newsfirstkannada.com

ಸಿಲಿಕಾನ್​ ಸಿಟಿಯ ಈ ಬ್ರಿಡ್ಜ್​ ಮೇಲೆ ಇಂದಿನಿಂದ ಬೈಕ್​ಗಳಿಗೆ ಮಾತ್ರ ಅವಕಾಶ.. ಉಳಿದೆಲ್ಲವೂ ಬ್ಯಾನ್​, ಕಾರಣ?

Share :

Published April 17, 2024 at 9:23am

    ಯಾವ್ಯಾವ ರಸ್ತೆಗಳಿಂದ ಸಿಟಿ ಸೇರಬಹುದು, ಇಲ್ಲಿದೆ ಮಾರ್ಗಗಳ ಸೂತ್ರ

    ಮೇಲ್ಸೇತುವೆ ಕಾಮಗಾರಿ ಆರಂಭಿಸಿದ್ದು 2 ಹೊಸ ಟ್ರ್ಯಾಕ್‌ ಕಾರ್ಯ ಶುರು

    ಕಾರು, ಲಾರಿ, ಬಸ್​ ಸೇರಿದಂತೆ ಇನ್ನುಳಿದ ವಾಹನಗಳ ಸಂಚಾರ ನಿಷೇಧ

ಬೆಂಗಳೂರು: ಹೆಬ್ಬಾಳ ಬ್ರಿಡ್ಜ್​ ಬಳಿ ಹೊಸದಾಗಿ 2 ಹೊಸ ಟ್ರ್ಯಾಕ್​​ಗಳನ್ನ ನಿರ್ಮಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಇಂದಿನಿಂದ ಕಾಮಗಾರಿ ಪ್ರಾರಂಭಿಸುತ್ತಿದೆ. ಈ ಹಿನ್ನೆಲೆಯಲ್ಲಿ ಹೆಬ್ಬಾಳ ಮೇಲ್ಸೇತುವೆ ಮೇಲೆ ದ್ವಿಚಕ್ರ ವಾಹನಗಳನ್ನ ಹೊರತುಪಡಿಸಿ, ಕಾರು, ಲಾರಿ, ಬಸ್​ ಸೇರಿದಂತೆ ಇನ್ನುಳಿದ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿದೆ.

ಇದನ್ನೂ ಓದಿ: ಅಕ್ರಮ ಸಂಬಂಧ.. ಕಾರಿನಲ್ಲಿ ಸಿಕ್ಕಿಬಿದ್ದ ಹೆಂಡತಿ, ಬೇಸ್​ ಬಾಲ್​ ಬ್ಯಾಟ್​ನಿಂದ ಹಿಗ್ಗಾಮುಗ್ಗಾ ಬಾರಿಸಿದ ಗಂಡ

ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಇಲಾಖೆಯಿಂದ ಕೆಲ ಮಾರ್ಗ ಬದಲಾವಣೆ ಮಾಡಿದೆ. ಇದಕ್ಕೆ ಸಂಬಂಧಿಸಿದ ಪರ್ಯಾಯ ಮಾರ್ಗ ಯಾವುದು ಎಂಬುವುದಕ್ಕೆ ಇಲ್ಲಿದೆ ಉತ್ತರ.

  1. ಹೆಬ್ಬಾಳ ಮೇಲ್ಸೇತುವೆ ಕಡೆಗೆ ಬರುವ ವಾಹನಗಳ ಪೈಕಿ ದ್ವಿ-ಚಕ್ರ ವಾಹನಗಳನ್ನು ಹೊರತುಪಡಿಸಿ ಉಳಿದೆಲ್ಲ ವಾಹನಗಳಿಗೆ ಕೆ.ಆರ್.ಪುರಂ ಕಡೆಗೆ ಹೋಗುವ ಅಪ್​ರ್ಯಾಂಪ್ ನಿಷೇಧ ಮಾಡಲಾಗಿದೆ.
  2. ನಾಗವಾರ (ಔಟರ್ ರಿಂಗ್ ರಸ್ತೆ) ಕಡೆಯಿಂದ ನಗರದ ಒಳಗೆ ಮೇಖ್ರಿ ಸರ್ಕಲ್ ಮುಖಾಂತರ ಬರುತ್ತಿದ್ದ ವಾಹನಗಳ ಚಾಲಕರು ಹೆಬ್ಬಾಳ ಸರ್ಕಲ್​ನಲ್ಲಿ ಫ್ಲೈ ಓವರ್ ಕೆಳಗಿನಿಂದ ಬಲ ತಿರುವು ಪಡೆದು ಕೊಡಿಗೆಹಳ್ಳಿ ಜಂಕ್ಷನ್ ಬಳಿಯಲ್ಲಿ ಯೂ ಟರ್ನ್ ತೆಗೆದುಕೊಂಡು ಸರ್ವೀಸ್ ರಸ್ತೆಯಿಂದ ಹೆಬ್ಬಾಳ ಫ್ಲೈಓವರ್​ನ ರ್ಯಾಂಪ್ ಮುಖೇನ ನಗರದ ಕಡೆಗೆ ಚಲಿಸಲು ಅವಕಾಶ ಮಾಡಲಾಗಿದೆ.
  3. ಕೆ.ಆರ್.ಪುರಂ ನಾಗವಾರ ಕಡೆಯಿಂದ ನಗರದ ಕಡೆಗೆ ಬರುವ ವಾಹನಗಳಿಗೆ ಪರ್ಯಾಯ ಮಾರ್ಗಗಳಾದ ಐಒಸಿ-ಮುಕುಂದ ಥೀಯೇಟರ್ ರಸ್ತೆ, ಲಿಂಗರಾಜಪುರ ಮೇಲ್ಸೇತುವೆ ಮಾರ್ಗ ಮತ್ತು ನಾಗವಾರ ಟ್ಯಾನರಿ ರಸ್ತೆ ಮಾರ್ಗವಾಗಿ ನಗರದೊಳಗೆ ಪ್ರವೇಶಿಸಬೇಕು.
  4. ಹೆಗಡೆನಗರ-ಥಣಿಸಂದ್ರ ಕಡೆಯಿಂದ ಬರುವ ವಾಹನ ಸವಾರರು, ಚಾಲಕರು ಜಿಕೆವಿಕೆ- ಜಕ್ಕೂರು ರಸ್ತೆ ಮೂಲಕ ನಗರ ಪ್ರವೇಶಿಸಬಹುದಾಗಿದೆ.
  5. ಕೆ.ಆರ್.ಪುರಂ ಕಡೆಯಿಂದ ಹೆಬ್ಬಾಳ ಮಾರ್ಗವಾಗಿ ಯಶವಂತಪುರ ಕಡೆಗೆ ಚಲಿಸುವ ವಾಹನಗಳು ಹೆಬ್ಬಾಳ ಫ್ಲೈಓವರ್ ಕೆಳಗಡೆ ನೇರವಾಗಿ ಬಿಇಎಲ್ ಸರ್ಕಲ್ ತಲುಪಿ ಎಡತಿರುವು ಪಡೆದು ಸದಾಶಿವನಗರ ಜಂಕ್ಷನ್‌ನಲ್ಲಿ ಬಲತಿರುವು ಪಡೆದು ಐಐಎಸ್‌ಸಿ ಮುಖಾಂತರ ಚಲಿಸಬಹುದಾಗಿದೆ.
  6. ಕೆ.ಆರ್.ಪುರ, ಹೆಣ್ಣೂರು, ಎಚ್.ಆರ್.ಬಿ.ಆರ್ ಲೇಔಟ್, ಕೆಜಿ ಹಳ್ಳಿ, ಬಾಣಸವಾಡಿ ಕಡೆಗಳಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕಡೆ ಹೋಗುವ ವಾಹನಗಳು ಹೆಣ್ಣೂರು-ಬಾಗಲೂರು ರಸ್ತೆಯನ್ನು ಬಳಸಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಬಹುದು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸಿಲಿಕಾನ್​ ಸಿಟಿಯ ಈ ಬ್ರಿಡ್ಜ್​ ಮೇಲೆ ಇಂದಿನಿಂದ ಬೈಕ್​ಗಳಿಗೆ ಮಾತ್ರ ಅವಕಾಶ.. ಉಳಿದೆಲ್ಲವೂ ಬ್ಯಾನ್​, ಕಾರಣ?

https://newsfirstlive.com/wp-content/uploads/2024/04/BNG_HEBBALA.jpg

Load More