newsfirstkannada.com

ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದಿದ್ದ ಅಧಿಕಾರಿಗಳ ಅಮಾನತು..!?

Share :

Published August 24, 2023 at 11:38am

    ಗುರುಪ್ರಸಾದ್, ಸುದರ್ಶನ್​ರನ್ನು ಬಂಧಿಸಿರುವ ಸಿಐಡಿ

    ನ್ಯಾಯಾಂಗ ಬಂಧನದಲ್ಲಿರುವ ಇಬ್ಬರು ಅಧಿಕಾರಿಗಳು

    ಶೀಘ್ರದಲ್ಲೇ ಕೃಷಿ ಇಲಾಖೆ ಆಯುಕ್ತರಿಂದ ಅಮಾನತು ಶಿಕ್ಷೆ

ಬೆಂಗಳೂರು: ಕೃಷಿ ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು ಬರೆದಿದ್ದ ಮೈಸೂರು ಕೃಷಿ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲು ನಿರ್ಧರಿಸಲಾಗಿದೆ.

ಮಂಡ್ಯದ ಕೃಷಿ ಅಧಿಕಾರಿಗಳ ಹೆಸರಿನಲ್ಲಿ ಸಚಿವರ ವಿರುದ್ಧ ಮೈಸೂರು ಕೃಷಿ ಅಧಿಕಾರಿಗಳು ಪತ್ರ ಬರೆದಿದ್ದರು. ಮೈಸೂರಿನ ಕೃಷಿ ಎಡಿ ಗುರುಪ್ರಸಾದ್ ಹಾಗೂ ಕೃಷಿ ಅಧಿಕಾರಿ ಸುದರ್ಶನ್‌ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಇದೀಗ ಕಾನೂನು‌ ನಿಯಮದ ಪ್ರಕಾರವೇ ಬಂಧಿತ ಅಧಿಕಾರಿಗಳ ಸಸ್ಪೆಂಡ್​ ಮಾಡಲು ಕೃಷಿ ಆಯುಕ್ತರು ಮುಂದಾಗಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ಇಂದು ಅಥವಾ ನಾಳೆ ಬಂಧಿತ ಕೃಷಿ ಅಧಿಕಾರಿಗಳನ್ನು ಅಮಾನತು ಮಾಡುವ ಸಾಧ್ಯತೆ ಇದೆ. ನಿಯಮದ ಪ್ರಕಾರವೇ ಬಂಧಿತ ಅಧಿಕಾರಿಗಳನ್ನು ಅಮಾನತು ಮಾಡಲಾಗುತ್ತದೆ. ಸದ್ಯ ಇಬ್ಬರು ಅಧಿಕಾರಿಗಳು ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ನ್ಯಾಯಾಂಗ ಬಂಧನದಲ್ಲಿರುವ ಕುರಿತು ಮೈಸೂರು ಜಂಟಿ ಕೃಷಿ ನಿರ್ದೇಶಕರಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಮಾತ್ರವಲ್ಲ, ಬಂಧನದ ಬಗ್ಗೆ ಮೇಲಾಧಿಕಾರಿಗಳಿಗೆ ಮೈಸೂರು ಜಂಟಿ ಕೃಷಿ ನಿರ್ದೇಶಕ ಪತ್ರ ಬರೆದಿದ್ದಾರೆ. ಕೃಷಿ ಇಲಾಖೆಯ ಆಯುಕ್ತರಿಗೆ ಪ್ರಕರಣ ಸಂಬಂಧ ಪತ್ರದ ಮೂಲಕ ಮಾಹಿತಿ ನೀಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದಿದ್ದ ಅಧಿಕಾರಿಗಳ ಅಮಾನತು..!?

https://newsfirstlive.com/wp-content/uploads/2023/08/CHALUVARAYSWAMY.jpg

Load More