newsfirstkannada.com

×

ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್‌.. ಗವರ್ನರ್ ಆದೇಶ ಎತ್ತಿ ಹಿಡಿದ ಹೈಕೋರ್ಟ್‌; ಮುಂದೇನು?

Share :

Published September 24, 2024 at 12:24pm

Update September 24, 2024 at 12:31pm

    ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ದೊಡ್ಡ ಸಂಕಷ್ಟ

    ಮುಂದೆ ಅಧೀನ ನ್ಯಾಯಾಲಯ ತೀರ್ಪು ಘೋಷಿಸಬಹುದು

    ಸುಪ್ರೀಂ ಕೋರ್ಟ್ ಬಾಗಿಲು ತಟ್ಟಲು ಸಿದ್ಧವಾಗಿರುವ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್‌, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ಗವರ್ನರ್ ಆದೇಶವನ್ನು ಎತ್ತಿ ಹಿಡಿದಿದೆ.

ಸಿಎಂ ಸಿದ್ದರಾಮಯ್ಯ ಪರ ಹಾಗೂ ದೂರುದಾರರ ವಾದ, ಪ್ರತಿವಾದ ಆಲಿಸಿದ್ದ ಹೈಕೋರ್ಟ್‌ ಇಂದಿಗೆ ತೀರ್ಪನ್ನು ಕಾಯ್ದಿರಿಸಿತ್ತು. ಮುಡಾ ಪ್ರಕರಣದಲ್ಲಿ ಅರ್ಜಿದಾರರ ಕ್ರಮ ಸೂಕ್ತವಾಗಿದೆ. ಹೀಗಾಗಿ ಗವರ್ನರ್ ಆದೇಶವನ್ನು ಹೈಕೋರ್ಟ್‌ ಒಪ್ಪಿಕೊಂಡಿದೆ.

ಹೈಕೋರ್ಟ್‌ನ ಈ ಮಹತ್ವದ ತೀರ್ಪಿನಿಂದ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದೆ. ಸಿದ್ದರಾಮಯ್ಯ ಅವರ ಅರ್ಜಿ ವಜಾಗೊಂಡಿರುವುದರಿಂದ ಅಧೀನ ನ್ಯಾಯಾಲಯ ತೀರ್ಪು ಘೋಷಿಸಬಹುದು. ಈ ಪ್ರಕರಣದಲ್ಲಿ ಸೆಕ್ಷನ್ 17A ಅನುಮತಿ ಪಡೆಯುವುದು ಮುಖ್ಯವಾಗಿದೆ. ಸಿಎಂ ಸಿದ್ದರಾಮಯ್ಯ ಪರ ವಕೀಲರು ಇಂದು ಮಧ್ಯಾಹ್ನ 2:30ಕ್ಕೆ ಆದೇಶದ ಪ್ರತಿ ಪಡೆಯಬೇಕು. ಅದನ್ನ ಪ್ರಶ್ನಿಸಿ ಹೈಕೋರ್ಟ್‌ ವಿಭಾಗೀಯ ಪೀಠಕ್ಕೆ ಇಂದೇ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಏಕಸದಸ್ಯ ಪೀಠದ ಆದೇಶಕ್ಕೆ ತಡೆ ಕೋರುವ ಸಾಧ್ಯತೆ ಇದೆ.

ಇದನ್ನೂ ಓದಿ: ಪರ.. ವಿರುದ್ಧ.. ಏನೇ ತೀರ್ಪು ಬಂದ್ರೂ ಸಿಎಂ ಸಿದ್ದು ಸಜ್ಜು; ಅದಕ್ಕಾಗಿ 9 ರೀತಿಯಲ್ಲಿ ಸಿದ್ಧತೆ..! 

ಹೈಕೋರ್ಟ್​ನ ಈ ತೀರ್ಪು ನಿರೀಕ್ಷೆ ಮಾಡಿದ್ದ ಸಿಎಂ ಸಿದ್ದರಾಮಯ್ಯನವರು ಮುಂದಿನ ಹೋರಾಟಕ್ಕೆ ಸಜ್ಜಾಗಿದ್ದಾರೆ. ಎಲ್ಲವನ್ನೂ ಎದುರಿಸೋದಕ್ಕೆ ತಯಾರಾಗಿರುವ ಸಿದ್ದರಾಮಯ್ಯ, ಪ್ರಾಸಿಕ್ಯೂಷನ್​ ನೀಡಿದ್ದನ್ನು ಪ್ರಶ್ನಿಸಿ ಮುಂದಿನ ಹೋರಾಟ ನಡೆಸಲಿದ್ದಾರೆ. ಮುಂದಿನ ಕಾನೂನು ಹೋರಾಟಕ್ಕೂ ಈಗಾಗಲೇ ಸಿಎಂ ಚರ್ಚೆ ನಡೆಸಿದ್ದು, ಸುಪ್ರೀಂ ಕೋರ್ಟ್ ಬಾಗಿಲು ತಟ್ಟಲೂ ಸಿದ್ಧವಾಗಿದ್ದಾರೆ. ಜೊತೆಗೆ ರಾಜ್ಯಪಾಲರ ವಿರುದ್ಧವೂ ದೊಡ್ಡ ಮಟ್ಟದಲ್ಲಿ ಹೋರಾಟಕ್ಕೆ ಪ್ಲಾನ್ ಮಾಡಿದ್ದಾರೆ.

ಸಿಎಂ ಮುಂದಿನ ದಾರಿ ಏನು?

ಸಿದ್ಧತೆ 01: ನಾನು ಯಾವುದೇ ತಪ್ಪು ಮಾಡಿಲ್ಲ ಎಂಬ ಸಂದೇಶ
ಸಿದ್ಧತೆ 02: ಕಾನೂನಾತ್ಮಕವಾಗಿ ಹೋರಾಟ ನಡೆಸಲು ಸಿದ್ಧತೆ
ಸಿದ್ಧತೆ 03: ರಾಜಕೀಯವಾಗಿಯೂ ಹೋರಾಟಕ್ಕೆ ಸಿದ್ದು ಸಿದ್ಧತೆ
ಸಿದ್ಧತೆ 04: ಸುಪ್ರೀಂಕೋರ್ಟ್ ಬಾಗಿಲು ತಟ್ಟಲೂ ಸಿಎಂ ಸಿದ್ಧತೆ
ಸಿದ್ಧತೆ 05: ರಾಜ್ಯಪಾಲರ ವಿರುದ್ಧ ದೊಡ್ಡ ಮಟ್ಟದ ಹೋರಾಟ
ಸಿದ್ಧತೆ 06: ರಾಜ್ಯಾದ್ಯಂತ ಹೋರಾಟ ನಡೆಸಲು ಸಿಎಂ ಪ್ಲಾನ್
ಸಿದ್ಧತೆ 07: ಸರ್ಕಾರ ಅಸ್ಥಿರಗೊಳಿಸಲು ಷಡ್ಯಂತ್ರ ಅಂತ ಪ್ರಚಾರ
ಸಿದ್ಧತೆ 08: ಬಿಜೆಪಿ-ಜೆಡಿಎಸ್ ಷಡ್ಯಂತ್ರ ಎಂಬ ಸಂದೇಶ ರವಾನೆ
ಸಿದ್ಧತೆ 09: ರಾಷ್ಟ್ರಮಟ್ಟದಲ್ಲೂ ಹೋರಾಟವನ್ನ ನಡೆಸಲು ಸಿದ್ಧತೆ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್‌.. ಗವರ್ನರ್ ಆದೇಶ ಎತ್ತಿ ಹಿಡಿದ ಹೈಕೋರ್ಟ್‌; ಮುಂದೇನು?

https://newsfirstlive.com/wp-content/uploads/2024/08/Cm-Siddaramaiah-Governer.jpg

Load More