newsfirstkannada.com

Breaking News: ‘ಉದ್ಯಾನ್ ಎಕ್ಸ್‌ಪ್ರೆಸ್’ ರೈಲಿನಲ್ಲಿ ದಿಢೀರ್ ಬೆಂಕಿ.. ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ಅಗ್ನಿ ಅವಘಡ

Share :

19-08-2023

    ರೈಲಿನ ಎಂಜಿನ್​​ನಲ್ಲಿ ಅಗ್ನಿ ಅವಘಡ, ಪ್ರಯಾಣಿಕರು ಗಾಬರಿ

    ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡು, ಬೆಂಕಿ ನಂದಿಸುವಲ್ಲಿ ಯಶಸ್ವಿ

    ಮೆಜೆಸ್ಟಿಕ್ ಸುತ್ತುಮುತ್ತ ಆವರಿಸಿದ ದಟ್ಟ ಹೊಗೆ; ಜನ ಕಂಗಾಲ್

ಬೆಂಗಳೂರು: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ‘ಉದ್ಯಾನ್ ಎಕ್ಸ್‌ಪ್ರೆಸ್’ ರೈಲಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ರೈಲಿನ ಇಂಜಿನ್​ನಲ್ಲಿ ದಿಢೀರ್ ಹೊಗೆ ಕಾಣಿಸಿಕೊಂಡಿದ್ದನ್ನು ನೋಡಿದ ಪ್ರಯಾಣಿಕರು ಗಾಬರಿಯಾಗಿ ರೈಲಿನಿಂದ ಇಳಿದಿದ್ದಾರೆ.

ತಾಂತ್ರಿಕ ಸಮಸ್ಯೆಯಿಂದ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ರೈಲ್ವೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮೆಜೆಸ್ಟಿಕ್ ಸುತ್ತಮುತ್ತ ದಟ್ಟ ಹೊಗೆ ಆವರಿಸಿತ್ತು. ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನ ಕೋಚ್​ಗಳಿಗೂ ಬೆಂಕಿ ಆವರಿಸಿತ್ತು ಎನ್ನಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking News: ‘ಉದ್ಯಾನ್ ಎಕ್ಸ್‌ಪ್ರೆಸ್’ ರೈಲಿನಲ್ಲಿ ದಿಢೀರ್ ಬೆಂಕಿ.. ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ಅಗ್ನಿ ಅವಘಡ

https://newsfirstlive.com/wp-content/uploads/2023/08/TRAIN_FIRE.jpg

Load More