newsfirstkannada.com

ಶೋಭಾಗೆ ಮುಳುವಾಗ್ತಿದೆ ಯದ್ವಾತದ್ವಾ ಹೇಳಿಕೆ; ಕೇಂದ್ರ ಚುನಾವಣಾ ಆಯೋಗದಿಂದ ಕ್ರಮಕ್ಕೆ ನಿರ್ದೇಶನ

Share :

Published March 21, 2024 at 7:30am

    ಲೋಕ ಚುನಾವಣೆ ವೇಳೆ ಶೋಭಾ ಕರಂದ್ಲಾಜೆಗೆ ಸಂಕಷ್ಟ

    ಘಟನೆ ಬಗ್ಗೆ 48 ಗಂಟೆಗಳ ಒಳಗೆ ವರದಿ ನೀಡುವಂತೆ ಸೂಚನೆ

    ದೂರಿನ ಕುರಿತು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ

ತಮಿಳುನಾಡಿನಿಂದ ಬಂದವರು ಬಾಂಬ್​ ಇಟ್ಟರು ಎಂದು ಹೇಳಿಕೆ ಕೊಟ್ಟಿದ್ದ ಶೋಭಾ ಕರಂದ್ಲಾಜೆ ವಿರುದ್ಧ ತಮಿಳುನಾಡಿನ ಆಡಳಿತರೂಢ ಡಿಎಂಕೆ ಪಕ್ಷ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ತಮಿಳುನಾಡು-ಕರ್ನಾಟಕದ ಜನರ ಮಧ್ಯೆ ಕೋಮು ದ್ವೇಷದ ಭಾಷಣ ಮಾಡಿದ್ದಾರೆ. ಹೀಗಾಗಿ ಚುನಾವಣಾ ಆಯೋಗವು ಅವರ ವಿರುದ್ಧ ಪ್ರಜಾಪತ್ರಿನಿಧಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ಜೊತೆಗೆ ಕ್ರಮ ತೆಗೆದುಕೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಿದೆ.

ಮಂಗಳವಾರ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ್ದ ಶೋಭಾ ಕರಂದ್ಲಾಜೆ, ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟಕ್ಕೆ ತಮಿಳುನಾಡು ನಂಟು ಇದೆ ಹೇಳಿದ್ದರು. ಇದು ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆಯನ್ನು ನೀಡಿ ಕ್ಷಮೆಯಾಚನೆ ಮಾಡಿದ್ರು.

ಆದರೆ ತಮಿಳುನಾಡಿನಿಂದ ಬಂದವರು ಬಾಂಬ್​ ಇಟ್ಟರು ಎಂದು ಹೇಳಿಕೆ ಕೊಟ್ಟಿದ್ದ ಶೋಭಾ ಕರಂದ್ಲಾಜೆ ವಿರುದ್ಧ ತಮಿಳುನಾಡಿನ ಆಡಳಿತರೂಢ ಡಿಎಂಕೆ ಪಕ್ಷ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಚುನಾವಣಾ ಆಯೋಗಕ್ಕೆ ನೀಡಿದ ದೂರಿನಲ್ಲಿ, ಕೇಂದ್ರ ಸಚಿವರ ಹೇಳಿಕೆಯು ತಮಿಳುನಾಡಿನ ಜನರನ್ನು ಭಯೋತ್ಪಾದಕರು ಎಂದು ಬಿಂಬಿಸಲಾಗಿದೆ. ತಮಿಳರು ಮತ್ತು ಕನ್ನಡಿಗರ ನಡುವೆ ದ್ವೇಷ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಕೇಂದ್ರ ಸಚಿವೆ ಪ್ರಜಾಪ್ರತಿನಿಧಿ ಕಾಯ್ದೆ, 1951 ಮತ್ತು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಡಿಎಂಕೆ ಆರೋಪಿಸಿದೆ.

48 ಗಂಟೆಗಳೊಳಗೆ ವರದಿ ಕೇಳಿದ ಚುನಾವಣಾ ಆಯೋಗ
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಡಿಎಂಕೆ ನೀಡಿದ ದೂರನ್ನು ಕೇಂದ್ರ ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ. ಡಿಎಂಕೆ ದೂರಿನ ಕುರಿತು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗ, ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ನೀಡಿದೆ. ಹಾಗೂ ಘಟನೆ ಬಗ್ಗೆ 48 ಗಂಟೆಗಳ ಒಳಗೆ ವರದಿ ನೀಡುವಂತೆಯೂ ಕೇಂದ್ರ ಚುನಾವಣಾ ಆಯೋಗ, ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗೆ ಸೂಚನೆ ನೀಡಿದೆ.

ಒಟ್ಟಾರೆ, ತೀವ್ರ ವಿರೋಧ ನಡುವೆಯೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಬಿಜೆಪಿ ಟಿಕೆಟ್​ ನೀಡಿತ್ತು. ಆದ್ರೆ ಟಿಕೆಟ್​ ಸಿಕ್ಕ ಖುಷಿಯಲ್ಲಿ ಯದ್ವಾತದ್ವಾ ಹೇಳಿಕೆ ನೀಡುವ ಮೂಲಕ ಸಂಕಷ್ಟವನ್ನು ತಾವೇ ಬರಮಾಡಿಕೊಂಡಿದ್ದಾರೆ. ಕೇಂದ್ರ ಚುನಾವಣಾ ಆಯೋಗ ಸೂಕ್ತ ಕ್ರಮಕ್ಕೆ ಮುಂದಾಗಿದ್ದು. ಶೋಭಾ ಕರಂದ್ಲಾಜೆ ಸಂಕಷ್ಟ ತಂದೊಡ್ಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಶೋಭಾಗೆ ಮುಳುವಾಗ್ತಿದೆ ಯದ್ವಾತದ್ವಾ ಹೇಳಿಕೆ; ಕೇಂದ್ರ ಚುನಾವಣಾ ಆಯೋಗದಿಂದ ಕ್ರಮಕ್ಕೆ ನಿರ್ದೇಶನ

https://newsfirstlive.com/wp-content/uploads/2024/03/SHOBHA-1.jpg

Load More