/newsfirstlive-kannada/media/post_attachments/wp-content/uploads/2024/09/Police-Vehicle.jpg)
ಕಲಬುರಗಿಯ ಹೊರವಲಯದ ಪಟ್ನಾ ಗ್ರಾಮದ ಬಳಿ ಮೂವರನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಸಿದ್ದಾರೂಢ (32) , ಜಗದೀಶ್ (25) ಮತ್ತು ರಾಮಚಂದ್ರ (35) ಹತ್ಯೆಯಾದವರು.
ಸಿದ್ದಾರೂಢ, ಜಗದೀಶ್, ರಾಮಚಂದ್ರ ಮೂವರು ಕೂಡ ಸಂಬಂಧಿಕರಾಗಿದ್ದಾರೆ. ಇಲ್ಲಿನ ಡ್ರೈವರ್ ಡಾಬಾಗೆ ನುಗ್ಗಿದ ದುಷ್ಕರ್ಮಿಗಳು ಮನಸೋ ಇಚ್ಛೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಹಳೇ ವೈಷಮ್ಯಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಚಾರ ತಿಳಿದ ಕಲಬುರಗಿ ಜನ ಬೆಚ್ಚಿಬಿದ್ದಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ದುಷ್ಕರ್ಮಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಅವರ ಬಂಧನದ ಬಳಿಕ ಕೊಲೆಗೆ ನಿಜವಾದ ಕಾರಣ ತಿಳಿದುಬರಲಿದೆ.
ಇದನ್ನೂ ಓದಿ: ಶಿಗ್ಗಾಂವಿಯಲ್ಲಿ ಗುತ್ತಿಗೆದಾರನ ಬರ್ಬರ ಹತ್ಯೆ.. ಆರೋಪಿಯ ಮನೆಗೆ ಬೆಂಕಿ ಇಟ್ಟು ಆಕ್ರೋಶ..
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ