ಇಂದು ಶಿವಕುಮಾರ ಸ್ವಾಮೀಜಿಯವರ 117ನೇ ಜಯಂತ್ಯೋತ್ಸವ; ಮಕ್ಕಳಿಗೆ ಶ್ರೀಗಳ ಹೆಸರು ನಾಮಕರಣ

author-image
AS Harshith
Updated On
ಇಂದು ಶಿವಕುಮಾರ ಸ್ವಾಮೀಜಿಯವರ 117ನೇ ಜಯಂತ್ಯೋತ್ಸವ; ಮಕ್ಕಳಿಗೆ ಶ್ರೀಗಳ ಹೆಸರು ನಾಮಕರಣ
Advertisment
  • ಇಂದು ಬೆಳ್ಳಿಗೆ 5 ಗಂಟೆಗೆ ಪೂಜ್ಯರ ಗದ್ದುಗೆಗೆ ವಿಶೇಷ ಪೂಜೆ
  • ಶ್ರೀ ಶಿವಕುಮಾರ ಸ್ವಾಮೀಜಿಯವರ ಪುತ್ಥಳಿ ಮೆರವಣಿಗೆ
  • 117 ಮಕ್ಕಳಿಗೆ ಶಿವಕುಮಾರ ಸ್ವಾಮೀಜಿಯವರ ಹೆಸರು ನಾಮಕರಣ

ಸಿದ್ದಗಂಗಾ ಮಠದ ಶತಾಯುಷಿ ಶಿವೈಕ್ಯ ಶಿವಕುಮಾರ ಶ್ರೀಗಳ 117ನೇ ಜಯಂತೋತ್ಸವ ಆಚರಣೆಗೆ ಸಿದ್ದಗಂಗಾ ಮಠ ಸಿದ್ದವಾಗಿದೆ. ಇಂದು ಬೆಳಗ್ಗೆಯಿಂದಲೇ ವಿವಿಧ ಪೂಜಾ ಕೈಂಕರ್ಯಗಳು ಆರಂಭವಾಗಿವೆ. ಶ್ರೀಗಳ ಜಯಂತೋತ್ಸವದ ಹಿನ್ನೆಲೆ ಮಠಕ್ಕ ಭಕ್ತ ಸಾಗರವೇ ಹರಿದು ಬರುತ್ತಿದೆ.

ಕಲ್ಪತರು ನಾಡಿನ ಸುಪ್ರಸಿದ್ಧ ಪುಣ್ಯ ಕ್ಷೇತ್ರ ಸಿದ್ದಗಂಗಾ ಮಠದಲ್ಲಿ ಸಂಭ್ರಮ ಸಡಗರ ಮನೆ ಮಾಡಿದೆ. ಈ ಸಂಭ್ರಮಕ್ಕೆ ಕಾರಣ ನಡೆದಾಡುವ ದೇವರು, ಶಿವೈಕ್ಯ ಡಾ.ಶ್ರೀ ಶಿವಕುಮಾರ ಶ್ರೀಗಳ ಜಯಂತೋತ್ಸವ ಹಾಗೂ ಗುರುವಂದನ ಕಾರ್ಯಕ್ರಮ. ಇದು ಶ್ರೀ ಶಿವಕುಮಾರ ಸ್ವಾಮೀಜಿಗಳಿಲ್ಲದೇ ಶ್ರೀಮಠದಲ್ಲಿ ನಡೆಯುತ್ತಿರುವ ಶ್ರೀಗಳ 6ನೇ ಜನ್ಮದಿನವಾಗಿದೆ.

publive-image

ಶ್ರೀಗಳ ಜಯಂತ್ಯೋತ್ಸವ ಹಿನ್ನೆಲೆ ಮಠದಲ್ಲಿ ವಿಶೇಷ ಕಾರ್ಯಕ್ರಮ

ನಡೆದಾಡುವ ದೇವರು, ಪರಮಪೂಜ್ಯ ಶಿವಕುಮಾರ ಸ್ವಾಮೀಜಿಯವರ 117ನೇ ಜಯಂತ್ಯೋತ್ಸವ ಹಿನ್ನೆಲೆ ಸಿದ್ದಗಂಗಾ ಮಠದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ.

ಬೆ. 11 ಗಂಟೆಗೆ ಮಠದಲ್ಲಿ ವೇದಿಕೆ ಕಾರ್ಯಕ್ರಮ ಆರಂಭ

ಇಂದು ಬೆಳಗಿನ ಜಾವದಿಂದಲೇ ಶ್ರೀಮಠದಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ಆರಂಭವಾಗಿವೆ.. ಬೆಳ್ಳಿಗೆ 5 ಗಂಟೆಯಿಂದಲೇ ಪೂಜ್ಯರ ಗದ್ದುಗೆಗೆ ವಿಶೇಷ ಪೂಜೆ ನೆರವೇರಿದೆ.. ಬಳಿಕ ಶಿವೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಯವರ ಪುತ್ತಳಿ ಮೆರವಣಿಗೆ ನಡೆಯಲಿದೆ.. ಇನ್ನು ಬೆಳಗ್ಗೆ 11 ಗಂಟೆಗೆ ವೇದಿಕೆ ಕಾರ್ಯಕ್ರಮ ಆರಂಭವಾಗಲಿದೆ.. ಈ ಬಾರಿ ವಿಶೇಷವಾಗಿ ಪತಾಂಜಲಿ ಖ್ಯಾತಿಯ ಬಾಬಾ ರಾಮದೇವ್, ಸುತ್ತೂರು ಶ್ರೀಗಳು, ಮುಂಡರಗಿಯ ಅನ್ನದಾನೇಶ್ವರ ಶ್ರೀಗಳು, ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಶ್ರೀಗಳು, ಗದಗಿನ ವೀರಶೈವ ಪುಣ್ಯಾಶ್ರಮದ ಅಧ್ಯಕ್ಷರಾಗಿರುವ ಕಲ್ಲಯ್ಯ ಅಜ್ಜರವರು ಸೇರಿದಂತೆ, ಹಲವು ಪರಮ ಪೂಜ್ಯರು ಜಯಂತ್ಯೋತ್ಸವದಲ್ಲಿ ಭಾಗವಹಿಸಲಿದ್ದಾರೆ.

publive-image

ಇದನ್ನೂ ಓದಿ:ಲೋಕಸಭಾ ಚುನಾವಣೆಗೂ QR ಕೋಡ್ ಎಂಟ್ರಿ.. ಇದರಿಂದಾಗೋ ಉಪಯೋಗ ಏನು?

ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿ ಇರೋ ಹಿನ್ನೆಲೆ ರಾಜಕಾರಣಿಗಳಿಗೆ ಜಯಂತ್ಯೋತ್ಸವಕ್ಕೆ ಆಹ್ವಾನ ನೀಡಿಲ್ಲ.. ಅಲ್ಲದೇ ಎಸ್ಎಸ್ಎಲ್​ಸಿ ಪರೀಕ್ಷೆ ಇರುವ‌ ಹಿನ್ನೆಲೆ ಆದಷ್ಟು ಸರಳವಾಗಿ ಕಾರ್ಯಕ್ರಮ ಆಚರಣೆ ಮಾಡಲು ತಯಾರಿ ಮಾಡಿಕೊಳ್ಳಲಾಗಿದೆ.. ಇನ್ನು ಶ್ರೀಗಳ ಜಯಂತ್ಯೋತ್ಸವದ ಹಿನ್ನಲೆ‌, ಶ್ರೀ ಮಠದ ಆವರಣದಲ್ಲಿ ಪ್ರತಿ ವರ್ಷದಂತೆ 117 ಮಕ್ಕಳಿಗೆ ಶಿವಕುಮಾರ ಸ್ವಾಮೀಜಿಯವರ ಹೆಸರು ನಾಮಕರಣ ಮಾಡುವ ಕಾರ್ಯಕ್ರಮವನ್ನು ಅನ್ನದಾನ ಟ್ರಸ್ಟ್ ಆಯೋಜನೆ ಮಾಡಿದೆ.

ಒಟ್ನಲ್ಲಿ ಇಂದು ನಡೆಯಲಿರುವ ಶ್ರೀ ಶಿವಕುಮಾರ ಶ್ರೀಗಳ ಜನ್ಮದಿನೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ಕೋಟಿ ಕೋಟಿ ಭಕ್ತ ಮನಗಳು ಕಾತುರವಾಗಿವೆ.. ಶ್ರೀಗಳ ಗದ್ದುಗೆ ದರ್ಶನ ಪಡೆದು ಶ್ರೀಗಳ ಆಶೀರ್ವಾದ ಬೇಡಲು ಭಕ್ತರು ತುದಿಗಾಲಲ್ಲಿ ನಿಂತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment