/newsfirstlive-kannada/media/post_attachments/wp-content/uploads/2024/10/Train-Accident.jpg)
ಚೆನ್ನೈ: ತಮಿಳುನಾಡಿನಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಗೂಡ್ಸ್ ಟ್ರೈನ್​ಗೆ ಎಕ್ಸ್​ಪ್ರೆಸ್​ ರೈಲು ಡಿಕ್ಕಿ ಹೊಡೆದ ಪರಿಣಾಮ ಬೋಗಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ಅಪಘಾತದಲ್ಲಿ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಮೈಸೂರು-ದರ್ಬಾಂಗ್​ ಎಕ್ಸ್‌ಪ್ರೆಸ್ ರೈಲು ಚೆನ್ನೈ ಬಳಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಚೆನ್ನೈ ಸಮೀಪದ ಕವರೈಪೆಟ್ಟೈ ರೈಲು ನಿಲ್ದಾಣದ ಬಳಿ ಭಾಗಮತಿ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಸ್ಥಳಕ್ಕೆ ರಕ್ಷಣಾ ಪಡೆ ದೌಡಾಯಿಸಿದೆ. ಸದ್ಯಕ್ಕೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ತಿಳಿದು ಬಂದಿದೆ. ಆದರೆ, ಟ್ರೈನ್​ಗಳ ಬೋಗಿಗಳು ಹೊತ್ತಿ ಉರಿದಿವೆ.
ರೈಲಿನ ಎರಡು ಬೋಗಿಗಳು ಹಳಿ ತಪ್ಪಿದ್ದವು. ಮೈಸೂರು-ದರ್ಬಾಂಗ್​ ಎಕ್ಸ್‌ಪ್ರೆಸ್ ಕವರಾಯಪೆಟ್ಟೈಯಲ್ಲಿ ರಾತ್ರಿ ಸುಮಾರು 9 ಗಂಟೆಗೆ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಕೂಡಲೇ ರಕ್ಷಣಾ ತಂಡಗಳು ಆ್ಯಂಬುಲೆನ್ಸ್​ ಜತೆಗೆ ಸ್ಥಳಕ್ಕೆ ಆಗಮಿಸಿದ್ದಾರೆ ಎಂದು ತಮಿಳುನಾಡು ಪೊಲೀಸ್ರು ತಿಳಿಸಿದ್ದಾರೆ.
ಇದನ್ನೂ ಓದಿ: BBK11:ನರಕದ ಮನೆ ಪೀಸ್ ಪೀಸ್ ಮಾಡಿದ ಬಿಗ್​ಬಾಸ್​; ಅಸಲಿಗೆ ಆಗಿದ್ದು ಏನು ಗೊತ್ತಾ?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us