/newsfirstlive-kannada/media/media_files/2025/10/13/raju-talikote-dies-2025-10-13-18-29-14.jpg)
ನಟ, ರಂಗಕರ್ಮಿ ರಾಜು ತಾಳಿಕೋಟೆ ವಿಧಿವಶ
ಹಿರಿಯ ನಟ, ರಂಗಕರ್ಮಿ ರಾಜು ತಾಳಿಕೋಟೆ ನಿಧನ ಹೊಂದಿದ್ದಾರೆ. ಹೃದಯಾಘಾತದಿಂದ ರಾಜು ತಾಳಿಕೋಟೆ ನಿಧನ ಹೊಂದಿದ್ದಾರೆ . ರಾಜು ತಾಳಿಕೋಟೆ ಅವರನ್ನು ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ವೈದ್ಯರು ಪರೀಕ್ಷೆ ನಡೆಸಿದ ಬಳಿಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಉಡುಪಿಯಲ್ಲಿ ಸಿನಿಮಾವೊಂದರ ಶೂಟಿಂಗ್ ಮುಗಿಸಿ ರೂಮುನಲ್ಲಿ ಮಲಗಿದ್ದಾಗ ಹಾರ್ಟ್ ಅಟ್ಯಾಕ್ ಆಗಿದೆ. ವೃತ್ತಿ ರಂಗಭೂಮಿ ಮೂಲಕ ಸಿನಿಮಾ ರಂಗಕ್ಕೆ ರಾಜು ತಾಳಿಕೋಟೆ ಎಂಟ್ರಿಯಾಗಿದ್ದರು.
ರಾಜು ತಾಳಿಕೋಟೆ ಅವರು ಮನಸಾರೆ, ಪಂಚರಂಗಿ, ಮತ್ತೊಂದು ಮದುವೆನಾ, ಮೈನಾ ಸಿನಿಮಾಗಳಲ್ಲಿ ನಟಿಸಿದ್ದಾರೆ. ಜೊತೆಗೆ ತಮ್ಮದೇ ನಾಟಕ ಕಂಪನಿಯನ್ನು ರಾಜು ತಾಳಿಕೋಟೆ ಹೊಂದಿದ್ದರು.
ರಾಜು ತಾಳಿಕೋಟೆ ಅವರು ಧಾರವಾಡದ ರಂಗಾಯಣದ ನಿರ್ದೇಶಕರಾಗಿದ್ದರು. ಬಿಗ್ ಬಾಸ್-7 ರ ಸ್ಪರ್ಧಿ ಕೂಡ ಆಗಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.