/newsfirstlive-kannada/media/media_files/2025/09/23/mahesh-shetty-thimmaroodi-2025-09-23-16-38-01.jpg)
ಮಹೇಶ್ ಶೆಟ್ಟಿ ತಿಮ್ಮರೋಡಿ ಜಿಲ್ಲೆಯಿಂದಲೇ ಗಡೀಪಾರು!
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ರೌಡಿ ಶೀಟರ್ ಮಹೇಶ್ ಶೆಟ್ಟಿ ತಿಮರೋಡಿರನ್ನು ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಲಾಗಿದೆ. ಒಂದು ವರ್ಷದ ಅವಧಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ, ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಸುಮಾರು 32 ಪ್ರಕರಣಗಳು ದಾಖಲಾಗಿವೆ. ಸೌಜನ್ಯ ಹೋರಾಟದಲ್ಲಿ ತೊಡಗಿಸಿ ಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ, ಈಗ ಬುರುಡೆ ಪ್ರಕರಣ ಹಾಗು ಶವ ಹೂತಿಟ್ಟ ಪ್ರಕರಣದಲ್ಲಿ ಆರೋಪಿ ಚೆನ್ನಯ್ಯನಿಗೆ ಆಶ್ರಯ ನೀಡಿದ್ದರು. ಸೆಪ್ಟೆಂಬರ್ 18 ರಂದು ಪುತ್ತೂರು ಉಪವಿಭಾಗಾಧಿಕಾರಿ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಬಂಟ್ವಾಳ DYSP ಗಡಿಪಾರಿನ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ಆದೇಶದಲ್ಲಿ ಹೇಳಿದ್ದಾರೆ.
ಗಡೀಪಾರು ಆದೇಶ ಹೊರಡಿಸಿದ ಬಳಿಕ ಸಾರ್ವಜನಿಕವಾಗಿ ಮಹೇಶ್ ಶೆಟ್ಟಿ ತಿಮರೋಡಿ ಕಾಣಿಸಿಕೊಂಡಿಲ್ಲ.
ಆದರೇ, ಉಪವಿಭಾಗಾಧಿಕಾರಿ ಆದೇಶವನ್ನು ಜಿಲ್ಲಾ ಕೋರ್ಟ್ ಹಾಗೂ ಹೈಕೋರ್ಟ್ ನಲ್ಲಿ ಪ್ರಶ್ನಿಸುವ ಅಧಿಕಾರ ಮಹೇಶ್ ಶೆಟ್ಟಿ ತಿಮ್ಮರೋಡಿ ಅವರಿಗೆ ಇದೆ. ಹೀಗಾಗಿ ಗಡೀಪಾರು ಆದೇಶದ ವಿರುದ್ಧ ಕೋರ್ಟ್ ಮೆಟ್ಟಿಲೇರಬಹುದು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.