newsfirstkannada.com

ಮುರುಘಾ ಶರಣರಿಗೆ ಮತ್ತೆ ಸಂಕಷ್ಟ; ಸುಪ್ರೀಂಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಿದ ಒಡನಾಡಿ ಸಂಸ್ಥೆ

Share :

Published January 31, 2024 at 12:14pm

Update January 31, 2024 at 12:16pm

    ಮುರುಘಾ ಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ

    ಬಾಲಕಿಯರಿಂದ ಪೊಲೀಸ್​ ಠಾಣೆಯಲ್ಲಿ ದಾಖಲಾಗಿದ್ದ ದೂರು

    ಇದೇ ವಿಚಾರಕ್ಕೆ ಸೆ.1, 2022 ರಂದು ಶರಣರನ್ನ ಬಂಧಿಸಲಾಗಿತ್ತು

ಮೈಸೂರು: ಪೋಕ್ಸೋ ಕಾಯ್ದೆಯಡಿ ಆರೋಪಿ ಆಗಿರುವ ಚಿತ್ರದುರ್ಗದ ಮುರುಘಾ ಶರಣರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಒಡನಾಡಿ ಸಂಸ್ಥೆಯು ಸುಪ್ರೀಂಕೋರ್ಟ್​​ನಲ್ಲಿ ಮೇಲ್ಮನವಿ ಸಲ್ಲಿಸಿದೆ.

ಮುರುಘಾ ಶ್ರೀಗೆ ಹೈಕೋರ್ಟ್ ಶರತ್ತುಬದ್ಧ ಜಾಮೀನು ನೀಡಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಹಾಗು ಸತೀಶ್ ಚಂದ್ರ ಶರ್ಮ ಅವರಿದ್ದ ಪೀಠವು ಜಾಮೀನು ಮಂಜೂರು ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು. ಹೀಗಾಗಿ ನ್ಯಾಯಪೀಠ ಪ್ರಕರಣ ವಿಚಾರಣೆ ಅಂಗೀಕರಿಸಿದೆ.

ಮುರುಘಾ ಶ್ರೀ ವಿಚಾರವಾಗಿ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಲಾಗಿದೆ. ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ. ಒಡನಾಡಿ ಪರವಾಗಿ ವಕೀಲೆ ಅಪರ್ಣಾ ಭಟ್ ಅವರು ವಾದ ಮಂಡನೆ ಮಾಡಲಿದ್ದಾರೆ.

ಇಬ್ಬರು ಬಾಲಕಿಯರು ಮುರುಘಾ ಶ್ರೀಗಳು ನಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದರು. ಹೀಗಾಗಿ ಅವರ ಮೇಲೆ ಆಗಸ್ಟ್​ 26, 2022 ರಂದು ಪ್ರಕರಣ ದಾಖಲಾಗಿತ್ತು.  ಮೈಸೂರಿನ ನಜರ್ಬಾದ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸೆಪ್ಟೆಂಬರ್​ 1, 2022 ರಂದು ಶರಣರನ್ನ ಬಂಧಿಸಲಾಗಿತ್ತು. ಹೈಕೋರ್ಟ್ ನವೆಂಬರ್ 2023 ರಂದು ಜಾಮೀನು ಮಂಜೂರು ಮಾಡಿತ್ತು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮುರುಘಾ ಶರಣರಿಗೆ ಮತ್ತೆ ಸಂಕಷ್ಟ; ಸುಪ್ರೀಂಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಿದ ಒಡನಾಡಿ ಸಂಸ್ಥೆ

https://newsfirstlive.com/wp-content/uploads/2023/11/Murugha-Swamiji.jpg

Load More