Advertisment

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್​ ಮಾಡಿದ್ದ ಇಬ್ಬರು ಕಿಡಿಗೇಡಿಗಳು ಅರೆಸ್ಟ್​

ಸ್ಯಾಂಡಲ್​ವುಡ್​ ಸ್ಟಾರ್ ನಟಿ ರಮ್ಯಾ ಅವರಿಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶಗಳು ಬಂದಿದ್ದವು. ಅವರೆಲ್ಲರು ದರ್ಶನ್ ಅಭಿಮಾನಿಗಳು ಎಂದು ಹೇಳಲಾಗಿತ್ತು.

author-image
NewsFirst Digital
actress ramya
Advertisment

ಸ್ಯಾಂಡಲ್​ವುಡ್​ ಸ್ಟಾರ್ ನಟಿ ರಮ್ಯಾ ಅವರಿಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶಗಳು ಬಂದಿದ್ದವು. ಅವರೆಲ್ಲರು ದರ್ಶನ್ ಅಭಿಮಾನಿಗಳು ಎಂದು ಹೇಳಲಾಗಿತ್ತು.

Advertisment

ಇದನ್ನೂ ಓದಿ:8 ಮದ್ವೆಯಾಗಿ ಲಕ್ಷ.. ಲಕ್ಷ ಸುಲಿಗೆ; ಇನ್ನೇನು ಮತ್ತೊಂದು ಆಗಬೇಕು ಅನ್ನುವಷ್ಟರಲ್ಲೇ ಸಿಕ್ಕಿಬಿದ್ಳು ಕಿಲಾಡಿ ಲೇಡಿ!

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಮ್ಯಾ ಸೈಬರ್ ಪೊಲೀಸ್ ಠಾಣೆಗೆ ಹೋಗಿ 43 ಅಕೌಂಟ್​ಗಳ ವಿರುದ್ಧ ದೂರು ದಾಖಲು ಮಾಡಿದ್ದರು. ಆ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದು, ಓರ್ವ ಆರೋಪಿಯನ್ನು​ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. 

ದರ್ಶನ್ ಅಭಿಮಾನಿಗಳ ಪಾಲಿಗೆ ರಣಚಂಡಿಯಾದ ರಮ್ಯಾ.. ಈಗ ನಿಂದಿಸಿದ ಫ್ಯಾನ್ಸ್​ಗೆ ಢವಢವ ಶುರು..!

ಏನಿದು ಕೇಸ್​..?

Advertisment

ಇತ್ತೀಚೆಗೆ ನಟಿ ರಮ್ಯಾ ಅವರು ರೇಣುಕಾಸ್ವಾಮಿ ಪರ ಸೋಷಿಯಲ್​ ಮೀಡಿಯಾದಲ್ಲಿ ಮಾತನಾಡಿದ್ದರು. ಸುಪ್ರೀಂ ಕೋರ್ಟ್​​ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯುವಾಗ ‘ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗೋ ಭರವಸೆ ಇದೆ’ ಎಂದಿದ್ದರು. ಇದು ದರ್ಶನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ದರ್ಶನ್ ಫ್ಯಾನ್ಸ್ ರಮ್ಯಾ ಅವರ ಸೋಶಿಯಲ್ ಮೀಡಿಯಾ ಪೋಸ್ಟ್​ಗಳಿಗೆ ಅಶ್ಲೀಲವಾಗಿ ಕಮೆಂಟ್​ಗಳನ್ನು ಮಾಡಿದ್ದರು. ಹೀಗಾಗಿ ರಮ್ಯಾ ಅವರು ಇದನ್ನು ಗಂಭೀರವಾಗಿ ಪರಿಗಣಿಸಿ ಸೈಬರ್ ಠಾಣೆಗೆ ದೂರು ದಾಖಲು ಮಾಡಿದ್ದರು. ಇದೀಗ ಸಿಸಿಬಿ ಸೈಬರ್ ಪೊಲೀಸರು ಐಪಿ ಅಡ್ರೆಸ್ ಆಧರಿಸಿ ಇಬ್ಬರು ಇಬ್ಬರನ್ನು ಬಂಧಿಸಿದ್ದಾರೆ. ಓರ್ವ ಬಳ್ಳಾರಿ ಮೂಲದವನಾಗಿದ್ದು, ಮತ್ತೊಬ್ಬ ಚಿತ್ರದುರ್ಗ ಮೂಲದವನಾಗಿದ್ದಾನೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Actress Ramya
Advertisment
Advertisment
Advertisment