ಕಾರು-ಟ್ರಕ್​ ನಡುವೆ ಭೀಕರ ಅಪಘಾತ.. 10 ಮಂದಿ ದಾರುಣ ಸಾವು

author-image
AS Harshith
Updated On
ಕಾರು-ಟ್ರಕ್​ ನಡುವೆ ಭೀಕರ ಅಪಘಾತ.. 10 ಮಂದಿ ದಾರುಣ ಸಾವು
Advertisment
  • ಸಿಸಿಟಿವಿ ಸೆರೆಯಾಯ್ತು ಕಾರು-ಲಾರಿ ಭೀಕರ ಅಪಘಾತದ ದೃಶ್ಯ
  • ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಕಾರಿನಲ್ಲಿದ್ದ ಹತ್ತು ಮಂದಿ
  • ಕಾರು ಚಾಲಕ ಸೇರಿ ಮತ್ತೋರ್ವ ಆಸ್ಪತ್ರೆಗೆ ಸಾಗಿಸುವಾಗ ಸಾವು

ಕಾರು ಹಾಗೂ ಟ್ರಕ್​ ನಡುವೆ ಭೀಕರ ಅಪಘಾತ ಸಂಭವಿಸಿ ಹತ್ತು ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ಅಹಮದಾಬಾದ್-ವಡೋದರಾ ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ. ಘಟನೆ ವೇಳೆ ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಾರು ಚಾಲಕ ಸುರೇಂದ್ರ ಸಿಂಗ್ ರಾವತ್ ಹಾಗೂ ಇನ್ನೊಬ್ಬ ವ್ಯಕ್ತಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತ ಪಟ್ಟಿದ್ದಾರೆ. ಕಾರು ಚಾಲಕ ವೇಗವಾಗಿ ಕಾರು ಚಲಾಯಿಸಿದ್ದೇ ದುರಂತಕ್ಕೆ ಕಾರಣ ಎನ್ನಲಾಗಿದೆ.

ಸಿಸಿಟಿವಿ ದೃಶ್ಯದಲ್ಲಿ ಸೆರೆಯಾದಂತೆ ಕಾರು ಚಾಲಕ ಗಮನಿಸದೆ ವೇಗವಾಗಿ ಕಾರು ಚಲಾಯಿಸಿದ್ದಾರೆ. ಆದರೆ ಅತ್ತ ಕಡೆಯಿಂದ ಲಾರಿಯೊಂದು ಬಂದಿದೆ. ಕಾರು ವೇಗವಾಗಿ ಬಂದು ನಿಯಂತ್ರಿಸಲಾಗದೆ ಲಾರಿಗೆ ಗುದ್ದಿದೆ. ಪರಿಣಾಮ 8 ಮಮದಿ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: ಮಳೆಯಿಂದಾಗಿ 87 ಜನರು ಸಾವು, 80 ಮಂದಿಗೆ ಗಾಯ.. ವರುಣಾರ್ಭಟದಿಂದ ತತ್ತರಿಸಿದ ಪಾಕ್​

ಇನ್ನು ಈ  ಬಗ್ಗೆ ಗುಜರಾತ್​​ನ ನಾಡಿಯಾಡ್ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment