ಕಾಲ್ತುಳಿತ ಪ್ರಕರಣದಲ್ಲಿ ವಿರಾಟ್ ಕೊಹ್ಲಿಗೂ ಸಂಕಷ್ಟ.. ದಾಖಲಾಯ್ತು ಕೇಸ್..!

author-image
Ganesh
Updated On
ಕಾಲ್ತುಳಿತ ಪ್ರಕರಣದಲ್ಲಿ ವಿರಾಟ್ ಕೊಹ್ಲಿಗೂ ಸಂಕಷ್ಟ.. ದಾಖಲಾಯ್ತು ಕೇಸ್..!
Advertisment
  • ಚಿನ್ನಸ್ವಾಮಿ ಮೈದಾನದ ಬಳಿ ಭೀಕರ ಕಾಲ್ತುಳಿತ
  • 11 RCB ಅಭಿಮಾನಿಗಳು ಜೀವ ಕಳೆದುಕೊಂಡಿದ್ದಾರೆ
  • ಬೆನ್ನಲ್ಲೇ ದೂರು ದಾಖಲಿಸಿರುವ HM ವೆಂಕಟೇಶ್

ಬೆಂಗಳೂರು: ಚಿನ್ನಸ್ವಾಮಿ ಮೈದಾನದ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಪ್ರಕರಣದಲ್ಲಿ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ವಿರುದ್ಧವೂ ದೂರು ದಾಖಲಾಗಿದೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಹೋರಾಟಗಾರ ಹೆಚ್.ಎಂ.ವೆಂಕಟೇಶ್ ಅವರು ದೂರು ಸಲ್ಲಿಕೆ ಮಾಡಿದ್ದಾರೆ.

ಇದನ್ನೂ ಓದಿ: 2 ವರ್ಲ್ಡ್ ಕಪ್ ವಿನ್ನರ್.. IPL ಸ್ಟಾರ್ ಪ್ಲೇಯರ್‌ ಪಿಯೂಷ್ ಚಾವ್ಲಾ ನಿವೃತ್ತಿ ಘೋಷಣೆ

publive-image

ಜೂನ್ 3 ರಂದು ಐಪಿಎಲ್ ಫೈನಲ್ ಮ್ಯಾಚ್​ ನಡೆದಿತ್ತು. ಈ ಹೈ-ವೋಲ್ಟೇಜ್ ಪಂದ್ಯದಲ್ಲಿ ಆರ್​ಸಿಬಿ, ಪಂಜಾಬ್ ಕಿಂಗ್ಸ್​ ತಂಡವನ್ನು ಸೋಲಿಸಿ ಚಾಂಪಿಯನ್ ಆಗಿತ್ತು. ಪಂದ್ಯ ಗೆದ್ದ ಖುಷಿಯಲ್ಲಿ ಆರ್​ಸಿಬಿ ಆಟಗಾರ ವಿರಾಟ್ ಕೊಹ್ಲಿ ಅವರು, ನಾಳೆ ಬೆಂಗಳೂರಿನಲ್ಲಿ ಸೆಲೆಬ್ರೇಷನ್ ಮಾಡೋದಾಗಿ ಘೋಷಣೆ ಮಾಡಿದ್ದರು. ಬೆನ್ನಲ್ಲೇ ರಾಜ್ಯ ಸರ್ಕಾರದ ವತಿಯಿಂದ ಮಾರನೇಯ ದಿನ ಅಂದರೆ ಜೂನ್ 4ರ ಮಧ್ಯಾಹ್ನ ವಿಧಾನಸೌಧ ಮೆಟ್ಟಿಲುಗಳ ಮೇಲೆ ಸನ್ಮಾನ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಇಲ್ಲಿ ಆರ್​ಸಿಬಿ ತಂಡ ಹಾಗೂ ಮ್ಯಾನೇಜ್ಮೆಂಟ್​ಗೆ ಸರ್ಕಾರದ ವತಿಯಿಂದ ಸನ್ಮಾನ ಮಾಡಲಾಯಿತು.

ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂ ಆರೋಪಿಗಳಿಗೆ ನ್ಯಾಯಾಂಗ ಬಂಧನ; ಕೋರ್ಟ್ ಮಹತ್ವದ ಆದೇಶ

ಇತ್ತ ಆರ್​ಸಿಬಿ ಮ್ಯಾನೇಜ್ಮೆಂಟ್ ಹಾಗೂ ಕೆಎಸ್​ಸಿಎ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಕ್ಟರಿ ಮೆರವಣಿಗೆ ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ಆರ್​ಸಿಬಿ ಅಭಿಮಾನಿಗಳನ್ನ ಆಹ್ವಾನಿಸಿತ್ತು. ಯಾವುದೇ ಪೂರ್ವ ತಯಾರಿ ಇಲ್ಲದೇ ಕಾರ್ಯಕ್ರಮ ಆಯೋಜನೆಗೊಂಡ ಪರಿಣಾಮ ನಿರೀಕ್ಷೆಗೂ ಮೀರಿ ಅಭಿಮಾನಿಗಳು ಬಂದಿದ್ದರಿಂದ ಕಾಲ್ತುಳಿತ ಸಂಭವಿಸಿದೆ. ಇದರಿಂದ 11 ಮಂದಿಯ ಜೀವ ಹೋಗಿದೆ. ಬೆನ್ನಲ್ಲೇ ಸರ್ಕಾರ ಹಾಗೂ ಆರ್​ಸಿಬಿ, ಕೆಎಸ್​ಸಿಎ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಟ್ರೋಫಿ ಗೆಲ್ಲಿಸಿಕೊಟ್ಟ ಪಾಟೀದಾರ್ ಜರ್ನಿ ಹಿಂದೆ ತ್ಯಾಗದ ಕತೆ.. ಝೀರೋ ಟು ಹೀರೋ..!

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Advertisment