/newsfirstlive-kannada/media/post_attachments/wp-content/uploads/2024/02/PNB_YOU_TUBE_2.jpg)
PNB ಯಲ್ಲಿ 750 ಸ್ಥಳೀಯ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
ಪಂಜಾಬ್ ನ್ಯಾಷನಲ್ ಬ್ಯಾಂಕ್ ಖಾಲಿ ಇರೋ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಇತ್ತೀಚೆಗೆ ರಿಲೀಸ್​​ ಆಗಿರೋ ಅಧಿಕೃತ ಅಧಿಸೂಚನೆ ಪ್ರಕಾರ ಒಟ್ಟು 750 ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದ್ದು, ಅರ್ಹ ಅಭ್ಯರ್ಥಿಗಳು ಅಪ್ಲೈ ಮಾಡಬಹುದು.
ಇನ್ನೂ, ನವೆಂಬರ್ 3ನೇ ತಾರಿಕಿನಿಂದಲೇ ಅರ್ಜಿ ಸಲ್ಲಿಕೆ ಶುರುವಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 23 ಆಗಿದೆ. ಆಸಕ್ತರು ಪಂಜಾಬ್​ ನ್ಯಾಷನಲ್​ ಬ್ಯಾಂಕ್​ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಸಂಬಳ ಎಷ್ಟು? ವಯಸ್ಸಿನ ಮಿತಿಯೇನು? ಶೈಕ್ಷಣಿಕ ಅರ್ಹತೆಯೇನು? ಅಂತಾ ನೋಡೋದಾದ್ರೆ..!
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 48,480 ರಿಂದ 85,920 ರೂ. ವೇತನ ಸಿಗಲಿದೆ. ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 20 ವರ್ಷಗಳು ಮತ್ತು ಗರಿಷ್ಠ ವಯಸ್ಸು 30 ವರ್ಷಗಳು. ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ. ಅಭ್ಯರ್ಥಿಗಳು ಭಾರತದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಡಿಗ್ರಿ ಪಡೆದಿರಬೇಕು. ಅರ್ಜಿ ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳಿಗೆ 1,180 ರೂ., ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 59 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಲಿಖಿತ ಪರೀಕ್ಷೆ, ಸ್ಕ್ರೀನಿಂಗ್ ಪರೀಕ್ಷೆ, ಸ್ಥಳೀಯ ಭಾಷಾ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆಯು ರೀಸನಿಂಗ್ ಮತ್ತು ಕಂಪ್ಯೂಟರ್ ಆಪ್ಟಿಟ್ಯೂಡ್, ಡೇಟಾ ಅನಾಲಿಸಿಸ್ , ಇಂಗ್ಲಿಷ್ ಮತ್ತು ಸಾಮಾನ್ಯ ಜಾಗೃತಿಯಂತಹ ವಿಷಯಗಳಿಂದ 150 ಅಂಕಗಳನ್ನು ಹೊಂದಿರುವ 150 ಬಹು-ಆಯ್ಕೆಯ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ.
/filters:format(webp)/newsfirstlive-kannada/media/post_attachments/wp-content/uploads/2024/12/JOBS_SBI_BANK.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us