/newsfirstlive-kannada/media/media_files/2025/09/24/sl-byrappa-02-2025-09-24-15-13-07.jpg)
ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಬೆಂಗಳೂರಿನಲ್ಲಿ ವಿಧಿವಶ
ಕನ್ನಡದ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರು ಇಂದು ಮಧ್ಯಾಹ್ನ 2.38ಕ್ಕೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಕಾರ್ಡಿಯಾಕ್ ಆರೆಸ್ಟ್ ಆಗಿ ವಿಧಿವಶರಾಗಿದ್ದಾರೆ. ಕಳೆದ ಕೆಲ ತಿಂಗಳಿನಿಂದ ಅನಾರೋಗ್ಯದ ಕಾರಣದಿಂದ ಮೈಸೂರಿನಿಂದ ಬೆಂಗಳೂರಿಗೆ ಬಂದು ಪತ್ರಕರ್ತ ವಿಶ್ವೇಶ್ವರ್ ಭಟ್ ಅವರ ಮನೆಯಲ್ಲಿ ವಾಸ ಇದ್ದರು. ಭೈರಪ್ಪ ಅವರಿಗೆ ಇತ್ತೀಚೆಗೆ ಮರೆವಿನ ಕಾಯಿಲೆ ಕೂಡ ಇತ್ತು. 94 ವರ್ಷ ವಯಸ್ಸಾಗಿದ್ದರಿಂದ ವಯೋಸಹಜ ಕಾಯಿಲೆಗಳು ಇದ್ದವು. ಇವುಗಳಿಗೆ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮಧ್ಯಾಹ್ನ ಎಸ್.ಎಲ್.ಭೈರಪ್ಪ ಅವರನ್ನು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಜಯದೇವ ಮೆಮೋರಿಯಲ್ ರಾಷ್ಟ್ರೋತ್ಥಾನ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಮಧ್ಯಾಹ್ನ 2.38ಕ್ಕೆ ಭೈರಪ್ಪ ಅವರು ಹೃದಯಸ್ತಂಭನದಿಂದ ವಿಧಿವಶರಾಗಿದ್ದಾರೆ ಎಂದು ಜಯದೇವ ಮೆಮೋರಿಯಲ್ ರಾಷ್ಟ್ರೋತ್ಥಾನ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.