Advertisment

ಬೆಂಗಳೂರಲ್ಲಿ ಕೇಕ್ ತಿಂದು ಒಂದೇ ಕುಟುಂಬದ ಮೂವರು ಅಸ್ವಸ್ಥ; 5 ವರ್ಷದ ಮಗು ದಾರುಣ ಸಾವು

author-image
admin
Updated On
ಬೆಂಗಳೂರಲ್ಲಿ ಕೇಕ್ ತಿಂದು ಒಂದೇ ಕುಟುಂಬದ ಮೂವರು ಅಸ್ವಸ್ಥ; 5 ವರ್ಷದ ಮಗು ದಾರುಣ ಸಾವು
Advertisment
  • ಹೆಂಡತಿ, ಮಕ್ಕಳಿಗಾಗಿ ಕೇಕ್ ತಂದು ಕೊಟ್ಟಿದ್ದ ಸ್ವಿಗ್ಗಿ ಡೆಲಿವರಿ ಬಾಯ್
  • ಮಗ ಸಾವು, ಕಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ತಂದೆ, ತಾಯಿಗೆ ಚಿಕಿತ್ಸೆ
  • ತಂದೆ-ತಾಯಿಗೆ ಪ್ರಜ್ಞೆ ಬರೋದನ್ನೇ ಕಾಯುತ್ತಿರುವ ಪೊಲೀಸರು!

ಬೆಂಗಳೂರು: ಮನೆಯಲ್ಲಿ ಕೇಕ್‌ ತಿಂದು ಒಂದೇ ಕುಟುಂಬದ ಮೂವರು ಅಸ್ವಸ್ಥರಾದ ಘಟನೆ ಕೆ.ಪಿ ಅಗ್ರಹಾರದ ಭುವನೇಶ್ವರಿ ನಗರದಲ್ಲಿ ನಡೆದಿದೆ. ಆಸ್ಪತ್ರೆಗೆ ದಾಖಲಾದ ಮೂವರಲ್ಲಿ 5 ವರ್ಷದ ಮಗು ಸಾವನ್ನಪ್ಪಿದ್ರೆ ತಂದೆ-ತಾಯಿಗೆ ಇನ್ನೂ ಪ್ರಜ್ಞೆ ಬಂದಿಲ್ಲ. ಪೊಲೀಸರಿಗೆ ಈ ಘಟನೆಯ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗುತ್ತಿದೆ.

Advertisment

ಕೆ.ಪಿ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅಸ್ವಸ್ಥರಾದ ತಂದೆ, ತಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೇಕ್ ತಿಂದ 5 ವರ್ಷದ ಧೀರಜ್‌ ಫುಡ್ ಪಾಯಿಸನ್‌ ಇಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: BBK11: ಜಗದೀಶ್​ ಅಲ್ವಂತೆ! ಬಿಗ್​ ಬಾಸ್​ ಮನೆಯಲ್ಲಿ ಈ ವ್ಯಕ್ತಿ ತುಂಬಾ ಡೇಂಜರಸ್ ಎಂದ ನಟಿ ಯಮುನಾ! 

ಬಾಲರಾಜ್ ಎಂಬ ವ್ಯಕ್ತಿ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಬಾಲರಾಜ್ ಮನೆಗೆ ಕೇಕ್‌ ತೆಗೆದುಕೊಂಡು ಹೋಗಿದ್ದ. ಮನೆಯಲ್ಲಿ ಪತ್ನಿ ನಾಗಲಕ್ಷ್ಮೀ ಮತ್ತು ಮಗ ಧೀರಜ್ ಜೊತೆ ಸೇರಿ ಕೇಕ್ ತಿಂದಿದ್ದ. ಕೇಕ್ ತಿಂದ ನಂತರ ಮೂವರು ಆರೋಗ್ಯದಲ್ಲಿ ಏರುಪೇರಾಗಿದೆ. ಕೂಡಲೇ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Advertisment

ಕಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ತಂದೆ ಬಾಲರಾಜ್, ತಾಯಿ ನಾಗಲಕ್ಷ್ಮಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರಿಗೆ ದೂರು ಕೊಡಲು, ಈ ಘಟನೆ ಹೇಗೆ ನಡೆದಿದೆ ಅನ್ನೋ ಬಗ್ಗೆ ಹೇಳಲು ಯಾರು ಇಲ್ಲ. ಘಟನೆ ಹೀಗೆ ಆಗಿದೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲವಾಗಿದೆ. ಇಬ್ಬರಿಗೂ ಪ್ರಜ್ಞೆ ಬಂದ ಬಳಿಕ ಪೊಲೀಸರು ಮಾಹಿತಿ ಪಡೆಯಲು ಕಾಯುತ್ತಿದ್ದಾರೆ.

ಇದನ್ನೂ ಓದಿ: Mossad ಏಜೆಂಟ್​ ಎಲಿ ಕೊಹೆನ್.. ಇವನು ನೆಟ್ಟ ನೀಲಗಿರಿ ಮರಗಳು ಇಸ್ರೇಲ್​ಗೆ ವರವಾಗಿದ್ದು ಹೇಗೆ? ಸ್ಪೆಷಲ್ ರಿಪೋರ್ಟ್ ಇಲ್ಲಿದೆ! 

ಕೇಕ್ ತಿಂದ ಮೂವರಿಗೂ ಫುಡ್ ಪಾಯಿಸನ್ ಆಗಿರುವ ಶಂಕೆ ವ್ಯಕ್ತವಾಗಿದೆ. ಐಸಿಯುನಲ್ಲಿರುವ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಿಂದ ರಿಪೋರ್ಟ್ ಬಂದ ಬಳಿಕ ಅಸಲಿಗೆ ಏನಾಯ್ತು ಅನ್ನೋದು ಗೊತ್ತಾಗಬೇಕಿದೆ. ಕೇಕ್ ತಂದಿದ್ದು ಯಾವ ಬೇಕರಿಯಿಂದ. ಕೇಕ್‌ನಲ್ಲಿರೋ ಅಂಶಗಳಿಂದ ಅಸ್ವಸ್ಥರಾಗಿದ್ದಾರಾ? ಈ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರು ಸದ್ಯ ವೈದ್ಯರ ರಿಪೋರ್ಟ್‌ಗಾಗಿ ಕಾಯುತ್ತಿದ್ದಾರೆ.

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment