/newsfirstlive-kannada/media/media_files/2025/09/18/bengalore-rain-2-2025-09-18-06-47-03.jpg)
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಮಳೆ ನಿಶ್ಚಿತ!
ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಶನಿವಾರದಿಂದ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಕೆಲ ಜಿಲ್ಲೆಗಳಿಗೆ ಆರೇಂಜ್ ಆಲರ್ಟ್ ನೀಡಿದೆ. ಆಕ್ಟೋಬರ್ 11 ರಂದು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ ಜಿಲ್ಲೆಗಳಿಗೆ ಆರೇಂಜ್ ಆಲರ್ಟ್ ನೀಡಿದೆ. ದಾವಣಗೆರೆ, ಕೊಡಗು, ಮಂಡ್ಯ, ಮೈಸೂರು, ಬೆಂಗಳೂರು ದಕ್ಷಿಣ ಜಿಲ್ಲೆ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಆಲರ್ಟ್ ನೀಡಲಾಗಿದೆ.
ಅಕ್ಟೋಬರ್ 12 ರಂದು ಚಿಕ್ಕಮಗಳೂರು, ಕೋಲಾರ, ಬೆಂಗಳೂರು ದಕ್ಷಿಣ ಜಿಲ್ಲೆಗಳಿಗೆ ಆರೇಂಜ್ ಆಲರ್ಟ್ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ, ನಗರ, ಚಾಮರಾಜನಗರ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಆಲರ್ಟ್ ನೀಡಲಾಗಿದೆ. ಅಕ್ಟೋಬರ್ 13 ಮತ್ತು 14 ರಂದು ಚಿಕ್ಕಮಗಳೂರು , ಬೆಂಗಳೂರು ದಕ್ಷಿಣ ಜಿಲ್ಲೆಗಳಿಗೆ ಯೆಲ್ಲೋ ಆಲರ್ಟ್ ನೀಡಲಾಗಿದೆ.
ಮುಂದಿನ 7 ದಿನಗಳ #ಮಳೆ#ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD) ರಾಜ್ಯದ ಕರಾವಳಿ, & ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಜೋರಾದ ಗಾಳಿಯೊಂದಿಗೆ ಚದುರದಿಂದ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆ ಹಾಗೂ ಅಕ್ಟೋಬರ್ 13 ರವರೆಗೆ ಅಲ್ಲಲ್ಲಿ ಭಾರಿ ಮಳೆ pic.twitter.com/ex9WvKrAgi
— Karnataka State Natural Disaster Monitoring Centre (@KarnatakaSNDMC) October 11, 2025
ಇನ್ನೂ ಕರಾವಳಿ ಭಾಗದ ಜಿಲ್ಲೆಗಳಿಗೆ ಅಕ್ಟೋಬರ್ 11 ಮತ್ತು 12 ರಂದು ವ್ಯಾಪಕ ಮಳೆಯಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಆಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಅತಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.