಿದೆ.
ಇತ್ತೀಚೆಗೆ ಸಾರ್ವಜನಿಕ ವ್ಯಕ್ತಿಗಳ ಬಗ್ಗೆ, ಸಂಸ್ಥೆಗಳ ಬಗ್ಗೆ ಅವಹೇಳನಕಾರಿಯಾಗಿ ಕಾಮೆಂಟ್ ಹಾಕುವುದು, ಆದಾದ ಬಳಿಕ ಕೇಸ್ ಹಾಕಿಸಿಕೊಂಡು ಪೊಲೀಸರಿಂದ ಬಂಧನಕ್ಕೊಳಗಾದ ಜನರು ಇದ್ದಾರೆ. ಚಿತ್ರನಟಿ ರಮ್ಯಾ ಹಾಗೂ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿರನ್ನು ಸೋಷಿಯಲ್ ಮೀಡಿಯಾಗಳಲ್ಲಿ ನಿಂದಿಸಿ ಅನೇಕರು ಈಗ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ. ಜೊತೆಗೆ ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಬೇರೆಯವರನ್ನು ನಿಂದಿಸುವುದನ್ನು ಕೆಟ್ಟ ಪ್ರವೃತ್ತಿಯಾಗಿ ಬೆಳೆಸಿಕೊಂಡಿದ್ದಾರೆ. ಅಂಥವರಿಗೆ ಪೊಲೀಸ್ ಇಲಾಖೆಯ ಈ ಎಚ್ಚರಿಕೆ ಅನ್ವಯವಾಗುತ್ತೆ.
— DGP KARNATAKA (@DgpKarnataka) September 1, 2025
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ.