/newsfirstlive-kannada/media/post_attachments/wp-content/uploads/2025/06/CBL_TIRUPATI_1.jpg)
ಚಿಕ್ಕಬಳ್ಳಾಪುರ: ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ವಾಪಸ್​ ಆಗುತ್ತಿದ್ದಾಗ ಟಿಟಿ ವಾಹನ ಭೀಕರ ಅಪಘಾತಕ್ಕೀಡಾಗಿ ರಾಜ್ಯದ ಮೂವರು ಭಕ್ತರು ಉಸಿರು ಚೆಲ್ಲಿದ್ದಾರೆ. 9 ಜನರು ಗಂಭೀರವಾಗಿದ್ದು ಇದರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಆಂಧ್ರದ ಅನ್ನಮಯ್ಯ ಜಿಲ್ಲೆಯ ಮದನಪಲ್ಲಿಯ ಕುರುಬಲಕೋಟ ಮಂಡಲಂ ಚೆನ್ನಾಮರ್ರಿ ಮಿಟ್ಟ ಬಳಿ ಈ ದುರ್ಘಟನೆ ನಡೆದಿದೆ.
ಬಾಗೇಪಲ್ಲಿ ತಾಲೂಕಿನ ಮೇಘರ್ಷ್ (17), ಚರಣ್ (17) ಹಾಗೂ ಶ್ರಾವಣಿ (28) ಜೀವ ಕಳೆದುಕೊಂಡವರು. ಘಟನೆಯಲ್ಲಿ ಇನ್ನು 9 ಜನರು ಗಂಭೀರವಾಗಿ ಗಾಯಗೊಂಡಿದ್ದು ಎಲ್ಲರನ್ನು ಮದನಪಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಮಾಹಿತಿ ತಿಳಿದು ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ರಕ್ಷಣಾ ಕಾರ್ಯ ಮಾಡಿದ್ದಾರೆ. ಸ್ಥಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಇದನ್ನೂ ಓದಿ: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ KRS.. ಬಾಗಿನ ಅರ್ಪಿಸಿ ಹೊಸ ದಾಖಲೆ ಬರೆಯಲಿರುವ ಸಿಎಂ ಸಿದ್ದರಾಮಯ್ಯ
/newsfirstlive-kannada/media/post_attachments/wp-content/uploads/2025/06/CBL_TIRUPATI_2.jpg)
ಟಿಟಿ ವಾಹನಕ್ಕೆ ಅಪರಿಚಿತ ಬೃಹತ್ ವಾಹನ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಟಿಟಿ ವಾಹನದಲ್ಲಿ ಇದ್ದವರು ಎಲ್ಲ ಚಿಕ್ಕಬಳ್ಳಾಪುರದ ಬಾಗೇಪಲ್ಲಿಯಿಂದ ತಿರುಪತಿಗೆ ತೆರಳುತ್ತಿದ್ದರು. ಅಲ್ಲಿ ದೇವರ ದರ್ಶನ ಪಡೆದುಕೊಂಡು ವಾಪಸ್ ಆಗುವಾಗ ಮಾರ್ಗ ಮಧ್ಯೆ ಟಿಟಿ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿಯಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us