/newsfirstlive-kannada/media/post_attachments/wp-content/uploads/2025/07/Tsunami-Hits-Russia.jpg)
ರಷ್ಯಾದ ಕರಾವಳಿಯಲ್ಲಿ ಅತ್ಯಂತ ಪ್ರಬಲವಾದ ಭೂಕಂಪ ಸಂಭವಿಸಿದೆ. ಇದರಿಂದಾಗಿ ಪೆಸಿಫಿಕ್ ಸಾಗರದಲ್ಲಿ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಭೂಕಂಪವು 8.8 ತೀವ್ರತೆಯಲ್ಲಿ ಸಂಭವಿಸಿದೆ ಎಂದು ರಿಕ್ಟರ್ ಮಾಪನದಲ್ಲಿ ದಾಖಲಾಗಿದೆ.
ಈ ಭೂಕಂಪವು ರಷ್ಯಾದ ಕಮ್ಚಟ್ಕಾ ಪೆನಿನ್ಸುಲಾದಲ್ಲಿರುವ ಪೆಟ್ರೋಪಾವ್ಲೋವ್ಸ್ಕ್‌ನಿಂದ ಸುಮಾರು 136 ಕಿಲೋಮೀಟರ್ ದೂರದಲ್ಲಿ ಸಂಭವಿಸಿದೆ. ಭೂಕಂಪದ ಆಳ 19 ಕಿಲೋಮೀಟರ್ ಎಂದು ಅಂದಾಜಿಸಲಾಗಿದೆ. ಅಮೆರಿಕದ ಅಧಿಕಾರಿಗಳು ಅಲಾಸ್ಕಾದ ಭಾಗಗಳಿಗೆ ಸುನಾಮಿ ಮುನ್ನೆಚ್ಚರಿಕೆ ನೀಡಿದ್ದಾರೆ. ಜಪಾನ್‌ನ ಹವಾಮಾನ ಇಲಾಖೆಯು ಸಹ ಸುನಾಮಿ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ: ನೋಡೋಕೆ ಸಾಧು ಅಂತೆ ಕಂಡರೂ ಈತ ಅಂತಿಂಥ ಮನುಷ್ಯ ಅಲ್ಲ.. 3 ವರ್ಷದ ಬಳಿಕ ಸಿಕ್ಕಿಬಿದ್ದ..!
ಇನ್ನು, ರಷ್ಯಾದಲ್ಲಿ ಸಂಭವಿಸಿದ ಭೂಕಂಪದಿಂದ ಅಪಾರ ಹಾನಿಯಾಗಿದೆ. ಕಟ್ಟಡವೊಂದರ ಮುಂಭಾಗ ಕುಸಿದಿರುವ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ. ಸುನಾಮಿ ಎಚ್ಚರಿಕೆ ಹಿನ್ನೆಲೆಯಲ್ಲಿ ಕರಾವಳಿ ತೀರದ ಜನರಿಗೆ ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ: ಡಿಕೆಶಿ ಹೊರಗಿಟ್ಟು CM ಸಭೆ; ಸಿದ್ದು ಎದುರಲ್ಲೇ ರಾಜಣ್ಣ- ಗುಬ್ಬಿ ಶಾಸಕ ಶ್ರೀನಿವಾಸ್ ಜಟಾಪಟಿ..!
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ