/newsfirstlive-kannada/media/media_files/2025/08/02/ramya_prajwal_revanna-2025-08-02-18-46-37.jpg)
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪಿನಂತೆ ಪ್ರಜ್ವಲ್ ರೇವಣ್ಣ ಅವರು ಜೀವನ ಪರ್ಯಂತ ಜೈಲಿನಲ್ಲೇ ಇರಬೇಕು. ಸದ್ಯ ಈ ಸಂಬಂಧ ಕನ್ನಡ ಚಿತ್ರರಂಗದ ನಟಿ ರಮ್ಯಾ ಅವರು ಪ್ರತಿಕ್ರಿಯಿಸಿದ್ದಾರೆ.
ನ್ಯಾಯಾಲಯದಿಂದ ಆದೇಶ ಬರುತ್ತಿದ್ದಂತೆ ರಮ್ಯಾ ಅವರು ಎಕ್ಸ್ ಅಕೌಂಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಕಾನೂನು ಎಲ್ಲರಿಗೂ ಒಂದೇ. ಮಹಿಳೆಯರ ಮೇಲಿನ ಅಪರಾಧಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ರಮ್ಯಾ ಅವರು ಬರೆದು ಪೋಸ್ಟ್ ಮಾಡಿದ್ದಾರೆ. ಈ ಹಿಂದೆಯೂ ತಪ್ಪಿಸ್ಥರಿಗೆ ಶಿಕ್ಷೆಯಾಗಬೇಕು ಎಂದು ರಮ್ಯಾ ಅವರು ಹೇಳಿದ್ದರು.
ಇದನ್ನೂ ಓದಿ:ಪ್ರಜ್ವಲ್ ರೇವಣ್ಣಗೆ ಕಠಿಣ ಶಿಕ್ಷೆ ಬಗ್ಗೆ SIT ಮುಖ್ಯಸ್ಥ ಬಿಜಯ್ ಕುಮಾರ್ ಸಿಂಗ್ ಏನಂದ್ರು?
ಕೆ.ಆರ್ ನಗರದ ಮನೆಗೆಲಸದ ಮಹಿಳೆ ಮೇಲೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಅತ್ಯಾ*ಚಾರ ಎಸಗಿದ್ದರು. ಈ ಸಂಬಂಧ ಫೋಟೋ, ವಿಡಿಯೋ ಕೂಡ ಇಟ್ಟುಕೊಂಡಿದ್ದರು. ಸಾಕಷ್ಟು ವಿಡಿಯೋಗಳು ಕೂಡ ಪೆನ್ಡ್ರೈವ್ನಲ್ಲಿದ್ದವು. ಜಿಲ್ಲೆಯಲ್ಲಿ ಹಂಚಿಕೆ ಮಾಡಲಾಗಿತ್ತು. ಹೀಗಾಗಿ ರಾಜ್ಯ ಸರ್ಕಾರ ಈ ಪ್ರಕರಣವನ್ನು ಎಸ್ಐಟಿಗೆ ಒಪ್ಪಿಸಿತ್ತು. ತನಿಖೆ ನಡೆಸಿದ್ದ ಎಸ್ಐಟಿ ವರದಿ ಹಾಗೂ ಸಾಕ್ಷಿ ಸಮೇತ ಕೋರ್ಟ್ಗೆ ಸಲ್ಲಿಕೆ ಮಾಡಿತ್ತು. ಎರಡು ಕಡೆಯ ವಾದ, ಪ್ರತಿವಾದ ಆಲಿಸಿ ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
Law is the same for all. Crimes against women will get the harshest punishment https://t.co/1HuGbbqWP0
— Ramya/Divya Spandana (@divyaspandana) August 2, 2025
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ