Advertisment

ಮರಬಿದ್ದು ಮೆದುಳು ನಿಷ್ಕ್ರಿಯಗೊಂಡಿದ್ದ ಪ್ರಕರಣ.. ಕೊನೆಗೂ ಬದುಕಿ ಬರಲಿಲ್ಲ ಅಕ್ಷಯ್..

author-image
Veena Gangani
Updated On
ಸಾವಿನಲ್ಲೂ ಸಾರ್ಥಕತೆ ಮೆರೆದ ಅಕ್ಷಯ್.. ಇಬ್ಬರಿಗೆ ನೇತ್ರದಾನ
Advertisment
  • ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಅಕ್ಷಯ್​
  • ಮಟನ್ ತೆಗೆದುಕೊಂಡು ವಾಪಸ್​ ಆಗುತ್ತಿದ್ದಾಗ ನಡೆದ ಘಟನೆ
  • ಬ್ರಹ್ಮ ಮಂದಿರದ ಬಳಿ ಅಕ್ಷಯ್ ತಲೆ ಮೇಲೆ ಬಿದ್ದ ಮರದ ಕೊಂಬೆ

ಬೆಂಗಳೂರು: ಮರದ ಕೊಂಬೆ ಬಿದ್ದು ಪ್ರಜ್ಞೆ ಕಳೆದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಕ್ಷಯ್ ನಿಧನರಾಗಿದ್ದಾರೆ. ಹೌದು, ಜೂನ್ 15 ಭಾನುವಾರ ಅಕ್ಷಯ್ ತಂದೆ ಶಿವರಾಮ್​ರ 62ನೇ ಬರ್ತ್ ಡೇ ಇತ್ತು. ಆಗ ಅಪ್ಪನಿಗೆ ಮಟನ್ ಇಷ್ಟ ಅನ್ನೋ ಕಾರಣಕ್ಕೆ ಮಧ್ಯಾಹ್ನ ಒಂದು ಗಂಟೆಯ ಸುಮಾರಿಗೆ ಮಟನ್ ತರಲು ಹೋಗಿ ವಾಪಸ್ ಬರುತ್ತಿದ್ದಾಗ ಬ್ರಹ್ಮ ಮಂದಿರದ ಬಳಿ ಮರದ ಕೊಂಬೆ ಮುರಿದು ಅಕ್ಷಯ್ ತಲೆ ಮೇಲೆ ಬಿದ್ದಿದೆ.

Advertisment

ಇದನ್ನೂ ಓದಿ: ಥಗ್ ಲೈಫ್ ಬಿಡುಗಡೆ ಮಾಡಿದರೆ ಸಂಪೂರ್ಣ ರಕ್ಷಣೆ ನೀಡುತ್ತೇವೆ -ಕರ್ನಾಟಕ ಸರ್ಕಾರ ಅಫಿಡವಿಟ್

ಪರಿಣಾಮ ಪ್ರಜ್ಜೆ ತಪ್ಪಿ ರಸ್ತೆಯಲ್ಲಿ ಬಿದ್ದ ಅಕ್ಷಯ್​​ನನ್ನ ಕೂಡಲೇ ಸ್ಥಳೀಯ ಪ್ರಶಾಂತ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ತಲೆ ಭಾಗಕ್ಕೆ ಗಂಭೀರ ಗಾಯವಾದ ಕಾರಣ, ತಲೆಯಲ್ಲಿ ರಕ್ತ ಹರಿಯುತ್ತಿರೋದು ನಿಲ್ಲದ ಕಾರಣ ತ್ಯಾಗರಾಜನಗರದ ಪ್ರಶಾಂತ್ ಆಸ್ಪತ್ರೆಯಿಂದ ಜಯನಗರದ 3ನೇ ಬ್ಲಾಕ್​ನಲ್ಲಿರುವ ಅಪೋಲೊ ಆಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದ ಅಕ್ಷಯ್​ ಇಂದು ಮಧ್ಯಾಹ್ನ 1 ಗಂಟೆಗೆ ಉಸಿರು ನಿಲ್ಲಿಸಿದ್ದಾರೆ.

ಅಕ್ಷಯ್ ಮೂಲತಃ ಬನಶಂಕರಿಯ ಕತ್ರಿಗುಪ್ಪೆಯ ಶ್ರೀನಗರದ ನಿವಾಸಿ. ರಾಜಾಜಿನಗರದ ಖಾಸಗಿ ಕಂಪನಿವೊಂದರಲ್ಲಿ ಹೆಚ್.ಆರ್. ಕೆಲಸ ಮಾಡ್ತಿದ್ದ. ಇಡೀ ಕುಟುಂಬದ ಆಧಾರ ಸ್ತಂಭವಾಗಿದ್ದ. ತಾನೇ ದುಡಿದು ಇಡೀ ಕುಟುಂವನ್ನ ಸಾಕ್ತಿದ್ದ. ಆದ್ರೆ ಇದ್ದ ಒಬ್ಬ ಮಗನನ್ನು ಕಳೆದುಕೊಂಡ ಕುಟುಂಬಸ್ಥರು ಕಣ್ಣಿರು ಹಾಕುತ್ತಿದ್ದಾರೆ. ಇನ್ನೂ ಮೃತ ಅಕ್ಷಯ್ ಕುಟುಂಬಕ್ಕೆ ಬಿಬಿಎಂಪಿ ಚಿಕಿತ್ಸಾ ವೆಚ್ಚದ ಹೊರತುಪಡಿಸಿ ಐದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ.

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment