/newsfirstlive-kannada/media/media_files/2025/08/04/ananta_subbarao-2025-08-04-23-05-40.jpg)
ಸಾರಿಗೆ ನೌಕರರು ಈ ಕ್ಷಣದಿಂದಲೇ ಕರ್ತವ್ಯಕ್ಕೆ ಹಾಜರಾಗಲು ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಸೂಚನೆ ನೀಡಿದೆ. ಸಾರಿಗೆ ನೌಕರರ ಮುಷ್ಕರವನ್ನು ಮುಂದೂಡಿದ್ದೇವೆ ಎಂದು ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಹೇಳಿದ್ದಾರೆ. ಹೈಕೋರ್ಟ್ ತೀವ್ರವಾಗಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯನ್ನು ತರಾಟೆಗೆ ತೆಗೆದುಕೊಂಡ ಕೆಲವೇ ಹೊತ್ತಿನಲ್ಲಿ ಅನಂತ್ ಸುಬ್ಬರಾವ್ ತಮ್ಮ ಸಂಗಾತಿಗಳೊಂದಿಗೆ ಪತ್ರಿಕಾಗೋಷ್ಠಿ ನಡೆಸಿದ್ದರು. ಈ ಪತ್ರಿಕಾಗೋಷ್ಠಿಯಲ್ಲಿ ಸಾರಿಗೆ ನೌಕರರ ಮುಷ್ಕರವನ್ನು ಮುಂದೂಡಿದ್ದೇವೆ ಎಂದು ಘೋಷಿಸಿದ್ದಾರೆ. ಜೊತೆಗೆ ಸಾರಿಗೆ ನೌಕರರು ಈ ಕ್ಷಣದಿಂದಲೇ ಕರ್ತವ್ಯಕ್ಕೆ ಹಾಜರಾಗಬೇಕೆಂದು ಕೂಡ ಸೂಚನೆ ನೀಡಿದ್ದಾರೆ.
ಆದರೇ, ನಾವು ಮುಷ್ಕರವನ್ನು ಕೈ ಬಿಟ್ಚಿಲ್ಲ, ಸದ್ಯಕ್ಕೆ ಮುಷ್ಕರವನ್ನು ಮುಂದೂಡಿದ್ದೇವೆ ಎಂದು ಸ್ಪಷ್ಟವಾಗಿ ಅನಂತ್ ಸುಬ್ಬರಾವ್ ಹೇಳಿದ್ದಾರೆ. ಈ ಮೂಲಕ ತಾತ್ಕಾಲಿಕವಾಗಿಯಷ್ಟೇ ಮುಷ್ಕರ ಸ್ಥಗಿತ ಮಾಡುವ ಸೂಚನೆಯನ್ನು ನೀಡಿದ್ದಾರೆ.
ಹೈಕೋರ್ಟ್ ನಲ್ಲೂ ಕೂಡ ಕೇಸ್ ದಾಖಲಾಗಿದೆ. ಹೈಕೋರ್ಟ್ ಕೂಡ ಮಧ್ಯಪ್ರವೇಶ ಮಾಡಿದೆ. ಹೀಗಾಗಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯು ಹೈಕೋರ್ಟ್ ತರಾಟೆ ತೆಗೆದುಕೊಂಡ ಬಳಿಕ ಮುಷ್ಕರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ತೀರ್ಮಾನಕ್ಕೆ ಬಂದಿದೆ.
ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗುವುದರಿಂದ ಎಸ್ಮಾ ಕಾಯಿದೆಯ ಉಲಂಘನೆಯಾಗಲ್ಲ ಎಂದು ಕೂಡ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ್ ಸುಬ್ಬರಾವ್ ಹೇಳಿದ್ದಾರೆ. ಸರ್ಕಾರ ನಮ್ಮನ್ನು ಮಾತುಕತೆಗೆ ಕರೆಯಬಹುದು ಎಂಬ ವಿಶ್ವಾಸವನ್ನು ಅನಂತ ಸುಬ್ಬರಾವ್ ವ್ಯಕ್ತಪಡಿಸಿದ್ದಾರೆ.