/newsfirstlive-kannada/media/post_attachments/wp-content/uploads/2025/05/mandya4.jpg)
ಮಂಡ್ಯ: ಟ್ರಾಫಿಕ್ ಪೊಲೀಸರ ಯಡವಟ್ಟಿಗೆ ಸ್ವರ್ಣಸಂದ್ರ ಬಳಿಯ ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮಗು ಬಲಿಯಾಗಿದೆ. ಹೃತೀಕ್ಷ ಮೃತ ಮಗು. ವಾಣಿ-ಅಶೋಕ್ ಎಂಬ ದಂಪತಿಗೆ ಸೇರಿದ ಮೂರೂವರೆ ವರ್ಷದ ಹೃತೀಕ್ಷ ಮೃತಪಟ್ಟಿದ್ದಾಳೆ. ದಂಪತಿ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೊರವನಹಳ್ಳಿಯ ನಿವಾಸಿ.
ಇದನ್ನೂ ಓದಿ:ಹೃದಯ ವಿದ್ರಾವಕ ಘಟನೆ.. ಟ್ರಾಫಿಕ್ ಪೊಲೀಸರ ಯಡವಟ್ಟಿಗೆ ಮಗು ದಾರುಣ ಬಲಿ
ಪೊಲೀಸರು ಮಾಡಿದ ಯಡವಟ್ಟು ಏನು..?
ವಾಣಿ-ಅಶೋಕ್ ಪುತ್ರಿ ಹೃತೀಕ್ಷಗೆ ನಾಯಿ ಕಚ್ಚಿತ್ತು. ಹೀಗಾಗಿ ಆ ಕೂಡಲೇ ಮಗುವನ್ನು ಮಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಇದೇ ವೇಳೆ ಟ್ರಾಫಿಕ್ ಪೊಲೀಸರು ಹೆಲ್ಮೆಟ್ ತಪಾಸಣೆಗೆಂದು ಬೈಕ್ ಅಡ್ಡಗಟ್ಟಿದ್ದಾರೆ. ಇದೇ ವೇಳೆ ಬೈಕ್ನಲ್ಲಿದ್ದ ತಂದೆ, ತಾಯಿ ಹಾಗೂ ಮಗು ಆಯತಪ್ಪಿ ಕೆಳಗೆ ಬಿದ್ದಿದ್ದಾರೆ.
ಕೆಳಗೆ ಬಿದ್ದ ಪರಿಣಾಮ ಹೃತೀಕ್ಷಳ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಪರಿಣಾಮ ತೀವ್ರ ರಕ್ತಸ್ರವಾದಿಂದ ಮಗು ಸ್ಥಳದಲ್ಲೇ ಜೀವಬಿಟ್ಟಿದೆ. ಇನ್ನೂ, ಮುದ್ದಾದ ಮಗುವನ್ನು ಕಳೆದುಕೊಂಡು ಪೋಷಕರು ಮಿಮ್ಸ್ ಆಸ್ಪತ್ರೆ ಎದುರು ರಸ್ತೆಯಲ್ಲೇ ಶವವಿಟ್ಟು ಅಳುತ್ತಿದ್ದಾರೆ. ಅಲ್ಲದೇ ಪೊಲೀಸರ ನಡೆಗೆ ಸಾರ್ವಜನಿಕರು ತೀವ್ರ ಆಕ್ರೋಶ ಹೊರ ಹಾಕುತ್ತಿದ್ದಾರೆ. ಮಂಡ್ಯ ಮಿಮ್ಸ್ ಆಸ್ಪತ್ರೆ ಎದುರಿನ ಹೆದ್ದಾರಿ ತಡೆದು ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ